AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಬಾಂಗ್ಲಾದೇಶಕ್ಕೆ ಸುಲಭ ಜಯ; ಮೊದಲ ಅಭ್ಯಾಸ ಪಂದ್ಯ ಸೋತ ಲಂಕಾ

ODI World Cup 2023: ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಇನ್ನು 48 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್​ಗಳಿಂದ ಸೋಲಿಸಿದೆ. ಆದ್ದರಿಂದ ಈ ಬಾರಿಯ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡವನ್ನು ಕಡಿಮೆ ಅಂದಾಜು ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಶಕೀಬ್ ಪಡೆ ಇತರೆ ತಂಡಗಳಿಗೆ ನೀಡಿದೆ.

ODI World Cup 2023: ಬಾಂಗ್ಲಾದೇಶಕ್ಕೆ ಸುಲಭ ಜಯ; ಮೊದಲ ಅಭ್ಯಾಸ ಪಂದ್ಯ ಸೋತ ಲಂಕಾ
ಬಾಂಗ್ಲಾದೇಶ ತಂಡ
ಪೃಥ್ವಿಶಂಕರ
|

Updated on:Sep 30, 2023 | 7:03 AM

Share

ಪ್ರಮುಖ ಟೂರ್ನಿಗಳಲ್ಲಿ ಬಾಂಗ್ಲಾದೇಶ ಹಲವು ಬಾರಿ ದಿಗ್ಗಜ ತಂಡಗಳ ಕನಸುಗಳನ್ನು ಭಗ್ನಗೊಳಿಸಿದೆ. ಪ್ರಶಸ್ತಿ ತಲುಪಲು ಸಾಧ್ಯವಾಗದಿದ್ದರೂ ಯಾವುದೇ ತಂಡವನ್ನು ಸೋಲಿಸುವ ಸಾಮರ್ಥ್ಯ ಬಾಂಗ್ಲಾದೇಶ ತಂಡಕ್ಕಿದೆ. ಕಳೆದ ಕೆಲವು ವರ್ಷಗಳಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಹಲವು ಧನಾತ್ಮಕ ಬದಲಾವಣೆಗಳನ್ನು ಕಂಡಿದೆ. ಏಷ್ಯಾಕಪ್​ನಲ್ಲೂ (Asia Cup 2023) ಬಾಂಗ್ಲಾದೇಶ ಭಾರತವನ್ನು ಸೋಲಿಸಿದ್ದನ್ನು ಮರೆಯುವಂತಿಲ್ಲ. ಇದೀಗ ವಿಶ್ವಕಪ್ (ODI World Cup 2023) ಟೂರ್ನಿಗೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಮತ್ತೊಮ್ಮೆ ಇದೇ ರೀತಿಯ ಪ್ರದರ್ಶನ ನೀಡಿದೆ. ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು (Sri lanka vs Bangladesh) ಇನ್ನು 48 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್​ಗಳಿಂದ ಸೋಲಿಸಿದೆ. ಆದ್ದರಿಂದ ಈ ಬಾರಿಯ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡವನ್ನು ಕಡಿಮೆ ಅಂದಾಜು ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಶಕೀಬ್ ಪಡೆ ಇತರೆ ತಂಡಗಳಿಗೆ ನೀಡಿದೆ.

ಶತಕದ ಜೊತೆಯಾಟ

ಈ ಪಂದ್ಯದಲ್ಲಿ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಪಾತುಮ್ ನಿಸ್ಸಾಂಕ ಹಾಗೂ ಕುಸಾಲ್ ಪೆರೇರಾ ಶತಕದ ಜೊತೆಯಾಟ ನೀಡಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಈ ವೇಳೆ ನಿಸ್ಸಾಂಕ 68 ರನ್​ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರೆ, ಪೆರೇರಾ 34 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ODI World Cup 2023: ಬಾಂಗ್ಲಾದೇಶ ತಂಡಕ್ಕೆ ಬಿಗ್ ಶಾಕ್; ನಾಯಕನಿಗೆ ಇಂಜುರಿ..!

ಆದರೆ ತಂಡದ ಮಧ್ಯಮ ಕ್ರಮಾಂಕ ಮತ್ತೊಮ್ಮೆ ವಿಫಲವಾಯಿತು. ಇನ್ನು ಕೆಳಕ್ರಮಾಂಕದಲ್ಲಿ ಬಂದ ತಂಡದ ಆಲ್​ರೌಂಡರ್ ಧನಂಜಯ ಡಿ ಸಿಲ್ವಾ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು 200ರ ಗಡಿ ದಾಟಿಸಿದರು. ಅಂತಿಮವಾಗಿ ಲಂಕಾ ತಂಡ 50ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 263 ರನ್ ಕಲೆಹಾಕಿತು.

ಬಾಂಗ್ಲಾ ಆರಂಭಿಕರ ಅಬ್ಬರ

ಶ್ರೀಲಂಕಾ ನೀಡಿದ 263 ರನ್‌ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ಪರ ತಂಜಿದ್ ಹಸನ್ ಮತ್ತು ಲಿಟ್ಟನ್ ದಾಸ್ ಮೈದಾನಕ್ಕಿಳಿದರು. ಈ ಜೋಡಿ ಶ್ರೀಲಂಕಾ ಬೌಲರ್‌ಗಳ ಬೆವರಿಳಿಸಿ, ಇವರಿಬ್ಬರು ಮೊದಲ ವಿಕೆಟ್‌ಗೆ 131 ರನ್‌ಗಳ ಜೊತೆಯಾಟ ನೀಡಿದರು. ಲಿಟ್ಟನ್ ದಾಸ್ 61 ರನ್ ಗಳಿಸಿ ಔಟಾದ ನಂತರ, ತಂಜಿದ್ ಮುನ್ನಡೆ ಕಾಯ್ದುಕೊಂಡರು. 88 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 84 ರನ್ ಸಿಡಿಸಿದರು. ಅವರಿಗೆ ಮೆಹದಿ ಹಸನ್ ಉತ್ತಮ ಬೆಂಬಲ ನೀಡಿದರು. ಆದರೆ ತೋಹಿದ್ ಹೃದಯ್ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಮುಶ್ಫಿಕರ್ ರಹೀಮ್ ಮತ್ತು ಮೆಹದಿ ಹಸನ್ ಬಾಂಗ್ಲಾದೇಶಕ್ಕೆ ಜಯ ತಂದುಕೊಟ್ಟರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:54 am, Sat, 30 September 23

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ