Sign In

By signing in or creating an account, you agree with Associated Broadcasting Company's Terms & Conditions and Privacy Policy.

On This Day: ಒಂದೇ ಇನ್ನಿಂಗ್ಸ್​ನಲ್ಲಿ 10 ವಿಕೆಟ್​! ಪಾಕಿಗಳ ಬೆನ್ನೆಲುಬು ಮುರಿದಿದ್ದ ಕನ್ನಡಿಗ ಕುಂಬ್ಳೆ ಸಾಧನೆಗೆ 23 ವರ್ಷ!

Anil Kumble: ಈ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಅನಿಲ್ ಕುಂಬ್ಳೆ 26.3 ಓವರ್ ಬೌಲಿಂಗ್ ಮಾಡಿ 10 ವಿಕೆಟ್ ಕಬಳಿಸಿ 74 ರನ್ ಬಿಟ್ಟುಕೊಟ್ಟಿದ್ದರು. ಈ ಇನ್ನಿಂಗ್ಸ್‌ನಲ್ಲಿ ಕುಂಬ್ಳೆ 9 ಮೇಡನ್ ಓವರ್‌ಗಳನ್ನು ಎಸೆದಿದ್ದರು. ಈ ಪಂದ್ಯವನ್ನು ಭಾರತ 212 ರನ್‌ಗಳಿಂದ ಗೆದ್ದುಕೊಂಡಿತು.

On This Day: ಒಂದೇ ಇನ್ನಿಂಗ್ಸ್​ನಲ್ಲಿ 10 ವಿಕೆಟ್​! ಪಾಕಿಗಳ ಬೆನ್ನೆಲುಬು ಮುರಿದಿದ್ದ ಕನ್ನಡಿಗ ಕುಂಬ್ಳೆ ಸಾಧನೆಗೆ 23 ವರ್ಷ!
1999 ರಲ್ಲಿ ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on: Feb 07, 2022 | 8:14 PM

ಭಾರತದ ಮಾಜಿ ಬೌಲರ್ ಅನಿಲ್ ಕುಂಬ್ಳೆ (Anil Kumble) ತಮ್ಮ ವೃತ್ತಿ ಜೀವನದಲ್ಲಿ ಹಲವಾರು ಐತಿಹಾಸಿಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಟೀಂ ಇಂಡಿಯಾದ ದಂತಕಥೆಗಳಲ್ಲಿ ಒಬ್ಬರಾದ ಅನಿಲ್ ಕುಂಬ್ಳೆ ಅವರು ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೊಡ್ಡ ತಂಡಗಳ ವಿರುದ್ಧ ತಮ್ಮ ಅತ್ಯುತ್ತಮ ಬೌಲಿಂಗ್‌ನಿಂದ ಪ್ರಪಂಚದ ಬೆಸ್ಟ್ ಸ್ಪಿನ್ನರ್​​ಗಳಲ್ಲಿ ಒಬ್ಬರಾಗಿದ್ದಾರೆ. ಆದಾಗ್ಯೂ, ಪಾಕಿಸ್ತಾನದ ವಿರುದ್ಧ ((Ind vs Pak) ಆಡಿದ ಆ ಒಂದು ಪಂದ್ಯ ಅನಿಲ್ ಕುಂಬ್ಳೆ ಅವರ ವೃತ್ತಿಜೀವನದಲ್ಲಿ ಪ್ರಮುಖವಾಗಿದೆ. 23 ವರ್ಷಗಳ ಹಿಂದೆ ಇದೇ ದಿನ ಕುಂಬ್ಳೆ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಒಂದರಲ್ಲಿ 10 ವಿಕೆಟ್ ಪಡೆದಿದ್ದರು. ಈ ಕುರಿತು ಬಿಸಿಸಿಐ ವಿಡಿಯೋ ಟ್ವೀಟ್ ಮಾಡಿದೆ.

ಪಾಕಿಸ್ತಾನ ತಂಡ 1999ರಲ್ಲಿ ಭಾರತ ಪ್ರವಾಸ ಕೈಗೊಂಡಿತ್ತು.ಇಲ್ಲಿ ಉಭಯ ತಂಡಗಳ ನಡುವೆ ಟೆಸ್ಟ್ ಸರಣಿ ನಡೆದಿತ್ತು. ಸರಣಿಯ ಎರಡನೇ ಪಂದ್ಯ ದೆಹಲಿಯಲ್ಲಿ ಫೆಬ್ರವರಿ 4 ರಿಂದ 7 ರವರೆಗೆ ನಡೆದಿತ್ತು. ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 252 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 339 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೆ, ಪಾಕಿಸ್ತಾನ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 172 ರನ್‌ಗಳಿಗೆ ಕುಸಿಯಿತು. ಎರಡನೇ ಇನಿಂಗ್ಸ್‌ನಲ್ಲಿ 207ಕ್ಕೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.

ಪಂದ್ಯ ಹೀಗಿತ್ತು ಮೊದಲ ಇನ್ನಿಂಗ್ಸ್‌ನಲ್ಲಿ ಕುಂಬ್ಳೆ 4 ವಿಕೆಟ್‌ಗಳನ್ನು ಉರುಳಿಸಿದ್ದರು. ಮೊಹಮ್ಮದ್ ಯೂಸುಫ್ ಅವರು ಇಂಜಮಾಮ್-ಉಲ್-ಹಕ್ ಅವರಂತಹ ಆಟಗಾರರನ್ನು ಹೊರಹಾಕಿದರು. ಆದರೆ, ಎರಡನೇ ಇನಿಂಗ್ಸ್‌ನಲ್ಲಿ ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ಪೆವಿಲಿಯನ್‌ಗೆ ಪಾಕಿಸ್ತಾನದ 10 ಆಟಗಾರರನ್ನೂ ಕಳುಹಿಸುವಲ್ಲಿ ಕುಂಬ್ಳೆ ಯಶಸ್ವಿಯಾಗಿದ್ದರು. ಎಜಾಜ್ ಅಹ್ಮದ್, ಮೊಹಮ್ಮದ್ ಯೂಸುಫ್, ಸಕ್ಲೇನ್ ಮುಸ್ತಾಕ್ ಅವರನ್ನು ಶೂನ್ಯಕ್ಕೆ ಕುಂಬ್ಳೆ ಪೆವಿಲಿಯನ್‌ಗೆ ಸೇರಿಸಿದರು.

ಈ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಅನಿಲ್ ಕುಂಬ್ಳೆ 26.3 ಓವರ್ ಬೌಲಿಂಗ್ ಮಾಡಿ 10 ವಿಕೆಟ್ ಕಬಳಿಸಿ 74 ರನ್ ಬಿಟ್ಟುಕೊಟ್ಟಿದ್ದರು. ಈ ಇನ್ನಿಂಗ್ಸ್‌ನಲ್ಲಿ ಕುಂಬ್ಳೆ 9 ಮೇಡನ್ ಓವರ್‌ಗಳನ್ನು ಎಸೆದಿದ್ದರು. ಈ ಪಂದ್ಯವನ್ನು ಭಾರತ 212 ರನ್‌ಗಳಿಂದ ಗೆದ್ದುಕೊಂಡಿತು.

ಇದನ್ನೂ ಓದಿ:IPL 2022 Auction: ಈ ಕೆರಿಬಿಯನ್ ಆಲ್​ರೌಂಡರ್​ಗಾಗಿ ಹಣದ ಮಳೆಯನ್ನೇ ಸುರಿಸಲಿದೆಯಂತೆ ಆರ್​ಸಿಬಿ..!

ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ