IPL 2022: 17 ಸಿಕ್ಸ್, 13 ಫೋರ್​…49 ರನ್​ಗೆ ಆಲೌಟ್: ಈ ದಿನ RCB ಗೆ ವಿಶೇಷ ದಿನ

IPL 2022: RCB ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್.

IPL 2022: 17 ಸಿಕ್ಸ್, 13 ಫೋರ್​...49 ರನ್​ಗೆ ಆಲೌಟ್: ಈ ದಿನ RCB ಗೆ ವಿಶೇಷ ದಿನ
RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on:Apr 23, 2022 | 4:04 PM

IPL 2022: ಐಪಿಎಲ್​ ಇತಿಹಾಸದ ಅತ್ಯಂತ ಗರಿಷ್ಠ ಸ್ಕೋರ್ ಯಾವುದು ಎಂದು ಕೇಳಿದ್ರೆ ಥಟ್ಟನೆ ಬರುವ ಉತ್ತರ 263. ಕಳೆದ 14 ಸೀಸನ್​ ಐಪಿಎಲ್​ನಿಂದ ಯಾರಿಂದಲೂ ಮುರಿಯಲು ಸಾಧ್ಯವಾಗದ ಇಂತಹದೊಂದು ದಾಖಲೆ ನಿರ್ಮಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB). 2013 ರ ಏಪ್ರಿಲ್ 23 ರಂದು ಆರ್​ಸಿಬಿ ಹಾಗೂ ಪುಣೆ ವಾರಿಯರ್ಸ್ ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಪುಣೆ ನಾಯಕ ಆರೋನ್ ಫಿಂಚ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ನಾಯಕನ ನಿರ್ಧಾರ ತಪ್ಪು ಎನ್ನುವಂತೆ ಆರ್​ಸಿಬಿ ತಂಡಕ್ಕೆ ಕ್ರಿಸ್ ಗೇಲ್ ಹಾಗೂ ತಿಲಕರತ್ನೆ ದಿಲ್ಶಾನ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 167 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಅಬ್ಬರಿಸಿದ್ದರು. ಈ ವೇಳೆ ದಿಲ್ಶಾನ್ ಕಲೆಹಾಕಿದ್ದು ಕೇವಲ 33 ರನ್​ ಮಾತ್ರ. ಅಂದರೆ ಅದಾಗಲೇ ಗೇಲ್ ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು.

ಶತಕದ ಬಳಿಕ ಮತ್ತಷ್ಟು ಅಬ್ಬರಿಸಿದ ಗೇಲ್ 17 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ನೊಂದಿಗೆ ಕೇವಲ 66 ಎಸೆತಗಳಲ್ಲಿ ಅಜೇಯ 175 ರನ್​ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆಯನ್ನು ನಿರ್ಮಿಸಿದ್ದರು. ಇದರೊಂದಿಗೆ ಆರ್​ಸಿಬಿ ತಂಡದ ಸ್ಕೋರ್ 5 ವಿಕೆಟ್ ನಷ್ಟಕ್ಕೆ 263 ಕ್ಕೆ ಬಂದು ನಿಂತಿತು. ಇದು ಐಪಿಎಲ್ ಇತಿಹಾಸದ ಮೂಡಿಬಂದ ಗರಿಷ್ಠ ಸ್ಕೋರ್ ಆಗಿದೆ.

ಇಂತಹದೊಂದು ಐತಿಹಾಸಿಕ ದಾಖಲೆ ಬರೆದ ಆರ್​ಸಿಬಿ ಕೆಲ ವರ್ಷಗಳ ಬೆನ್ನಲ್ಲೇ ಅತ್ಯಂತ ಕೆಟ್ಟ ದಾಖಲೆಯನ್ನೂ ಕೂಡ ತನ್ನದಾಗಿಸಿಕೊಂಡಿತ್ತು ಎಂಬುದು ವಿಶೇಷ. ಅಂದರೆ 2017 ರಲ್ಲಿ ಆರ್​ಸಿಬಿ ತಂಡವು ಕೆಕೆಆರ್ ನೀಡಿದ 131 ರನ್​ಗಳ ಗುರಿಯನ್ನು ಬೆನ್ನತ್ತಿ ಕೇವಲ 49 ರನ್​ಗಳಿಗೆ ಆಲೌಟ್ ಆಯಿತು. ಈ ವೇಳೆ ಆರ್​ಸಿಬಿ ಪರ ಮೂಡಿಬಂದ ಗರಿಷ್ಠ ವೈಯುಕ್ತಿಕ ಸ್ಕೋರ್ 9. ಇದನ್ನು ಬಾರಿಸಿದ್ದು ಕೇದರ್ ಜಾಧವ್. ಅಂದು ಕೇವಲ 49 ರನ್​ಗೆ ಆಲೌಟ್ ಆಗುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಸರ್ವಪತನ ಕಂಡ ತಂಡ ಎಂಬ ಕೆಟ್ಟ ದಾಖಲೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿತು.

ಅಂದರೆ ಐಪಿಎಲ್​ನ ಗರಿಷ್ಠ ಸ್ಕೋರ್ ಹಾಗೂ ಕನಿಷ್ಠ ಸ್ಕೋರ್ ದಾಖಲೆ ಆರ್​ಸಿಬಿ ಹೆಸರಿನಲ್ಲಿದೆ. ವಿಶೇಷ ಎಂದರೆ ಈ ಎರಡೂ ದಾಖಲೆಗಳು ಮೂಡಿಬಂದಿರುವುದು ಏಪ್ರಿಲ್ 23 ರಂದು. 2013 ರ ಏಪ್ರಿಲ್ 23 ರಂದು 263 ರನ್ ಬಾರಿಸಿ ದಾಖಲೆ ಬರೆದರೆ, 2017 ರ ಏಪ್ರಿಲ್ 23 ರಂದು 49 ರನ್​ಗೆ ಆಲೌಟ್​ ಆಗಿ ಅತ್ಯಂತ ಹೀನಾಯ ದಾಖಲೆ ನಿರ್ಮಿಸಿತು.

ಇದೀಗ ಮತ್ತೊಮ್ಮೆ ಏಪ್ರಿಲ್ 23 ರಂದು ಆರ್​ಸಿಬಿ ಪಂದ್ಯವಾಡುತ್ತಿದೆ. ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಎಂಬುದು ವಿಶೇಷ. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಯಾವ ದಾಖಲೆ ಬರೆಯಲಿದೆ ಎಂಬುದೇ ಕುತೂಹಲ.

RCB ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 3:25 pm, Sat, 23 April 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ