AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ನಲ್ಲಿ ಅಬ್ಬರಿಸಿ ಹಲವು ದಾಖಲೆ ಬರೆದ ಪೃಥ್ವಿ ಶಾ

Prithvi Shaw: ಇಂಗ್ಲೆಂಡ್ ಪಿಚ್​ನಲ್ಲಿ ತಮ್ಮ ಬ್ಯಾಟಿಂಗ್ ಪವರ್ ತೋರಿಸುತ್ತಿರುವ ಪೃಥ್ವಿ ಶಾ ಈ ಬಾರಿಯ ಒನ್​ ಡೇ ಕಪ್​ನಲ್ಲಿ 400 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಕೇವಲ 4 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಯುವ ದಾಂಡಿಗ ದ್ವಿಶತಕ ಹಾಗೂ ಶತಕದೊಂದಿಗೆ ಇದುವರೆಗೆ 429 ರನ್​ ಕಲೆಹಾಕಿದ್ದಾರೆ.

ಇಂಗ್ಲೆಂಡ್​ನಲ್ಲಿ ಅಬ್ಬರಿಸಿ ಹಲವು ದಾಖಲೆ ಬರೆದ ಪೃಥ್ವಿ ಶಾ
Prithvi Shaw
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 15, 2023 | 10:39 PM

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಒನ್​ ಡೇ ಕಪ್ ಟೂರ್ನಿಯಲ್ಲಿ ಪೃಥ್ವಿ ಶಾ (Prithvi Shaw) ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಟೂರ್ನಿಯ 23ನೇ ಪಂದ್ಯದಲ್ಲಿ ಸೋಮರ್‌ಸೆಟ್ ವಿರುದ್ಧ ದ್ವಿಶತಕ ಸಿಡಿಸಿ ಮಿಂಚಿದ್ದ ಟೀಮ್ ಇಂಡಿಯಾ ಆಟಗಾರ, ಆ ಬಳಿಕ ಡರ್ಹಾಮ್ ವಿರುದ್ಧ ಸೆಂಚುರಿ ಸಿಡಿಸಿದ್ದರು.

ಡರ್ಹಾಮ್ ವಿರುದ್ಧದ ಪಂದ್ಯದಲ್ಲಿ ನಾರ್ಥಾಂಪ್ಟನ್‌ಶೈರ್ ಪರ ಆರಂಭಿಕನಾಗಿ ಕಣಕ್ಕಿಳಿದ ಪೃಥ್ವಿ ಕೇವಲ 76 ಎಸೆತಗಳಲ್ಲಿ 15 ಫೋರ್​ ಮತ್ತು 7 ಸಿಕ್ಸರ್‌ಗಳೊಂದಿಗೆ ಅಜೇಯ 125 ರನ್ ಸಿಡಿಸಿದ್ದರು. ಈ 125 ರನ್​ಗಳೊಂದಿಗೆ ಪೃಥ್ವಿ ಶಾ ಲೀಸ್ಟ್​ ಎ ಕ್ರಿಕೆಟ್​ನಲ್ಲಿ 3 ಸಾವಿರ ರನ್ ಪೂರೈಸಿದ್ದಾರೆ.

ಪೃಥ್ವಿ ಪವರ್​ಗೆ ದಾಖಲೆಗಳು ನಿರ್ಮಾಣ:

ಇಂಗ್ಲೆಂಡ್ ಪಿಚ್​ನಲ್ಲಿ ತಮ್ಮ ಬ್ಯಾಟಿಂಗ್ ಪವರ್ ತೋರಿಸುತ್ತಿರುವ ಪೃಥ್ವಿ ಶಾ ಈ ಬಾರಿಯ ಒನ್​ ಡೇ ಕಪ್​ನಲ್ಲಿ 400 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಕೇವಲ 4 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಯುವ ದಾಂಡಿಗ ದ್ವಿಶತಕ ಹಾಗೂ ಶತಕದೊಂದಿಗೆ ಇದುವರೆಗೆ 429 ರನ್​ ಕಲೆಹಾಕಿದ್ದಾರೆ.

ಮೂರು ಸಾವಿರ ರನ್ ಸರದಾರ:

ಈ ಟೂರ್ನಿಯಲ್ಲಿ ನಾನೂರಕ್ಕೂ ಹೆಚ್ಚು ರನ್​ ಕಲೆಹಾಕುವ ಮೂಲಕ ಪೃಥ್ವಿ ಶಾ ಲೀಸ್ಟ್​ ಎ ಕ್ರಿಕೆಟ್​ನಲ್ಲಿ 3,000 ರನ್ ಪೂರೈಸಿದ್ದಾರೆ. ಅದು ಕೂಡ ಕೇವಲ 57 ಪಂದ್ಯಗಳಲ್ಲಿ ಎಂಬುದು ವಿಶೇಷ.

ಅಂದರೆ ಲೀಸ್ಟ್​ ಎ ಕ್ರಿಕೆಟ್​ 57 ಇನಿಂಗ್ಸ್ ಆಡಿರುವ ಪೃಥ್ವಿ ಶಾ 57.66 ಸರಾಸರಿಯಲ್ಲಿ ಒಟ್ಟು 3,056 ರನ್‌ ಗಳಿಸಿದ್ದಾರೆ. ಈ ವೇಳೆ 10 ಶತಕ ಹಾಗೂ 11 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಲೀಸ್ಟ್​ ಎ ಕ್ರಿಕೆಟ್​ನಲ್ಲಿ ಅತ್ಯುತ್ತಮ ಸರಾಸರಿ:

ಅತ್ಯುತ್ತಮ ಸರಾಸರಿಯೊಂದಿಗೆ ಲೀಸ್ಟ್ ಎ ಕ್ರಿಕೆಟ್​ನಲ್ಲಿ 2 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಭಾರತೀಯರ ಪಟ್ಟಿಯಲ್ಲಿ ಇದೀಗ ಪೃಥ್ವಿ ಶಾ ಮೂರನೇ ಸ್ಥಾನಕ್ಕೇರಿದ್ದಾರೆ.

ಈ ಪಟ್ಟಿಯಲ್ಲಿ ಯುವ ದಾಂಡಿಗ ರುತುರಾಜ್ ಗಾಯಕ್ವಾಡ್ (60.32) ಅಗ್ರಸ್ಥಾನದಲ್ಲಿದ್ದರೆ, ಚೇತೇಶ್ವರ ಪೂಜಾರ (58.15) ನಂತರದ ಸ್ಥಾನದಲ್ಲಿದ್ದಾರೆ. ಇದೀಗ 57.66 ಸರಾಸರಿಯೊಂದಿಗೆ ರನ್ ಪೇರಿಸಿ ಪೃಥ್ವಿ ಶಾ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

ಇದನ್ನೂ ಓದಿ: ಭಾರತ ವಿಶ್ವಕಪ್ ತಂಡದಿಂದ 7 ಆಟಗಾರರು ಔಟ್..!

ಒಟ್ಟಿನಲ್ಲಿ ಕಳಪೆ ಫಾರ್ಮ್​ನಿಂದ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಪೃಥ್ವಿ ಇದೀಗ ಆಂಗ್ಲರ ನಾಡಿನಲ್ಲಿ ಅಬ್ಬರಿಸುವ ಮೂಲಕ ಮತ್ತೆ ಭಾರತ ತಂಡ ಕದ ತಟ್ಟುವ ವಿಶ್ವಾಸದಲ್ಲಿದ್ದಾರೆ. ಈ ವಿಶ್ವಾಸದೊಂದಿಗೆ ಮುಂದಿನ ಪಂದ್ಯಗಳಲ್ಲೂ ಭರ್ಜರಿಯಾಗಿ ಬ್ಯಾಟ್ ಬೀಸಲಿದ್ದಾರಾ ಕಾದು ನೋಡಬೇಕಿದೆ.

ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ