AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ODI World Cup 2023: ವಿಶ್ವಕಪ್ ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಂದು ಪ್ರಾರಂಭವಾಗಲಿದ್ದು, ಅಕ್ಟೋಬರ್ 3 ರವರೆಗೆ ನಡೆಯಲ್ಲಿವೆ. ಇದರಲ್ಲಿ ಒಟ್ಟು 10 ಅಭ್ಯಾಸ ಪಂದ್ಯಗಳು ನಡೆಯಲಿವೆ. ಈ ಅಭ್ಯಾಸ ಪಂದ್ಯಗಳು ಹೈದರಾಬಾದ್, ಗುವಾಹಟಿ ಮತ್ತು ತಿರುವನಂತಪುರಂನಲ್ಲಿ ನಡೆಯಲಿವೆ.

ODI World Cup 2023: ಏಕದಿನ ವಿಶ್ವಕಪ್​ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
ಏಕದಿನ ವಿಶ್ವಕಪ್
ಪೃಥ್ವಿಶಂಕರ
|

Updated on:Sep 19, 2023 | 2:07 PM

Share

ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಕೆಟ್​ ಲೋಕದ ಮಹಾ ಸಂಭ್ರಮ ಆರಂಭವಾಗಲಿದೆ. 4 ವರ್ಷಗಳಿಗೊಮ್ಮೆ ನಡೆಯುವ ಏಕದಿನ ವಿಶ್ವಕಪ್​ಗೆ (ODI World Cup 2023) ಇದೇ ಮೊದಲ ಬಾರಿಗೆ ಭಾರತ ಏಕಾಂಗಿಯಾಗಿಯಾಗಿ ಆತಿಥ್ಯವಹಿಸುತ್ತಿದೆ. ಟೂರ್ನಿಯ ಆರಂಭಿಕ ಪಂದ್ಯವು 2019 ರ ವಿಶ್ವಕಪ್ ಫೈನಲಿಸ್ಟ್‌ಗಳಾದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಅಕ್ಟೋಬರ್ 5 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯಲಿದೆ. ಇನ್ನು ಟೀಂ ಇಂಡಿಯಾ (Team India) ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಎದುರಿಸುವ ಮೂಲಕ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಆದರೆ ಅದಕ್ಕೂ ಮುನ್ನ ಎಲ್ಲಾ ತಂಡಗಳ ನಡುವೆ ಪರಸ್ಪರ ಅಭ್ಯಾಸ ಪಂದ್ಯಗಳು ನಡೆಯಲ್ಲಿವೆ. ಆ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ.

ವಿಶ್ವಕಪ್ ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಂದು ಪ್ರಾರಂಭವಾಗಲಿದ್ದು, ಅಕ್ಟೋಬರ್ 3 ರವರೆಗೆ ನಡೆಯಲ್ಲಿವೆ. ಇದರಲ್ಲಿ ಒಟ್ಟು 10 ಅಭ್ಯಾಸ ಪಂದ್ಯಗಳು ನಡೆಯಲಿವೆ. ಈ ಅಭ್ಯಾಸ ಪಂದ್ಯಗಳು ಹೈದರಾಬಾದ್, ಗುವಾಹಟಿ ಮತ್ತು ತಿರುವನಂತಪುರಂನಲ್ಲಿ ನಡೆಯಲಿವೆ.

ಭಾರತ ವಿಶ್ವಕಪ್ ತಂಡದಲ್ಲಿ ಬದಲಾವಣೆಯ ಸುಳಿವು ನೀಡಿದ ರೋಹಿತ್ ಶರ್ಮಾ..!

ಅಭ್ಯಾಸ ಪಂದ್ಯಗಳು ನಡೆಯುವ ಸ್ಥಳ

ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಸ್ಟೇಡಿಯಂ, ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂ ಮತ್ತು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂಗಳು ಸೆಪ್ಟೆಂಬರ್ 29 ಮತ್ತು ಅಕ್ಟೋಬರ್ 3 ರ ನಡುವೆ ನಾಲ್ಕು ವಿಶ್ವಕಪ್ ಅಭ್ಯಾಸ ಪಂದ್ಯಗಳನ್ನು ಆಯೋಜಿಸಲು ಸಿದ್ಧವಾಗಿವೆ. ತಿರುವನಂತಪುರಂನಲ್ಲಿ ನಡೆಯುವ ಈ ಅಭ್ಯಾಸ ಪಂದ್ಯಗಳಲ್ಲಿ ಭಾಗವಹಿಸುವ ತಂಡಗಳಲ್ಲಿ ಭಾರತ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ನೆದರ್ಲ್ಯಾಂಡ್ಸ್ ತಂಡಗಳು ಸೇರಿವೆ. ಇನ್ನು ಪಾಕಿಸ್ತಾನ ತಂಡವು ಹೈದರಾಬಾದ್‌ನಲ್ಲಿ ತನ್ನು ಎರಡೂ ಅಭ್ಯಾಸ ಪಂದ್ಯಗಳನ್ನು ಆಡಲಿದೆ.

ಅಭ್ಯಾಸ ಪಂದ್ಯಗಳ ವೇಳಾಪಟ್ಟಿ

ದಿನಾಂಕ

ತಂಡಗಳು ಮೈದಾನ ಸಮಯ
ಸೆ. 29, 2023 ಬಾಂಗ್ಲಾದೇಶ vs ಶ್ರೀಲಂಕಾ ಗುವಾಹಟಿ

ಮಧ್ಯಾಹ್ನ 2 ಗಂಟೆ

ಸೆ. 29, 2023

ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ ತಿರುವನಂತಪುರಂ ಮಧ್ಯಾಹ್ನ 2 ಗಂಟೆ
ಸೆ. 29, 2023 ನ್ಯೂಜಿಲೆಂಡ್ vs ಪಾಕಿಸ್ತಾನ ಹೈದರಾಬಾದ್

ಮಧ್ಯಾಹ್ನ 2 ಗಂಟೆ

ಸೆ. 30, 2023

ಭಾರತ vs ಇಂಗ್ಲೆಂಡ್ ಗುವಾಹಟಿ

ಮಧ್ಯಾಹ್ನ 2 ಗಂಟೆ

ಸೆ. 30, 2023

ಆಸ್ಟ್ರೇಲಿಯಾ vs ನೆದರ್ಲ್ಯಾಂಡ್ಸ್ ತಿರುವನಂತಪುರಂ ಮಧ್ಯಾಹ್ನ 2 ಗಂಟೆ
. 2, 2023 ಇಂಗ್ಲೆಂಡ್ vs ಬಾಂಗ್ಲಾದೇಶ ಗುವಾಹಟಿ

ಮಧ್ಯಾಹ್ನ 2 ಗಂಟೆ

. 2, 2023

ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ ತಿರುವನಂತಪುರಂ ಮಧ್ಯಾಹ್ನ 2 ಗಂಟೆ
. 3, 2023 ಅಫ್ಘಾನಿಸ್ತಾನ vs ಶ್ರೀಲಂಕಾ ಗುವಾಹಟಿ

ಮಧ್ಯಾಹ್ನ 2 ಗಂಟೆ

. 3, 2023

ಭಾರತ vs ನೆದರ್ಲ್ಯಾಂಡ್ಸ್ ತಿರುವನಂತಪುರಂ ಮಧ್ಯಾಹ್ನ 2 ಗಂಟೆ
. 3, 2023 ಆಸ್ಟ್ರೇಲಿಯಾ vs ಪಾಕಿಸ್ತಾನ ಹೈದರಾಬಾದ್

ಮಧ್ಯಾಹ್ನ 2 ಗಂಟೆ

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:03 pm, Tue, 19 September 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ