AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕಿವೀಸ್ ವಿರುದ್ಧ ಟೀಂ ಇಂಡಿಯಾದಲ್ಲಿ 2 ಬದಲಾವಣೆ? ಇಲ್ಲಿದೆ ಸಂಭಾವ್ಯ ತಂಡ

India predicted playing XI vs NZ: ಹಾರ್ದಿಕ್ ಪಾಂಡ್ಯ ಕಿವೀಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದು, ಇಂಗ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಹೀಗಾಗಿ ಹಾರ್ದಿಕ್ ಅನುಪಸ್ಥಿತಿಯಲ್ಲಿ ತಂಡದಲ್ಲಿ ಯಾರಿಗೆ ಸಿಗಲಿದೆ ಅವಕಾಶ? ಕಿವೀಸ್ ವಿರುದ್ಧ ಟೀಂ ಇಂಡಿಯಾ ಯಾವ 11 ಆಟಗಾರರೊಂದಿಗೆ ಕಣಕ್ಕಿಳಿಯಲ್ಲಿದೆ ಎಂಬುದರ ವಿವರ ಇಲ್ಲಿದೆ.

IND vs NZ: ಕಿವೀಸ್ ವಿರುದ್ಧ ಟೀಂ ಇಂಡಿಯಾದಲ್ಲಿ 2 ಬದಲಾವಣೆ? ಇಲ್ಲಿದೆ ಸಂಭಾವ್ಯ ತಂಡ
ಭಾರತ- ನ್ಯೂಜಿಲೆಂಡ್
ಪೃಥ್ವಿಶಂಕರ
|

Updated on: Oct 21, 2023 | 9:42 AM

Share

ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಸತತ ನಾಲ್ಕು ಪಂದ್ಯಗಳ ಗೆಲುವಿನೊಂದಿಗೆ ಬೀಗುತ್ತಿರುವ ಟೀಂ ಇಂಡಿಯಾ ಮತ್ತೊಂದು ಮಹತ್ವದ ಕದನಕ್ಕೆ ಸಜ್ಜಾಗಿದೆ. ರೋಹಿತ್ ಪಡೆ ಅಕ್ಟೋಬರ್ 20 ರಂದು ಧರ್ಮಶಾಲಾದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನ್ಯೂಜಿಲೆಂಡ್ (India vs New zealand) ತಂಡವನ್ನು ಎದುರಿಸಲಿದೆ. ವಿಶ್ವಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ (Team India) ವಿರುದ್ಧ ನ್ಯೂಜಿಲೆಂಡ್ ಮೇಲುಗೈ ಸಾಧಿಸಿದೆ. ಹೀಗಾಗಿ ಕಿವೀಸ್ ಮಣಿಸಿ ಹೊಸ ಇತಿಹಾಸವನ್ನು ಬರೆಯುವ ಹೊಸ್ತಿಲಿನಲ್ಲಿರುವ ಟೀಂ ಇಂಡಿಯಾಕ್ಕೆ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅಲಭ್ಯತೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

ಹಾರ್ದಿಕ್ ಅಲಭ್ಯ

ಗುರುವಾರ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಪಾಂಡ್ಯ ಅವರಿಗೆ ಗಾಯವಾಗಿತ್ತು. ಅವರು ಚೇತರಿಸಿಕೊಳ್ಳಲು ಕನಿಷ್ಠ ಒಂದು ವಾರ ಬೇಕು ಎಂದು ವರದಿಯಾಗಿದೆ. ಹೀಗಾಗಿ ಹಾರ್ದಿಕ್ ಕಿವೀಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದು, ಇಂಗ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಹೀಗಾಗಿ ಹಾರ್ದಿಕ್ ಅನುಪಸ್ಥಿತಿಯಲ್ಲಿ ತಂಡದಲ್ಲಿ ಯಾರಿಗೆ ಸಿಗಲಿದೆ ಅವಕಾಶ? ಕಿವೀಸ್ ವಿರುದ್ಧ ಟೀಂ ಇಂಡಿಯಾ ಯಾವ 11 ಆಟಗಾರರೊಂದಿಗೆ ಕಣಕ್ಕಿಳಿಯಲ್ಲಿದೆ ಎಂಬುದರ ವಿವರ ಇಲ್ಲಿದೆ.

ಕಿವೀಸ್ ವಿರುದ್ಧ ಈ ಅಸ್ತ್ರ ಬಳಸಿದರೆ ಭಾರತಕ್ಕೆ ಗೆಲುವು ಖಚಿತ! ಧರ್ಮಶಾಲಾದ ಪಿಚ್ ಯಾರಿಗೆ ಹೆಚ್ಚು ಸಹಕಾರಿ ಗೊತ್ತಾ?

ಸೂರ್ಯಕುಮಾರ್​ಗೆ ಅವಕಾಶ?

ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಜಾಗದಲ್ಲಿ ಸೂರ್ಯಕುಮಾರ್ ಯಾದವ್ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಧರ್ಮಶಾಲಾ ಪಿಚ್ ಬ್ಯಾಟಿಂಗ್‌ಗೆ ಸೂಕ್ತವಾಗಿರುವುದರಿಂದ ಸೂರ್ಯ ಅವರನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಿಸಲು ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಚಿಂತನೆ ನಡೆಸುತ್ತಿದೆ ಎಂದು ಹಲವು ವರದಿಗಳು ಹೇಳುತ್ತವೆ.

ಶಮಿಗೆ ಅವಕಾಶ?

ಕೆಲ ದಿನಗಳಿಂದ ಏಕದಿನದಲ್ಲಿ ಫಾರ್ಮ್ ಕಳೆದುಕೊಂಡಿದ್ದ ಸೂರ್ಯ, ಈ ಮೆಗಾ ಟೂರ್ನಿಗೂ ಮುನ್ನ ಆಸೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಲಯವನ್ನು ಮರಳಿ ಪಡೆದಿದ್ದರು. ಸೂರ್ಯ ಅವರಲ್ಲದೆ ಬೌಲಿಂಗ್ ವಿಭಾಗದಲ್ಲೂ ಬದಲಾವಣೆಯಾಗುವ ಸಾಧ್ಯತೆ ಇದ್ದು, ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಬದಲಿಗೆ ವೇಗಿ ಮೊಹಮ್ಮದ್ ಶಮಿ ಅಂತಿಮ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಕಿವೀಸ್ ವಿರುದ್ಧ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ,ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ