5 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನವೀಕರಣ ಕಾರ್ಯ ಆರಂಭ
ODI World Cup 2023: ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ನವೀಕರಣ ಕಾರ್ಯ ಆರಂಭವಾಗಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾದ ಒಂದು ಪಂದ್ಯ ಸೇರಿದಂತೆ ಒಟ್ಟು ಐದು ವಿಶ್ವಕಪ್ ಪಂದ್ಯಗಳು ನಡೆಯಲ್ಲಿದೆ. ಹೀಗಾಗಿ ಪಂದ್ಯ ವೀಕ್ಷಿಸಲು ವಿಶ್ವದಾದ್ಯಂತ ಬರುವ ಕ್ರಿಕೆಟ್ ಅಭಿಮಾನಿಗಳಿಗೆ ಯಾವುದೇ ತೊಂದರೆಯಾಗದಂತೆ ನಿಗಾವಹಿಸಲು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಿಪೇರಿ ಕೆಲಸ ಆರಂಭವಾಗಿದೆ.
ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗೆ (ODI World Cup 2023) ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಾಗಿ 4 ವರ್ಷಗಳಿಗೊಮ್ಮೆ ನಡೆಯುವ ಈ ವಿಶ್ವಸಮರಕ್ಕೆ ಆತಿಥ್ಯವಹಿಸಿರುವ ಬಿಸಿಸಿಐ (BCCI) ಪಂದ್ಯಗಳು ನಡೆಯಲ್ಲಿರುವ 10 ಮೈದಾನಗಳನ್ನು ಉನ್ನತ್ತೀಕರಣಗೊಳಿಸಲು ಮುಂದಾಗಿದೆ. ಅದರ ಫಲವಾಗಿ ಇದೀಗ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ (M Chinnaswamy Stadium) ನವೀಕರಣ ಕಾರ್ಯ ಆರಂಭವಾಗಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾದ ಒಂದು ಪಂದ್ಯ ಸೇರಿದಂತೆ ಒಟ್ಟು ಐದು ವಿಶ್ವಕಪ್ ಪಂದ್ಯಗಳು ನಡೆಯಲ್ಲಿದೆ. ಹೀಗಾಗಿ ಪಂದ್ಯ ವೀಕ್ಷಿಸಲು ವಿಶ್ವದಾದ್ಯಂತ ಬರುವ ಕ್ರಿಕೆಟ್ ಅಭಿಮಾನಿಗಳಿಗೆ ಯಾವುದೇ ತೊಂದರೆಯಾಗದಂತೆ ನಿಗಾವಹಿಸಲು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಿಪೇರಿ ಕೆಲಸ ಆರಂಭವಾಗಿದೆ.
ವಾಸ್ತವವಾಗಿ ಕೆಲವು ದಿನಗಳ ಹಿಂದೆ ಐಸಿಸಿ ತಂಡ ಸ್ಟೇಡಿಯಂನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿತ್ತು. ಆ ಬಳಿಕ ಸ್ಟೇಡಿಯಂನ ಸ್ಟ್ಯಾಂಡ್‌ಗಳನ್ನು ನವೀಕರಿಸುವುದು, ಕೆಲವು ಹೊಸ ಆಸನಗಳನ್ನು ಹಾಕುವುದು, ಕ್ರೀಡಾಂಗಣದಲ್ಲಿನ ಶೌಚಾಲಯಗಳನ್ನು ನವೀಕರಿಸುವುದು ಸೇರಿದಂತೆ ಮುಂತಾದ ಅಗತ್ಯ ರಿಪೇರಿ ಕಾರ್ಯಗಳನ್ನು ನಾವು ಪ್ರಾರಂಭಿಸಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಹೇಳಿದ್ದಾರೆ.
World Cup 2023: ಈತ ಆಡದಿದ್ದರೆ ಭಾರತ ಏಕದಿನ ವಿಶ್ವಕಪ್ ಗೆಲ್ಲುವುದಿಲ್ಲ ಎಂದ ಮೊಹಮ್ಮದ್ ಕೈಫ್..!
ಉತ್ತಮ ಸೌಲಭ್ಯಗಳ ವ್ಯವಸ್ಥೆ
ಗುರುವಾರ ನಡೆದ ಕೆಎಸ್‌ಸಿಎ ಮಹಾರಾಜ ಟಿ20 ಟ್ರೋಫಿ ಅನಾವರಣ ಕಾರ್ಯಕ್ರಮದ ನಂತರ ಮಾತನಾಡಿದ ರಘುರಾಮ್ ಭಟ್, “ಕ್ರೀಡಾಂಗಣದಲ್ಲಿ ಸಾಧ್ಯವಾದಷ್ಟು ಉತ್ತಮ ಸೌಲಭ್ಯಗಳ ವ್ಯವಸ್ಥೆ ಮಾಡುವುದು ನಮ್ಮ ಗುರಿಯಾಗಿದೆ. ಸಿದ್ಧತೆಗಳನ್ನು ಪರಿಶೀಲಿಸಲು ಐಸಿಸಿ ಇತ್ತೀಚೆಗೆ ತಪಾಸಣಾ ತಂಡವನ್ನು ಬೆಂಗಳೂರಿಗೆ ಕಳುಹಿಸಿತ್ತು. ಆ ತಂಡ ಈಗಿರುವ ಸೌಕರ್ಯಗಳಲ್ಲಿ ಕೆಲವು ಸಾಧಾರಣ ಬದಲಾವಣೆಗಳನ್ನು ಮಾಡುವಂತೆ ಸೂಚಿಸಿದೆ. ವಿಶ್ವಕಪ್ ಹೊರತಾಗಿ, ವಿವಿಧ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ತಂಡಗಳು ಆಫ್-ಸೀಸನ್ ತರಬೇತಿಗಾಗಿ ಬೆಂಗಳೂರಿಗೆ ಬರಲಿವೆ.
ಹಾಗೆಯೇ ಹೆಚ್ಚಿನ ಬೇಡಿಕೆಗೆ ಅನುಗುಣವಾಗಿ ರಾಜ್ಯದಲ್ಲಿ ಹೆಚ್ಚಿನ ಕ್ರಿಕೆಟ್ ಮೈದಾನಗಳನ್ನು ನಿರ್ಮಿಸುವ ಗುರಿಯನ್ನು ಕೆಎಸ್‌ಸಿಎ ಹೊಂದಿದೆ. ಕೋಲಾರ, ಹಾಸನ, ಮಂಗಳೂರು ಹಾಗೂ ಕಾರವಾರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳ ಗುರುತಿಸಿದ್ದು, ಶೀಘ್ರದಲ್ಲಿಯೇ ಮುಂದಿನ ಹಂತದ ಕೆಲಸ ಆರಂಭವಾಗಲಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ನಡೆಯಲ್ಲಿರುವ ವಿಶ್ವಕಪ್ ಪಂದ್ಯಗಳ ಪಟ್ಟಿ
ಅಕ್ಟೋಬರ್ 20 – ಆಸ್ಟ್ರೇಲಿಯಾ vs ಪಾಕಿಸ್ತಾನ
ಅಕ್ಟೋಬರ್ 26 – ಇಂಗ್ಲೆಂಡ್ vs ಶ್ರೀಲಂಕಾ
ನವೆಂಬರ್ 4- ನ್ಯೂಜಿಲೆಂಡ್ vs ಪಾಕಿಸ್ತಾನ
ನವೆಂಬರ್ 9 – ನ್ಯೂಜಿಲೆಂಡ್ vs ಶ್ರೀಲಂಕಾ
ನವೆಂಬರ್ 12- ಭಾರತ vs ನೆದರ್ಲ್ಯಾಂಡ್ಸ್
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ