AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ಅಭ್ಯಾಸ ಪಂದ್ಯಗಳು ನಡೆಯುವ ದಿನಾಂಕ, ಸ್ಥಳ, ಸಮಯ, ನೇರ ಪ್ರಸಾರ, ಉಚಿತ ವೀಕ್ಷಣೆಯ ಎಲ್ಲಾ ವಿವರ ಇಲ್ಲಿದೆ

ODI World Cup 2023 warm-up matches: ಅಭ್ಯಾಸ ಪಂದ್ಯಗಳ ಆರಂಭಿಕ ದಿನದಂದು ಅಂದರೆ ಸೆಪ್ಟೆಂಬರ್ 29ರ ಮೊದಲ ದಿನದಂದು ಬಾಂಗ್ಲಾದೇಶ, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಅಖಾಡಕ್ಕಿಳಿಯಲಿವೆ. ಉಳಿದ ನಾಲ್ಕು ತಂಡಗಳು - ಆಸ್ಟ್ರೇಲಿಯಾ, ಇಂಗ್ಲೆಂಡ್, ನೆದರ್ಲ್ಯಾಂಡ್ಸ್ ಮತ್ತು ಭಾರತ ಶನಿವಾರ ಮೈದಾನಕ್ಕಿಳಿಯಲಿವೆ. ಎರಡನೇ ಸೆಟ್ ಅಭ್ಯಾಸ ಪಂದ್ಯಗಳು ಅಕ್ಟೋಬರ್ 2 ಮತ್ತು 3 ರಂದು ನಡೆಯಲಿದೆ.

ವಿಶ್ವಕಪ್ ಅಭ್ಯಾಸ ಪಂದ್ಯಗಳು ನಡೆಯುವ ದಿನಾಂಕ, ಸ್ಥಳ, ಸಮಯ, ನೇರ ಪ್ರಸಾರ, ಉಚಿತ ವೀಕ್ಷಣೆಯ ಎಲ್ಲಾ ವಿವರ ಇಲ್ಲಿದೆ
ವಿಶ್ವಕಪ್ ಅಭ್ಯಾಸ ಪಂದ್ಯಗಳುImage Credit source: insidesport
ಪೃಥ್ವಿಶಂಕರ
|

Updated on: Sep 28, 2023 | 7:00 PM

Share

ಬಹು ನಿರೀಕ್ಷಿತ ಏಕದಿನ ವಿಶ್ವಕಪ್ (ODI World Cup 2023) ಅಕ್ಟೋಬರ್ 5 ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Cricket Stadium) ಆರಂಭವಾಗಲಿದೆ. 48 ಪಂದ್ಯಗಳ ಟೂರ್ನಿಯ ಫೈನಲ್ ಕೂಡ ಇದೇ ಸ್ಥಳದಲ್ಲಿ ನವೆಂಬರ್ 19 ರಂದು ನಡೆಯಲಿದೆ. ಭಾರತದಾದ್ಯಂತ 10 ಸ್ಥಳಗಳಲ್ಲಿ ಲೀಗ್ ಹಂತದ ಪಂದ್ಯಗಳಲ್ಲಿ 10 ತಂಡಗಳು ಭಾಗವಹಿಸಲಿವೆ. ಆದರೆ ಅದಕ್ಕೂ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿವೆ. ಈ ಅಭ್ಯಾಸ ಪಂದ್ಯಗಳನ್ನು ಐಸಿಸಿ (ICC) ಮೂರು ಸ್ಥಳಗಳಲ್ಲಿ ನಡೆಸುತ್ತಿದ್ದು, ತಿರುವನಂತಪುರಂ, ಹೈದರಾಬಾದ್ ಮತ್ತು ಗುವಾಹಟಿಯಲ್ಲಿ (Guwahati, Thiruvananthapuram, Hyderabad) ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ.

ಅಭ್ಯಾಸ ಪಂದ್ಯಗಳ ಆರಂಭಿಕ ದಿನದಂದು ಅಂದರೆ ಸೆಪ್ಟೆಂಬರ್ 29ರ ಮೊದಲ ದಿನದಂದು ಬಾಂಗ್ಲಾದೇಶ, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಅಖಾಡಕ್ಕಿಳಿಯಲಿವೆ. ಉಳಿದ ನಾಲ್ಕು ತಂಡಗಳು – ಆಸ್ಟ್ರೇಲಿಯಾ, ಇಂಗ್ಲೆಂಡ್, ನೆದರ್ಲ್ಯಾಂಡ್ಸ್ ಮತ್ತು ಭಾರತ ಶನಿವಾರ ಮೈದಾನಕ್ಕಿಳಿಯಲಿವೆ. ಎರಡನೇ ಸೆಟ್ ಅಭ್ಯಾಸ ಪಂದ್ಯಗಳು ಅಕ್ಟೋಬರ್ 2 ಮತ್ತು 3 ರಂದು ನಡೆಯಲಿದೆ.

‘ಕೊನೆಯ ವಿಶ್ವಕಪ್’: ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಎಬಿ ಡಿವಿಲಿಯರ್ಸ್

ಮೂರು ಸ್ಥಳಗಳಲ್ಲಿ ಅಭ್ಯಾಸ ಪಂದ್ಯ

ಒಟ್ಟು ಮೂರು ಸ್ಥಳಗಳಾದ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ. ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂ, ಹೈದರಾಬಾದ್. ಮತ್ತು ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂ, ತಿರುವನಂತಪುರಂನಲ್ಲಿ ಅಭ್ಯಾಸ ಪಂದ್ಯಗಳು ನಡೆಯಲ್ಲಿವೆ. ಎರಡನೇ ಮತ್ತು ಅಂತಿಮ ಅಭ್ಯಾಸ ಪಂದ್ಯಕ್ಕಾಗಿ ಟೀಂ ಇಂಡಿಯಾ ಕೇರಳದ ತಿರುವನಂತಪುರಕ್ಕೆ ಪ್ರಯಾಣ ಬೆಳೆಸಲಿದೆ.

ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಮತ್ತು ಸ್ಥಳಗಳು

  • ಸೆಪ್ಟೆಂಬರ್ 29, ಶುಕ್ರವಾರ: ಬಾಂಗ್ಲಾದೇಶ vs ಶ್ರೀಲಂಕಾ, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
  • ಸೆಪ್ಟೆಂಬರ್ 29, ಶುಕ್ರವಾರ: ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ, ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂ, ತಿರುವನಂತಪುರಂ.
  • ಸೆಪ್ಟೆಂಬರ್ 29, ಶುಕ್ರವಾರ: ನ್ಯೂಜಿಲೆಂಡ್ vs ಪಾಕಿಸ್ತಾನ, ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂ, ಹೈದರಾಬಾದ್
  • ಸೆಪ್ಟೆಂಬರ್ 29, ಶುಕ್ರವಾರ: ಭಾರತ vs ಇಂಗ್ಲೆಂಡ್, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ.
  • ಸೆಪ್ಟೆಂಬರ್ 29, ಶುಕ್ರವಾರ: ಆಸ್ಟ್ರೇಲಿಯಾ vs ನೆದರ್ಲ್ಯಾಂಡ್ಸ್, ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂ, ತಿರುವನಂತಪುರಂ.
  • ಅಕ್ಟೋಬರ್ 2, ಸೋಮವಾರ: ಇಂಗ್ಲೆಂಡ್ vs ಬಾಂಗ್ಲಾದೇಶ, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ.
  • ಅಕ್ಟೋಬರ್ 2, ಸೋಮವಾರ: ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ, ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂ, ತಿರುವನಂತಪುರಂ.
  • ಅಕ್ಟೋಬರ್ 3, ಮಂಗಳವಾರ: ಅಫ್ಘಾನಿಸ್ತಾನ vs ಶ್ರೀಲಂಕಾ, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ.
  • ಅಕ್ಟೋಬರ್ 3, ಮಂಗಳವಾರ: ಭಾರತ vs ನೆದರ್ಲ್ಯಾಂಡ್ಸ್, ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂ, ತಿರುವನಂತಪುರಂ
  • ಅಕ್ಟೋಬರ್ 3, ಮಂಗಳವಾರ: ಪಾಕಿಸ್ತಾನ vs ಆಸ್ಟ್ರೇಲಿಯಾ, ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್.

ಪಂದ್ಯಗಳು ಎಷ್ಟು ಗಂಟೆಗೆ ಆರಂಭ?

ಎಲ್ಲಾ ವಿಶ್ವಕಪ್ ಅಭ್ಯಾಸ ಪಂದ್ಯಗಳು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುತ್ತವೆ. ಮಧ್ಯಾಹ್ನ 1.30ಕ್ಕೆ ಟಾಸ್ ನಡೆಯಲಿದೆ.

ನೇರ ಪ್ರಸಾರದ ವಿವರಗಳು ಹೀಗಿವೆ

ವಿಶ್ವಕಪ್ ಅಭ್ಯಾಸ ಪಂದ್ಯಗಳನ್ನು ಭಾರತದಲ್ಲಿ ಸ್ಟಾರ್ಟ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ವಾರ್ಮ್-ಅಪ್ ಗೇಮ್‌ಗಳ ಲೈವ್ ಸ್ಟ್ರೀಮಿಂಗ್ ಭಾರತದಲ್ಲಿ ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತವಾಗಿ ಲಭ್ಯವಿರುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್