olympics vs cricket: ಕ್ರಿಕೆಟ್ ಆಡುವ ದೇಶಗಳು ಒಲಿಂಪಿಕ್ಸ್​ನಲ್ಲಿ ಗೆದ್ದ ಪದಕಗಳು ಎಷ್ಟು?

Tokyo Olympics Medal List: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಒಂದು ಚಿನ್ನ, ಎರಡು ಬೆಳ್ಳಿ ಸೇರಿದಂತೆ ಒಟ್ಟು 3 ಪದಕಗಳನ್ನು ದಕ್ಷಿಣ ಆಫ್ರಿಕಾ ಗೆದ್ದಿದ್ದು, ಈ ಮೂಲಕ ಮೆಡಲ್ ಟೇಬಲ್​ನಲ್ಲಿ 52 ನೇ ಸ್ಥಾನ ಪಡೆದಿದೆ.

olympics vs cricket: ಕ್ರಿಕೆಟ್ ಆಡುವ ದೇಶಗಳು ಒಲಿಂಪಿಕ್ಸ್​ನಲ್ಲಿ ಗೆದ್ದ ಪದಕಗಳು ಎಷ್ಟು?
olympics vs cricket
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 09, 2021 | 4:03 PM

ಒಲಿಂಪಿಕ್ ಕ್ರೀಡಾಕೂಟದಲ್ಲಿ ಯುಎಸ್ ಮತ್ತು ಚೀನಾ ಮತ್ತೊಮ್ಮೆ ಪ್ರಾಬಲ್ಯ ಸಾಧಿಸಿವೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 39 ಚಿನ್ನ ಸೇರಿದಂತೆ ಒಟ್ಟು 113 ಪದಕಗಳನ್ನು ಅಮೆರಿಕ ಗೆದ್ದಿದೆ. ಹಾಗೆಯೇ ಚೀನಾ 38 ಚಿನ್ನ ಸೇರಿದಂತೆ 88 ಪದಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಒಂದು ಚಿನ್ನ ಸೇರಿದಂತೆ 7 ಪದಕಗಳನ್ನು ಗೆಲ್ಲುವ ಮೂಲಕ ಭಾರತ ಪದಕ ಪಟ್ಟಿಯಲ್ಲಿ 48 ನೇ ಸ್ಥಾನದಲ್ಲಿದೆ. ಅಂದಹಾಗೆ, ಇದು ಒಲಿಂಪಿಕ್ಸ್‌ನಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನ ಎಂಬುದು ವಿಶೇಷ. ಭಾರತದಲ್ಲಿ ಕ್ರಿಕೆಟ್​ಗೆ ಮಾತ್ರ ಪ್ರಾಮುಖ್ಯತೆ ನೀಡುತ್ತಿರುವುದರಿಮದ ಒಲಿಂಪಿಕ್ಸ್‌ನಲ್ಲಿ ಕಳಪೆ ಪ್ರದರ್ಶನ ಕಂಡು ಬರುತ್ತಿದೆ ಎಂಬ ಟೀಕೆಗಳು ಕೂಡ ಕೇಳಿ ಬರುತ್ತಿವೆ. ಆದರೆ, ಕ್ರಿಕೆಟ್​ನಲ್ಲೂ ಪಾರುಪತ್ಯ ಹೊಂದಿರುವ ಇಂಗ್ಲೆಂಡ್-ಆಸ್ಟ್ರೇಲಿಯಾ ದೇಶಗಳು ಟೋಕಿಯೊದಲ್ಲಿ ಉತ್ತಮ ಪ್ರದರ್ಶನ ನೀಡಿ ಪದಕ ಪಟ್ಟಿಯಲ್ಲಿ ಅಗ್ರ -10 ರಲ್ಲಿ ಸ್ಥಾನ ಪಡೆದಿದೆ ಎಂಬುದನ್ನು ಕೂಡ ಗಮನಿಸಬೇಕು. ಹಾಗಿದ್ರೆ ಕ್ರಿಕೆಟ್​​ ಆಡುವ ರಾಷ್ಟ್ರಗಳು ಒಲಿಂಪಿಕ್ಸ್​ ಪದಕ ಪಟ್ಟಿಯಲ್ಲಿ ಯಾವ ಸ್ಥಾನದಲ್ಲಿದೆ ಎಂದು ನೋಡೋಣ.

1- ಇಂಗ್ಲೆಂಡ್: ಗ್ರೇಟ್ ಬ್ರಿಟನ್ (ಇಂಗ್ಲೆಂಡ್) ಈ ಬಾರಿಯ ಒಲಿಂಪಿಕ್ಸ್ ನಲ್ಲಿ 22 ಚಿನ್ನ, 21 ಬೆಳ್ಳಿ ಮತ್ತು 22 ಕಂಚು ಸೇರಿದಂತೆ ಒಟ್ಟು 65 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಕ್ರಿಕೆಟ್ ತಂಡವು ಕ್ರಿಕೆಟ್ ಜಗತ್ತಿನಲ್ಲಿ ಮತ್ತು ಫುಟ್​ಬಾಲ್​ನಲ್ಲೂ ಪ್ರಮುಖ ತಂಡವಾಗಿ ಗುರುತಿಸಿಕೊಂಡಿರುವುದು ಇಲ್ಲಿ ವಿಶೇಷ.

2- ಆಸ್ಟ್ರೇಲಿಯಾ: ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಆಸ್ಟ್ರೇಲಿಯಾ ಆರನೇ ಸ್ಥಾನದಲ್ಲಿದ್ದು, 17 ಚಿನ್ನ, 7 ಬೆಳ್ಳಿ ಮತ್ತು 22 ಕಂಚು ಸೇರಿದಂತೆ ಒಟ್ಟು 46 ಪದಕಗಳನ್ನು ಗೆದ್ದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ಅಂಗಳದ ಸರ್ವಶ್ರೇಷ್ಠ ತಂಡವಾಗಿ ಇಂದು ಕೂಡ ಗುರುತಿಸಿಕೊಂಡಿದೆ. ಇದಕ್ಕೆ ಸಾಕ್ಷಿಯೇ ಈ ತಂಡ ಐದು ಬಾರಿ ಏಕದಿನ ವಿಶ್ವಕಪ್ ಗೆದ್ದಿರುವುದು.

3- ನ್ಯೂಜಿಲೆಂಡ್: ಟೋಕಿಯೊ ಒಲಿಂಪಿಕ್ಸ್ ನಲ್ಲಿ ನ್ಯೂಜಿಲ್ಯಾಂಡ್ 7 ಚಿನ್ನ, 6 ಬೆಳ್ಳಿ ಮತ್ತು 7 ಕಂಚು ಸೇರಿದಂತೆ ಒಟ್ಟು 20 ಪದಕಗಳೊಂದಿಗೆ 13 ನೇ ಸ್ಥಾನದಲ್ಲಿದೆ. ಇತ್ತ ಈ ದೇಶದಲ್ಲೂ ಕ್ರಿಕೆಟ್ ಕ್ರೇಜ್ ಜೋರಾಗಿಯೇ ಇದೆ. ಇಷ್ಟೇ ಅಲ್ಲದೆ ಇತ್ತೀಚೆಗಷ್ಟೇ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದಿತ್ತು.

4- ಜಮೈಕಾ: ಹಲವಾರು ದ್ವೀಪ ರಾಷ್ಟ್ರಗಳಿಂದ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ರೂಪಿತವಾಗಿದೆ. ಇದು ಜಮೈಕಾ, ಬಾರ್ಬಡೋಸ್, ಗಯಾನಾ, ಸೇಂಟ್ ಲೂಸಿಯಾ, ಟ್ರಿನಿಡಾಡ್ ಮತ್ತು ಟೊಬಾಗೊ, ಸೇಂಟ್ ಕಿಟ್ಸ್ ಮತ್ತು ನೆವಿಸ್ ಸೇರಿದಂತೆ ಹಲವು ದ್ವೀಪಗಳನ್ನು ಪ್ರತಿನಿಧಿಸುತ್ತದೆ. ಅದರಲ್ಲಿ ಜಮೈಕಾ ದ್ವೀಪರಾಷ್ಟ್ರವಯ ಟೋಕಿಯೊ ಒಲಿಂಪಿಕ್ಸ್‌ನಲ್ಲಿ 4 ಚಿನ್ನ, ಒಂದು ಬೆಳ್ಳಿ ಮತ್ತು 4 ಕಂಚು ಸೇರಿದಂತೆ ಒಟ್ಟು 9 ಪದಕಗಳನ್ನು ಗೆದ್ದಿದೆ. ಈ ಮೂಲಕ ಪದಕ ಪಟ್ಟಿಯಲ್ಲಿ 21 ನೇ ಸ್ಥಾನದಲ್ಲಿದೆ.

5- ಐರ್ಲೆಂಡ್: 2018 ರಲ್ಲಿ ಐರ್ಲೆಂಡ್ ದೇಶವು ಟೆಸ್ಟ್ ತಂಡದ ಮಾನ್ಯತೆ ಪಡೆಯಿತು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಈ ದೇಶದ ಪ್ರದರ್ಶನವನ್ನು ಗಮನಿಸಿದರೆ ಭಾರತಕ್ಕಿಂತ ಉತ್ತಮವಾಗಿದೆ. ಈ ಬಾರಿ ಐರ್ಲೆಂಡ್ ಎರಡು ಚಿನ್ನ, 2 ಕಂಚು ಸೇರಿದಂತೆ ಒಟ್ಟು 4 ಪದಕಗಳನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ 38 ನೇ ಸ್ಥಾನದಲ್ಲಿದೆ.

6- ಭಾರತ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವು ಈ ಬಾರಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚು ಸೇರಿದಂತೆ ಒಟ್ಟು 7 ಪದಕಗಳೊಂದಿಗೆ 48 ನೇ ಸ್ಥಾನ ಪಡೆದಿದೆ. ಟೆಸ್ಟ್ ಕ್ರಿಕೆಟ್​ನಲ್ಲಿ ನಂಬರ್ 1 ತಂಡ ಎನಿಸಿಕೊಂಡಿರುವ ಭಾರತದ ಒಲಿಂಪಿಕ್ಸ್ ಪ್ರದರ್ಶನ ಹೇಳಿಕೊಳ್ಳುವಂತಿಲ್ಲ ಎಂಬುದಕ್ಕೆ ಇದುವರೆಗಿನ ಪದಕ ಪಟ್ಟಿಗಳೇ ಸಾಕ್ಷಿ.

7-ದಕ್ಷಿಣ ಆಫ್ರಿಕಾ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಒಂದು ಚಿನ್ನ, ಎರಡು ಬೆಳ್ಳಿ ಸೇರಿದಂತೆ ಒಟ್ಟು 3 ಪದಕಗಳನ್ನು ದಕ್ಷಿಣ ಆಫ್ರಿಕಾ ಗೆದ್ದಿದ್ದು, ಈ ಮೂಲಕ ಮೆಡಲ್ ಟೇಬಲ್​ನಲ್ಲಿ 52 ನೇ ಸ್ಥಾನ ಪಡೆದಿದೆ. ಇದೇ ವೇಳೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಅಂಗಳದ ಬಲಿಷ್ಠ ತಂಡಗಳಲ್ಲೊಂದು ಎಂಬುದನ್ನು ಅಲ್ಲೆಗೆಳೆಯುವಂತಿಲ್ಲ.

ಇದಲ್ಲದೇ, ಕ್ರಿಕೆಟ್​ ಆಡುವ ದೇಶಗಳಾದ ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಜಿಂಬಾಬ್ವೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಯಾವುದೇ ಪದಕ ಗೆದ್ದಿಲ್ಲ.

ಇದನ್ನೂ ಓದಿ: Airtel: ಏರ್​ಟೆಲ್ ಕಡೆಯಿಂದ ನಿಮಗೆ ಈ ಮೆಸೇಜ್ ಬಂದಿದ್ರೆ ನಿರ್ಲಕ್ಷಿಸಿ

ಇದನ್ನೂ ಓದಿ: Suresh Raina: ರೈನಾ ಜೊತೆ ಸಚಿನ್ ಹೆಂಡ್ತಿಯನ್ನು ವಿಚಾರಿಸಿದ ಏರ್​ ಹೋಸ್ಟೆಸ್: ಆಮೇನಾಯ್ತು?

ಇದನ್ನೂ ಓದಿ: Jasprit Bumrah: ಜಹೀರ್ ಖಾನ್ ದಾಖಲೆ ಸರಿಗಟ್ಟಿದ ಜಸ್​ಪ್ರೀತ್ ಬುಮ್ರಾ

(olympics vs cricket: cricket nations medal tally in Tokyo olympics)

Published On - 4:02 pm, Mon, 9 August 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್