AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಿರುವನಂತಪುರಂ’ ಅಂತ ಹೇಳಲು ಆಫ್ರಿಕನ್ ಕ್ರಿಕೆಟರ್ಸ್​ ಪಟ್ಟ ಕಷ್ಟ ಅಷ್ಟಿಷ್ಟಲ್ಲ; ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ

ODI World Cup 2023: ಅಕ್ಟೋಬರ್ 2 ರಂದು ನ್ಯೂಜಿಲೆಂಡ್‌ ವಿರುದ್ಧ ತನ್ನ ಎರಡನೇ ಅಭ್ಯಾಸ ಪಂದ್ಯವನ್ನಾಡಲು ಹರಿಣಗಳ ತಂಡ ಸಿದ್ದವಾಗಿದೆ. ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಈ ಆಟಗಾರರು ‘ತಿರುವನಂತಪುರಂ' ಎಂದು ಉಚ್ಚರಿಸಲು ಹೆಣಗಾಡುತ್ತಿರುವ ವೀಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಈಗ ಸಖತ್ ವೈರಲ್ ಆಗಿದೆ.

‘ತಿರುವನಂತಪುರಂ’ ಅಂತ ಹೇಳಲು ಆಫ್ರಿಕನ್ ಕ್ರಿಕೆಟರ್ಸ್​ ಪಟ್ಟ ಕಷ್ಟ ಅಷ್ಟಿಷ್ಟಲ್ಲ; ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ
ದಕ್ಷಿಣ ಆಫ್ರಿಕಾ ತಂಡImage Credit source: insidesport
ಪೃಥ್ವಿಶಂಕರ
|

Updated on:Oct 02, 2023 | 12:53 PM

Share

ಟೆಂಬಾ ಬವುಮಾ (Temba Bavuma) ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು (South African cricket team) 2023 ರ ಏಕದಿನ ವಿಶ್ವಕಪ್‌ಗಾಗಿ ಭಾರತಕ್ಕೆ ಬಂದಿಳಿದಿದೆ. ಪ್ರಸ್ತುತ ಕೇರಳದ ತಿರುವನಂತಪುರಂನಲ್ಲಿ ಅಭ್ಯಾಸ ಪಂದ್ಯಗಳಲ್ಲಿ ನಿರತವಾಗಿರುವ ಈ ತಂಡ ಮೊದಲ ವಿಶ್ವಕಪ್ (ODI World Cup 2023) ಗೆಲ್ಲುವ ಗುರಿಯೊಂದಿಗೆ ಈ ಮೆಗಾ-ಈವೆಂಟ್​ಗೆ ಕಾಲಿಟ್ಟಿದೆ. ಈ ತಂಡ ಸೆಪ್ಟೆಂಬರ್ 29 ರಂದು ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ (Greenfield International Stadium in Thiruvananthapuram) ಅಫ್ಘಾನಿಸ್ತಾನದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಆ ಪಂದ್ಯ ಮಳೆಯಿಂದಾಗಿ ಒಂದು ಎಸೆತವನ್ನು ಆಡಲು ಸಾಧ್ಯವಾಗದೆ ರದ್ದಾಯಿತು. ಇದೀಗ ಇಂದು ಅಂದರೆ ಅಕ್ಟೋಬರ್ 2 ರಂದು ನ್ಯೂಜಿಲೆಂಡ್‌ ವಿರುದ್ಧ ತನ್ನ ಎರಡನೇ ಅಭ್ಯಾಸ ಪಂದ್ಯವನ್ನಾಡಲು ಹರಿಣಗಳ ತಂಡ ಸಿದ್ದವಾಗಿದೆ. ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ತಂಡದ ಆಟಗಾರರು ‘ತಿರುವನಂತಪುರಂ’ ಎಂದು ಉಚ್ಚರಿಸಲು ಹೆಣಗಾಡುತ್ತಿರುವ ವೀಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ತಡವರಿಸಿದ ಆಫ್ರಿಕಾ ಕ್ರಿಕೆಟಿಗರು

ರಾಜಕಾರಣಿ ಶಶಿ ತರೂರ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗರು ‘ತಿರುವನಂತಪುರಂ’ ಎಂಬ ಹೆಸರನ್ನು ಸರಿಯಾಗಿ ಉಚ್ಚರಿಸಲು ಹೆಣಗಾಡುತ್ತಿರುವುದನ್ನು ಕಾಣಬಹುದಾಗಿದೆ. ಆಫ್ರಿಕಾ ಆಟಗಾರರು ‘ತಿರುವನಂತಪುರಂ’ ಎಂದು ಹೇಳುವ ಬದಲಿಗೆ ಬೇರೇನನ್ನೋ ಹೇಳುವುದನ್ನು ನಾವು ಕಾಣಬಹುದಾಗಿದೆ. ಆದರೆ ಅದೇ ಸಮಯದಲ್ಲಿ ಕೇಶವ್ ಮಹಾರಾಜ್, ಕಗಿಸೊ ರಬಾಡ ಮತ್ತು ಲುಂಗಿ ಎನ್‌ಗಿಡಿ ಅವರಂತಹ ಆಟಗಾರರು ‘ತಿರುವನಂತಪುರಂ’ ಹೆಸರನ್ನು ಸರಿಯಾಗಿ ಉಚ್ಚರಿಸುವುದನ್ನೂ ಸಹ ನಾವು ಕಾಣಬಹುದಾಗಿದೆ.

ಮಳೆಯಿಂದಾಗಿ ಅಭ್ಯಾಸ ಪಂದ್ಯಗಳು ರದ್ದು

ಇನ್ನು ವಿಶ್ವಕಪ್ ವಿಚಾರಕ್ಕೆ ಬರುವುದಾದರೆ ಮೇಲೆ ಹೇಳಿದಂತೆ ಇಂದು ದಕ್ಷಿಣ ಆಫ್ರಿಕಾ ತಂಡ ತನ್ನ ಕೊನೆಯ ಅಭ್ಯಾಸ ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಿವೆ. ಏಕೆಂದರೆ ಈಗಾಗಲೇ ತಿರುವನಂತಪುರಂನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಬವುಮಾ ಪಡೆ ಅಭ್ಯಾಸ ಪಂದ್ಯಗಳನ್ನು ಆಡದೆ ವಿಶ್ವಕಪ್​ ಅಭಿಯಾನವನ್ನು ಆರಂಭಿಸುವ ಸಾಧ್ಯತೆಗಳಿವೆ.

AUS vs SA: ಮಾರ್ಷ್​- ಡೇವಿಡ್ ಸಿಡಿಲಬ್ಬರಕ್ಕೆ 111 ರನ್​ಗಳ ಸೋಲುಂಡ ದಕ್ಷಿಣ ಆಫ್ರಿಕಾ!

ತಂಡ ತೊರಿದಿರುವ ನಾಯಕ ಬವುಮಾ

ದಕ್ಷಿಣ ಆಫ್ರಿಕಾ ತಂಡ ನಾಯಕ ಟೆಂಬಾ ಬವುಮಾ ಅವರು ವೈಯಕ್ತಿಕ ಕಾರಣಗಳಿಂದಾಗಿ ಭಾರತಕ್ಕೆ ಬಂದ ಎರಡು ದಿನಗಳ ನಂತರ ದಕ್ಷಿಣ ಆಫ್ರಿಕಾಕ್ಕೆ ಮರಳಿದ್ದಾರೆ. ಸದ್ಯ ಅವರು ವಿಶ್ವಕಪ್ ಆರಂಭವಾಗುವ ಮುನ್ನ ಅಂದರೆ ಅಕ್ಟೋಬರ್ 7 ರಂದು ದೆಹಲಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ತಮ್ಮ ಟೂರ್ನಮೆಂಟ್ ಆರಂಭಿಕ ಪಂದ್ಯಕ್ಕೂ ಮೊದಲು ಬವುಮಾ ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

ದಕ್ಷಿಣ ಆಫ್ರಿಕಾ ವಿಶ್ವಕಪ್ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಐಡೆನ್ ಮಾರ್ಕ್ರಾಮ್, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಆಂಡಿಲೆ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕಗಿಸೊ ರಬಾಡ, ಲಿಜಾದ್ ವಿಲಿಯಮ್ಸ್, ತಬ್ರೈಜ್ ಶಮ್ಸಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Mon, 2 October 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ