ಬಾಂಗ್ಲಾ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ? ಶಮಿ- ಸೂರ್ಯನಿಗೆ ಅವಕಾಶ?
IND vs BAN Probable Playing XI: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸೆಮಿಫೈನಲ್ ಹಾದಿ ಇನ್ನಷ್ಟು ಸುಲಭವಾಗಲಿದೆ. ಆದರೆ ಈ ಪಂದ್ಯದಲ್ಲಿ ಬೆಂಚ್ ಮೇಲೆ ಕುಳಿತ ಆಟಗಾರರಿಗೆ ರೋಹಿತ್ ಅವಕಾಶ ನೀಡುತ್ತಾರಾ ಎಂಬುದು ಪ್ರಶ್ನೆಯಾಗಿದೆ.
ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ಟೀಂ ಇಂಡಿಯಾದ ಇದುವರೆಗಿನ ಪಯಣ ಅದ್ಭುತವಾಗಿದೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಏಕಪಕ್ಷೀಯವಾಗಿ ಸೋಲಿಸಿತ್ತು. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿತು. ಈ ಎರಡೂ ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಏಕಪಕ್ಷೀಯ ಜಯ ಸಾಧಿಸಿತ್ತು. ಇದೀಗ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು (India vs Bangladesh) ಎದುರಿಸುತ್ತಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಗೆದ್ದರೆ ಸೆಮಿಫೈನಲ್ ಹಾದಿ ಇನ್ನಷ್ಟು ಸುಲಭವಾಗಲಿದೆ. ಆದರೆ ಈ ಪಂದ್ಯದಲ್ಲಿ ಬೆಂಚ್ ಮೇಲೆ ಕುಳಿತ ಆಟಗಾರರಿಗೆ ರೋಹಿತ್ (Rohit Sharma) ಅವಕಾಶ ನೀಡುತ್ತಾರಾ ಎಂಬುದು ಪ್ರಶ್ನೆಯಾಗಿದೆ.
ಮೊದಲ ಮೂರು ಪಂದ್ಯಗಳಲ್ಲಿ ಟೀಂ ಇಂಡಿಯಾ ತನ್ನ ಅತ್ಯುತ್ತಮ ಆಡುವ ಹನ್ನೊಂದರ ಬಳಗವನ್ನು ಕಣಕ್ಕಿಳಿಸಿತ್ತು. ಇದೀಗ ಬಾಂಗ್ಲಾದೇಶ ವಿರುದ್ಧದ ನಾಲ್ಕನೇ ಪಂದ್ಯದಲ್ಲಿ ರೋಹಿತ್, ತಂಡದ ಉಳಿದ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ. ಏಕೆಂದರೆ ಬಾಂಗ್ಲಾದೇಶ ಅಷ್ಟೊಂದು ಬಲಿಷ್ಠ ತಂಡವಲ್ಲ. ಸಹಜವಾಗಿಯೇ ಈ ತಂಡ ಭಾರತವನ್ನು ಈ ಮೊದಲು ಸೋಲಿಸಿದೆ. ಆದರೆ ಭಾರತದಲ್ಲಿ ಈಗಿರುವ ಬಲಿಷ್ಠ ಟೀಂ ಇಂಡಿಯಾವನ್ನು ಸೋಲಿಸುವುದು ಬಾಂಗ್ಲಾದೇಶಕ್ಕೆ ಅಸಾಧ್ಯವಾಗಿದೆ.
ಭಾರತದ ವಿರುದ್ಧ ಹೀನಾಯ ಸೋಲಿನ ಹತಾಶೆ; ಐಸಿಸಿಗೆ ದೂರು ನೀಡಿದ ಪಾಕ್ ಕ್ರಿಕೆಟ್ ಮಂಡಳಿ
ಶಮಿ-ಸೂರ್ಯಕುಮಾರ್ಗೆ ಅವಕಾಶ ಸಿಗುತ್ತಾ?
ಈ ಪಂದ್ಯದಲ್ಲಿ ರೋಹಿತ್ ತಮ್ಮ ತಂಡದಲ್ಲಿ ಎರಡು ಬದಲಾವಣೆ ಮಾಎಉವ ಸಾಧ್ಯತೆಗಳಿವೆ. ಮೊಹಮ್ಮದ್ ಶಮಿ ಈ ವಿಶ್ವಕಪ್‌ನಲ್ಲಿ ಇದುವರೆಗೆ ಒಂದೇ ಒಂದು ಪಂದ್ಯವನ್ನು ಆಡಿಲ್ಲ. ಪುಣೆಯಲ್ಲಿ ಬಾಂಗ್ಲಾದೇಶ ವಿರುದ್ಧ ಅವರಿಗೆ ಅವಕಾಶ ಸಿಗಬಹುದು. ಶಾರ್ದೂಲ್ ಠಾಕೂರ್ ಬದಲಿಗೆ ಅವರು ತಂಡಕ್ಕೆ ಆಯ್ಕೆಯಾಗಬಹುದು. ಅದೇನೇ ಇರಲಿ, ರೋಹಿತ್ ಇನ್ನೂ ಠಾಕೂರ್ ಅವರನ್ನು ಸಂಪೂರ್ಣವಾಗಿ ಬಳಸಿಕೊಂಡಿಲ್ಲ. ಶಮಿಗೆ ಅವಕಾಶ ಸಿಕ್ಕರೆ ಅವರೂ ಕೂಡ ಲಯಕ್ಕೆ ಬರಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ದೊಡ್ಡ ಪಂದ್ಯದಲ್ಲಿ ಅಗತ್ಯವಿದ್ದರೆ, ಮೈದಾನಕ್ಕೆ ಬಂದು ಪೂರ್ಣ ಲಯವನ್ನು ಮರಳಿ ಪಡೆಯುವುದು ಸುಲಭವಲ್ಲ.
ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಬದಲಿಗೆ ಸೂರ್ಯಕುಮಾರ್ ಯಾದವ್‌ಗೆ ಬ್ಯಾಟಿಂಗ್‌ನಲ್ಲಿ ಅವಕಾಶ ಸಿಗಬಹುದು. ಪಾಕಿಸ್ತಾನ ವಿರುದ್ಧದ ಕೊನೆಯ ಪಂದ್ಯದಲ್ಲಿ ಅಯ್ಯರ್ ಅರ್ಧಶತಕ ಗಳಿಸಿದ್ದರು. ಅದಾಗ್ಯೂ ಶ್ರೇಯಸ್ಗೆ ವಿಶ್ರಾಂತಿ ನೀಡಿ, ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಅವರನ್ನು ಪ್ಲೇಯಿಂಗ್-11 ರಲ್ಲಿ ಕಣಕ್ಕಿಳಿಸಬಹುದಾಗಿದೆ.
ಹಗುರವಾಗಿ ಪರಿಗಣಿಸುವಂತಿಲ್ಲ
ಆದರೆ, ಬಾಂಗ್ಲಾದೇಶವನ್ನು ಲಘುವಾಗಿ ಪರಿಗಣಿಸುವ ತಪ್ಪನ್ನು ಟೀಂ ಇಂಡಿಯಾ ಮಾಡುವುದಿಲ್ಲ. ಏಕೆಂದರೆ ಬಾಂಗ್ಲಾದೇICC world cup, ಶ ತಂಡ ಯಾವುದೇ ತಂಡವನ್ನು ಸೋಲಿಸುವ ಸಾಮಥ್ಯ್ರ ಹೊಂದಿದೆ. ಆದ್ದರಿಂದ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೆಚ್ಚು ಪ್ರಯೋಗಗಳನ್ನು ಮಾಡುವ ಗೋಜಿಗೆ ಹೋಗುವುದಿಲ್ಲ. ಆದರೆ ಬೆಂಚ್ ಬಲಕ್ಕೆ ಅವಕಾಶ ನೀಡಲು ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ.
ಬಾಂಗ್ಲಾ ವಿರುದ್ಧ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್/ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ