AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ರಿಷಭ್ ಪಂತ್ ಗಾಯದ ಬಗ್ಗೆ ಮಾಹಿತಿ ನೀಡಿದ ಬೌಲಿಂಗ್ ಕೋಚ್

Rishabh Pant injury update: ಕೊಲಂಬೊದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್‌ನಲ್ಲಿ ರಿಷಭ್ ಪಂತ್ ಭುಜದ ಗಾಯದಿಂದಾಗಿ ಮೂರನೇ ದಿನ ಆಡಲಿಲ್ಲ. ಅವರ ಬದಲಿಗೆ ಧ್ರುವ್ ಜುರೇಲ್ ವಿಕೆಟ್ ಕೀಪಿಂಗ್ ನಿರ್ವಹಿಸಿದರು. ನಾಲ್ಕನೇ ದಿನ ಪಂತ್ ಆಡುವ ಭರವಸೆ ಇದೆ. ವೈರಲ್ ಜ್ವರದಿಂದ ಕುಲ್ದೀಪ್ ಯಾದವ್ ಅಲಭ್ಯರಾಗಿದ್ದಾರೆ.

IND vs SL: ರಿಷಭ್ ಪಂತ್ ಗಾಯದ ಬಗ್ಗೆ ಮಾಹಿತಿ ನೀಡಿದ ಬೌಲಿಂಗ್ ಕೋಚ್
Rishabh Pant
ಪೃಥ್ವಿಶಂಕರ
|

Updated on: Aug 25, 2026 | 10:45 PM

Share

ಕೊಲಂಬೊದಲ್ಲಿ (Colombo Test) ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (India vs Sri Lanka) ಮೇಲುಗೈ ಸಾಧಿಸಿದೆ. ಆದಾಗ್ಯೂ ತಂಡದ ಅನುಭವಿ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಭುಜದ ಗಾಯದಿಂದಾಗಿ ಮೂರನೇ ದಿನದಂದು ತಂಡದೊಂದಿಗೆ ಮೈದಾನಕ್ಕೆ ಇಳಿಯಲಿಲ್ಲ. ಹೀಗಾಗಿ ಅವರ ಬದಲಿಗೆ ಧ್ರುವ್ ಜುರೇಲ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಿದರು. ಇದೀಗ ಮೂರನೇ ದಿನದಾಟ ಮುಗಿದ ಬಳಿಕ ರಿಷಭ್ ಪಂತ್ ಮೈದಾನಕ್ಕಿಳಿಯುವ ಬಗ್ಗೆ ಮಾಹಿತಿ ನೀಡಿದ ತಂಡದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್, ಪಂತ್ ಆಡುವ ಬಗ್ಗೆ ಭರವಸೆ ನೀಡಿದ್ದಾರೆ.

ಆಡುವ ಭರವಸೆ ಇದೆ

‘ರಿಷಭ್ ಭುಜದ ಗಾಯದಿಂದ ಬಳಲುತ್ತಿದ್ದಾರೆ. ಅವರಿಗೆ ತುಂಬಾ ನೋವಾಗಿದೆ. ಇಂದು ಬೆಳಿಗ್ಗೆ ಅವರು ಮುಕ್ತವಾಗಿ ಅಭ್ಯಾಸ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಇಂದು ಅವರನ್ನು ಮೈದಾನಕ್ಕಿಳಿಸಲಿಲ್ಲ. ನಾವು ಅವರನ್ನು ರಾತ್ರಿಯಿಡೀ ಮೇಲ್ವಿಚಾರಣೆ ಮಾಡುತ್ತೇವೆ ಮತ್ತು ಬುಧವಾರ ಅವರು ಆಡುವ ಭರವಸೆ ಇದೆ. ರಿಷಭ್​ ಪಂತ್​ಗೆ ಆಟದ ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಅಸಾಧಾರಣವಾಗಿರುವುದರಿಂದ ಅವರನ್ನು ಮೈದಾನದಲ್ಲಿರುವಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ” ಎಂದು ಮಾರ್ಕೆಲ್ ಹೇಳಿದರು.

ಕುಲ್ದೀಪ್​ಗೆ ವೈರಲ್ ಜ್ವರ

ಇನ್ನು ಕುಲ್ದೀಪ್​ರನ್ನು ಆಡಿಸದಿರುವ ಬಗ್ಗೆ ಮಾಹಿತಿ ನೀಡಿದ ಮಾರ್ಕೆಲ್, ‘ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಕುಲ್ದೀಪ್ ಯಾದವ್ ವೈರಲ್ ಜ್ವರದಿಂದ ಬಳಲದಿದ್ದರೆ, ಅವರು ಆಯ್ಕೆ ಪ್ರಕ್ರಿಯೆಯಲ್ಲಿ ಇರುತ್ತಿದ್ದರು. ಕುಲ್ದೀಪ್ ವೈರಲ್ ಜ್ವರದಿಂದ ಬಳಲುತ್ತಿರುವ ಕಾರಣ ಕೊಲಂಬೊ ಟೆಸ್ಟ್‌ಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ ಎಂದಿದ್ದಾರೆ. ಇನ್ನು ನಾಲ್ಕನೇ ದಿನದಾಟದ ಯೋಜನೆಯ ಬಗ್ಗೆ ಮಾಹಿತಿ ನೀಡಿದ ಮಾರ್ಕೆಲ್,‘ ಬುಧವಾರ ಟೀಂ ಇಂಡಿಯಾ ಶ್ರೀಲಂಕಾದ ಉಳಿದ ಎರಡು ವಿಕೆಟ್‌ಗಳನ್ನು ಸಾಧ್ಯವಾದಷ್ಟು ಬೇಗ ಪಡೆಯುವ ಮೂಲಕ ಮುನ್ನಡೆ ಕಾಯ್ದುಕೊಳ್ಳಲು ಬಯಸುತ್ತದೆ. ಹೀಗಾಗಿ ಬೌಲರ್‌ಗಳು ಸರಿಯಾದ ಲೈನ್ ಮತ್ತು ಲೆಂತ್‌ನಲ್ಲಿ ನಿರಂತರವಾಗಿ ಬೌಲಿಂಗ್ ಮಾಡಬೇಕಾಗುತ್ತದೆ ಮತ್ತು ಪಾಲುದಾರಿಕೆಯಲ್ಲಿ ವಿಕೆಟ್‌ಗಳನ್ನು ಪಡೆಯಬೇಕಾಗುತ್ತದೆ ಎಂದಿದ್ದಾರೆ.

ಜಡೇಜಾ ಮಾತು ಕೇಳಿ ಸತತ 22 ಬಾರಿ ಯಾಮಾರಿರುವ ನಾಯಕ

ಲಂಕಾ ಇನ್ನಿಂಗ್ಸ್ ಹೀಗಿದೆ

ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆತಿಥೇಯ ಶ್ರೀಲಂಕಾ ತಂಡ ಮೂರನೇ ದಿನದಾಟದಂತ್ಯಕ್ಕೆ 8 ವಿಕೆಟ್‌ಗಳನ್ನು ಕಳೆದುಕೊಂಡು 265 ರನ್ ಕಲೆಹಾಕಿದೆ. ಮಳೆಯಿಂದಾಗಿ ಮೂರನೇ ದಿನದಾಟವನ್ನು ಬೇಗನೇ ಅಂತ್ಯಗೊಳಿಸಲಾಯಿತು. ಮೂರನೇ ದಿನದಾಟದಂತ್ಯಕ್ಕೆ ಶ್ರೀಲಂಕಾ ಪರ ಲಹಿರು ಕುಮಾರ 8 ರನ್ ಮತ್ತು ಸೋನಲ್ ದಿನುಷಾ 85 ರನ್ ಬಾರಿಸಿ ಕ್ರೀಸ್‌ನಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!