ಪ್ರಮುಖ ಟೂರ್ನಿಗಳಲ್ಲಿ ಬಾಂಗ್ಲಾದೇಶ ಹಲವು ಬಾರಿ ದಿಗ್ಗಜ ತಂಡಗಳ ಕನಸುಗಳನ್ನು ಭಗ್ನಗೊಳಿಸಿದೆ. ಪ್ರಶಸ್ತಿ ತಲುಪಲು ಸಾಧ್ಯವಾಗದಿದ್ದರೂ ಯಾವುದೇ ತಂಡವನ್ನು ಸೋಲಿಸುವ ಸಾಮರ್ಥ್ಯ ಬಾಂಗ್ಲಾದೇಶ ತಂಡಕ್ಕಿದೆ. ಕಳೆದ ಕೆಲವು ವರ್ಷಗಳಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಹಲವು ಧನಾತ್ಮಕ ಬದಲಾವಣೆಗಳನ್ನು ಕಂಡಿದೆ. ಏಷ್ಯಾಕಪ್ನಲ್ಲೂ (Asia Cup 2023) ಬಾಂಗ್ಲಾದೇಶ ಭಾರತವನ್ನು ಸೋಲಿಸಿದ್ದನ್ನು ಮರೆಯುವಂತಿಲ್ಲ. ಇದೀಗ ವಿಶ್ವಕಪ್ (ODI World Cup 2023) ಟೂರ್ನಿಗೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಮತ್ತೊಮ್ಮೆ ಇದೇ ರೀತಿಯ ಪ್ರದರ್ಶನ ನೀಡಿದೆ. ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು (Sri lanka vs Bangladesh) ಇನ್ನು 48 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್ಗಳಿಂದ ಸೋಲಿಸಿದೆ. ಆದ್ದರಿಂದ ಈ ಬಾರಿಯ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡವನ್ನು ಕಡಿಮೆ ಅಂದಾಜು ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಶಕೀಬ್ ಪಡೆ ಇತರೆ ತಂಡಗಳಿಗೆ ನೀಡಿದೆ.
ಈ ಪಂದ್ಯದಲ್ಲಿ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಪಾತುಮ್ ನಿಸ್ಸಾಂಕ ಹಾಗೂ ಕುಸಾಲ್ ಪೆರೇರಾ ಶತಕದ ಜೊತೆಯಾಟ ನೀಡಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಈ ವೇಳೆ ನಿಸ್ಸಾಂಕ 68 ರನ್‌ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರೆ, ಪೆರೇರಾ 34 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು.
ODI World Cup 2023: ಬಾಂಗ್ಲಾದೇಶ ತಂಡಕ್ಕೆ ಬಿಗ್ ಶಾಕ್; ನಾಯಕನಿಗೆ ಇಂಜುರಿ..!
ಆದರೆ ತಂಡದ ಮಧ್ಯಮ ಕ್ರಮಾಂಕ ಮತ್ತೊಮ್ಮೆ ವಿಫಲವಾಯಿತು. ಇನ್ನು ಕೆಳಕ್ರಮಾಂಕದಲ್ಲಿ ಬಂದ ತಂಡದ ಆಲ್ರೌಂಡರ್ ಧನಂಜಯ ಡಿ ಸಿಲ್ವಾ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು 200ರ ಗಡಿ ದಾಟಿಸಿದರು. ಅಂತಿಮವಾಗಿ ಲಂಕಾ ತಂಡ 50ನೇ ಓವರ್ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 263 ರನ್ ಕಲೆಹಾಕಿತು.
Bangladesh have romped home to a dominant win against Sri Lanka in the warm-up game in Guwahati 🤩#BANvSL | #CWC23 | 📝: https://t.co/t6rAlF0p5x pic.twitter.com/mA7PdnIit9
— ICC Cricket World Cup (@cricketworldcup) September 29, 2023
ಶ್ರೀಲಂಕಾ ನೀಡಿದ 263 ರನ್‌ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ಪರ ತಂಜಿದ್ ಹಸನ್ ಮತ್ತು ಲಿಟ್ಟನ್ ದಾಸ್ ಮೈದಾನಕ್ಕಿಳಿದರು. ಈ ಜೋಡಿ ಶ್ರೀಲಂಕಾ ಬೌಲರ್‌ಗಳ ಬೆವರಿಳಿಸಿ, ಇವರಿಬ್ಬರು ಮೊದಲ ವಿಕೆಟ್‌ಗೆ 131 ರನ್‌ಗಳ ಜೊತೆಯಾಟ ನೀಡಿದರು. ಲಿಟ್ಟನ್ ದಾಸ್ 61 ರನ್ ಗಳಿಸಿ ಔಟಾದ ನಂತರ, ತಂಜಿದ್ ಮುನ್ನಡೆ ಕಾಯ್ದುಕೊಂಡರು. 88 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 84 ರನ್ ಸಿಡಿಸಿದರು. ಅವರಿಗೆ ಮೆಹದಿ ಹಸನ್ ಉತ್ತಮ ಬೆಂಬಲ ನೀಡಿದರು. ಆದರೆ ತೋಹಿದ್ ಹೃದಯ್ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಮುಶ್ಫಿಕರ್ ರಹೀಮ್ ಮತ್ತು ಮೆಹದಿ ಹಸನ್ ಬಾಂಗ್ಲಾದೇಶಕ್ಕೆ ಜಯ ತಂದುಕೊಟ್ಟರು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:54 am, Sat, 30 September 23