ಬಹು ನಿರೀಕ್ಷಿತ ಏಕದಿನ ವಿಶ್ವಕಪ್ (ODI World Cup 2023) ಅಕ್ಟೋಬರ್ 5 ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Cricket Stadium) ಆರಂಭವಾಗಲಿದೆ. 48 ಪಂದ್ಯಗಳ ಟೂರ್ನಿಯ ಫೈನಲ್ ಕೂಡ ಇದೇ ಸ್ಥಳದಲ್ಲಿ ನವೆಂಬರ್ 19 ರಂದು ನಡೆಯಲಿದೆ. ಭಾರತದಾದ್ಯಂತ 10 ಸ್ಥಳಗಳಲ್ಲಿ ಲೀಗ್ ಹಂತದ ಪಂದ್ಯಗಳಲ್ಲಿ 10 ತಂಡಗಳು ಭಾಗವಹಿಸಲಿವೆ. ಆದರೆ ಅದಕ್ಕೂ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿವೆ. ಈ ಅಭ್ಯಾಸ ಪಂದ್ಯಗಳನ್ನು ಐಸಿಸಿ (ICC) ಮೂರು ಸ್ಥಳಗಳಲ್ಲಿ ನಡೆಸುತ್ತಿದ್ದು, ತಿರುವನಂತಪುರಂ, ಹೈದರಾಬಾದ್ ಮತ್ತು ಗುವಾಹಟಿಯಲ್ಲಿ (Guwahati, Thiruvananthapuram, Hyderabad) ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ.
ಅಭ್ಯಾಸ ಪಂದ್ಯಗಳ ಆರಂಭಿಕ ದಿನದಂದು ಅಂದರೆ ಸೆಪ್ಟೆಂಬರ್ 29ರ ಮೊದಲ ದಿನದಂದು ಬಾಂಗ್ಲಾದೇಶ, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಅಖಾಡಕ್ಕಿಳಿಯಲಿವೆ. ಉಳಿದ ನಾಲ್ಕು ತಂಡಗಳು – ಆಸ್ಟ್ರೇಲಿಯಾ, ಇಂಗ್ಲೆಂಡ್, ನೆದರ್ಲ್ಯಾಂಡ್ಸ್ ಮತ್ತು ಭಾರತ ಶನಿವಾರ ಮೈದಾನಕ್ಕಿಳಿಯಲಿವೆ. ಎರಡನೇ ಸೆಟ್ ಅಭ್ಯಾಸ ಪಂದ್ಯಗಳು ಅಕ್ಟೋಬರ್ 2 ಮತ್ತು 3 ರಂದು ನಡೆಯಲಿದೆ.
‘ಕೊನೆಯ ವಿಶ್ವಕಪ್’: ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಎಬಿ ಡಿವಿಲಿಯರ್ಸ್
ಒಟ್ಟು ಮೂರು ಸ್ಥಳಗಳಾದ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ. ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂ, ಹೈದರಾಬಾದ್. ಮತ್ತು ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂ, ತಿರುವನಂತಪುರಂನಲ್ಲಿ ಅಭ್ಯಾಸ ಪಂದ್ಯಗಳು ನಡೆಯಲ್ಲಿವೆ. ಎರಡನೇ ಮತ್ತು ಅಂತಿಮ ಅಭ್ಯಾಸ ಪಂದ್ಯಕ್ಕಾಗಿ ಟೀಂ ಇಂಡಿಯಾ ಕೇರಳದ ತಿರುವನಂತಪುರಕ್ಕೆ ಪ್ರಯಾಣ ಬೆಳೆಸಲಿದೆ.
ಎಲ್ಲಾ ವಿಶ್ವಕಪ್ ಅಭ್ಯಾಸ ಪಂದ್ಯಗಳು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುತ್ತವೆ. ಮಧ್ಯಾಹ್ನ 1.30ಕ್ಕೆ ಟಾಸ್ ನಡೆಯಲಿದೆ.
ವಿಶ್ವಕಪ್ ಅಭ್ಯಾಸ ಪಂದ್ಯಗಳನ್ನು ಭಾರತದಲ್ಲಿ ಸ್ಟಾರ್ಟ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ವಾರ್ಮ್-ಅಪ್ ಗೇಮ್‌ಗಳ ಲೈವ್ ಸ್ಟ್ರೀಮಿಂಗ್ ಭಾರತದಲ್ಲಿ ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತವಾಗಿ ಲಭ್ಯವಿರುತ್ತದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ