AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊನೆಯ ವಿಶ್ವಕಪ್’: ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಎಬಿ ಡಿವಿಲಿಯರ್ಸ್

ODI World Cup 2023: ವಿಶ್ವಕಪ್ ಆರಂಭಕ್ಕೂ ಮುನ್ನ ಕೊಹ್ಲಿಯ ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿರುವ ಡಿ ವಿಲಿಯರ್ಸ್​ ಈ ಬಾರಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದರೆ, ವಿರಾಟ್ ಏಕದಿನ ಮತ್ತು ಟಿ20 ಎರಡೂ ಮಾದರಿಗಳಿಗೆ ವಿದಾಯ ಹೇಳಬಹುದು ಎಂದಿದ್ದಾರೆ.

‘ಕೊನೆಯ ವಿಶ್ವಕಪ್': ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಎಬಿ ಡಿವಿಲಿಯರ್ಸ್
ಎಬಿ ಡಿ ವಿಲಿಯರ್ಸ್​, ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:Sep 27, 2023 | 7:47 AM

Share

ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಎಲ್ಲಾ ಮಾದರಿಯಲ್ಲೂ ತನ್ನ ಬ್ಯಾಟ್​ನಿಂದ ಹೆಚ್ಚು ಸದ್ದು ಮಾಡುತ್ತಿರುವ ಏಕೈಕ ಆಟಗಾರ ವಿರಾಟ್ ಕೊಹ್ಲಿ (Virat Kohli). ಕೊಹ್ಲಿ ಟೆಸ್ಟ್, ಏಕದಿನ ಮತ್ತು ಟಿ20 ಎಲ್ಲಾ ಮೂರು ಮಾದರಿಗಳಲ್ಲಿ ಟೀಂ ಇಂಡಿಯಾದ ಖಾಯಂ ಸದಸ್ಯನೆನಿಸಿಕೊಂಡಿದ್ದಾರೆ. ಸದ್ಯ ವಿಶ್ವಕಪ್ (ODI World Cup 2023) ತಯಾರಿಯಲ್ಲಿ ನಿರತರಾಗಿರುವ ವಿರಾಟ್​​ ಭಾರತವನ್ನು ಮತ್ತೊಮ್ಮೆ ವಿಶ್ವ ಚಾಂಪಿಯನ್ ಮಾಡುವ ಇರಾದೆಯಲ್ಲಿದ್ದಾರೆ. ಕೊಹ್ಲಿ ಆಟವನ್ನು ನೋಡಿದರೆ ಅವರು ಸದ್ಯಕ್ಕೆ ಕ್ರಿಕೆಟ್​ಗೆ ವಿದಾಯ ಹೇಳುವ ಸೂಚನೆಗಳಿಲ್ಲ ಎಂಬುದು ಸ್ಪಷ್ಟವಾಗಿದೆ. ಆದರೆ ಕೊಹ್ಲಿಯ ಆಪ್ತ ಎನಿಸಿಕೊಂಡಿರುವ ಮಿ.360 ಖ್ಯಾತಿಯ ಎಬಿ ಡಿ ವಿಲಿಯರ್ಸ್ (AB De Villiers)​ ಅವರು ಕೊಹ್ಲಿ ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಡಿವಿಲಿಯರ್ಸ್ ಹೇಳಿದ್ದೇನು?

ವಿಶ್ವಕಪ್ ಆರಂಭಕ್ಕೂ ಮುನ್ನ ಕೊಹ್ಲಿಯ ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿರುವ ಡಿ ವಿಲಿಯರ್ಸ್​ ಈ ಬಾರಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದರೆ, ವಿರಾಟ್ ಏಕದಿನ ಮತ್ತು ಟಿ20 ಎರಡೂ ಮಾದರಿಗಳಿಗೆ ವಿದಾಯ ಹೇಳಬಹುದು ಎಂದಿದ್ದಾರೆ. 2027 ರಲ್ಲಿ ನಡೆಯಲಿರುವ ವಿಶ್ವಕಪ್‌ಗಾಗಿ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾಕ್ಕೆ ಬರಲು ಬಯಸುತ್ತಾರೆ ಎಂದು ನನಗೆ ತಿಳಿದಿದೆ. ಆದರೆ ಇದು ಸಂಭವಿಸುತ್ತದೆಯೋ ಇಲ್ಲವೋ ಎಂದು ಹೇಳುವುದು ಕಷ್ಟ. ಏಕೆಂದರೆ 2027 ಇನ್ನೂ ದೂರವಿದೆ. ಸದ್ಯಕ್ಕೆ ವಿರಾಟ್ 2023ರ ವಿಶ್ವಕಪ್‌ನತ್ತ ಗಮನ ಹರಿಸಬೇಕು. ನೀವು ಕೊಹ್ಲಿಯನ್ನು ಈ ಬಗ್ಗೆ ಕೇಳಿದರೆ ಅವರೂ ಕೂಡ ಇದನ್ನೇ ಹೇಳುತ್ತಾರೆ.

ಕಿಂಗ್ ಕೊಹ್ಲಿ ಈ ಕ್ರಮಾಂಕದಲ್ಲಿ ಬ್ಯಾಟ್ ಬೀಸುವುದೇ ಸೂಕ್ತ ಎಂದ ಎಬಿ ಡಿ ವಿಲಿಯರ್ಸ್

ಟೀಂ ಇಂಡಿಯಾ ವಿಶ್ವಕಪ್ ಗೆದ್ದರೆ, ವಿರಾಟ್‌ಗೆ ಏಕದಿನ ಮತ್ತು ಟಿ20 ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ ಎಂದು ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ. ಆದಾಗ್ಯೂ, ವಿರಾಟ್ ಕೊಹ್ಲಿ ಮುಂದಿನ ಕೆಲವು ವರ್ಷಗಳವರೆಗೆ ಟೆಸ್ಟ್ ಕ್ರಿಕೆಟ್ ಮತ್ತು ಐಪಿಎಲ್ ಆಡಬಹುದು ಎಂದು ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿಗೆ ಇನ್ನು ಆ ಶಕ್ತಿ ಇದೆ

2023 ರ ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ನಿವೃತ್ತಿ ಹೊಂದಬಹುದು ಎಂದು ಡಿವಿಲಿಯರ್ಸ್ ಪ್ರಸ್ತುತ ಊಹಿಸುತ್ತಿದ್ದಾರೆ. ಆದರೆ ಕ್ರಿಕೆಟ್ ಹೊರೆಯನ್ನು ಸರಿಯಾಗಿ ನಿರ್ವಹಿಸಿದರೆ ಕೊಹ್ಲಿ 2027 ರ ವಿಶ್ವಕಪ್ ವರೆಗೆ ಸುಲಭವಾಗಿ ತಂಡದಲ್ಲಿ ಆಡಬಹುದು. ಪ್ರಸ್ತುತ ವಿರಾಟ್ ಕೊಹ್ಲಿ ಅವರ ಫಿಟ್ನೆಸ್ ಅದ್ಭುತವಾಗಿದೆ. ಸದ್ಯ ಅವರಿಗೆ 38 ವರ್ಷ. ಆದರೆ ಅವರು 40 ವರ್ಷ ವಯಸ್ಸಿನವರೆಗೆ ಸುಲಭವಾಗಿ ಕ್ರಿಕೆಟ್ ಆಡುವುದು ಖಚಿತ. ಸದ್ಯ ಧೋನಿಗೆ 40 ವರ್ಷ ವಯಸ್ಸಾಗಿದ್ದು, ಐಪಿಎಲ್‌ನಲ್ಲಿ ಇನ್ನೂ ಸಕ್ರಿಯರಾಗಿದ್ದಾರೆ. ವಿರಾಟ್ ಕೊಹ್ಲಿ ಅವರ ಹೊರೆ ನಿರ್ವಹಣೆಯನ್ನು ಸರಿಯಾಗಿ ನಿರ್ವಹಿಸಿದರೆ, ಅವರು 3 ರಿಂದ 4 ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಅನ್ನು ಸುಲಭವಾಗಿ ಆಡಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:44 am, Wed, 27 September 23

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?