IND vs WI: ಭಾರತ- ವೆಸ್ಟ್ ಇಂಡೀಸ್ ಸರಣಿ ಆರಂಭಕ್ಕೇ ಮೂರೇ ದಿನ ಬಾಕಿ: ಪಂದ್ಯ ಎಲ್ಲಿ ನಡೆಯಲಿದೆ?, ಎಷ್ಟು ಗಂಟೆಗೆ?, ಇಲ್ಲಿದೆ ಮಾಹಿತಿ

IND vs WI Series Schedule: ಟೀಮ್ ಇಂಡಿಯಾ ಒಂದು ವಾರ ಮುಂಚಿತವಾಗಿಯೇ ಕೆರಿಬಿಯನ್ ನಾಡಿಗೆ ತೆರಳಿದ್ದು, ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡು ಅಭ್ಯಾಸ ನಡೆಸುತ್ತಿದ್ದಾರೆ. ಶನಿವಾರ ರೋಹಿತ್ ಶರ್ಮಾ ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ.

IND vs WI: ಭಾರತ- ವೆಸ್ಟ್ ಇಂಡೀಸ್ ಸರಣಿ ಆರಂಭಕ್ಕೇ ಮೂರೇ ದಿನ ಬಾಕಿ: ಪಂದ್ಯ ಎಲ್ಲಿ ನಡೆಯಲಿದೆ?, ಎಷ್ಟು ಗಂಟೆಗೆ?, ಇಲ್ಲಿದೆ ಮಾಹಿತಿ
India vs West Indies
Follow us
Vinay Bhat
|

Updated on: Jul 09, 2023 | 9:38 AM

ಭಾರೀ ಕುತೂಹಲ ಕೆರಳಿಸಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಆರಂಭಕ್ಕೆ ಎರಡೇ ದಿನಗಳು ಬಾಕಿ ಉಳಿದಿದೆ. ಜುಲೈ 12 ರಂದು ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಸರಣಿಗೆ ಚಾಲನೆ ಸಿಗಲಿದೆ. ಭಾರತ ಮತ್ತು ವಿಂಡೀಸ್ ನಡುವೆ ಎರಡು ಪಂದ್ಯಗಳ ಟೆಸ್ಟ್, ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಟೀಮ್ ಇಂಡಿಯಾ (Team India) ಒಂದು ವಾರ ಮುಂಚಿತವಾಗಿಯೇ ಕೆರಿಬಿಯನ್ ನಾಡಿಗೆ ತೆರಳಿದ್ದು, ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡು ಅಭ್ಯಾಸ ನಡೆಸುತ್ತಿದೆ. ಶನಿವಾರ ರೋಹಿತ್ ಶರ್ಮಾ (Rohit Sharma) ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ.

ಹಾಗಾದರೆ, ಭಾರತ- ವಿಂಡೀಸ್ ಸರಣಿ ಯಾವೆಗೆಲ್ಲ ನಡೆಯಲಿದೆ?, ಎಷ್ಟು ಗಂಟೆಗೆ ಪಂದ್ಯ ಶುರುವಾಗಲಿದೆ?, ಇಲ್ಲಿದೆ ನೋಡಿ ಎಲ್ಲ ಮಾಹಿತಿ.

ಎರಡು ಪಂದ್ಯಗಳ ಟೆಸ್ಟ್ ಸರಣಿ:

  • ಜುಲೈ 12 ರಿಂದ ಜುಲೈ 16 ವರೆಗೆ ಮೊದಲ ಟೆಸ್ಟ್ – ವಿಂಡ್ಸರ್ ಪಾರ್ಕ್, ಡೊಮಿನಿಕಾದ
  • ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ – ಕ್ವೀನ್ಸ್ ಪಾರ್ಕ್ ಓವಲ್, ಟ್ರಿನಿಡಾಡ್

(ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ವಿಂಡೀಸ್ ಕಾಲಮಾನದ ಪ್ರಕಾರ ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಆದರೆ, ಇದು ಭಾರತೀಯ ಕಾಲ ಮಾನದ ಪ್ರಕಾರ ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ.)

ಇದನ್ನೂ ಓದಿ
Image
Duleep Trophy 2023 Final: ಚಾಂಪಿಯನ್ ಪಟ್ಟಕ್ಕಾಗಿ ಪಶ್ಚಿಮ- ದಕ್ಷಿಣ ವಲಯ ತಂಡಗಳ ನಡುವೆ ಫೈಟ್! ಫೈನಲ್ ಪಂದ್ಯ ಯಾವಾಗ?
Image
IND vs IRE: ಜಸ್ಪ್ರೀತ್ ಬುಮ್ರಾಗೆ ನಾಯಕತ್ವ! ಐರ್ಲೆಂಡ್ ಪ್ರವಾಸಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ
Image
IND vs BAN: 4 ತಿಂಗಳ ಬಳಿಕ ಅಖಾಡಕ್ಕೆ; ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ ಬಾಂಗ್ಲಾ ಎದುರಾಳಿ..!
Image
ENG vs AUS 3rd Test: ರೋಚಕ ಘಟ್ಟದತ್ತ ಆ್ಯಶಸ್ ತೃತೀಯ ಟೆಸ್ಟ್: ಇಂಗ್ಲೆಂಡ್ ಗೆಲುವಿಗೆ ಬೇಕು 224 ರನ್ಸ್

WC Qualifiers Final 2023: ವಿಶ್ವಕಪ್ ಕ್ವಾಲಿಫೈಯರ್ ಫೈನಲ್; ಇಂದು ಶ್ರೀಲಂಕಾ- ನೆದರ್ಲೆಂಡ್ಸ್ ಹಣಾಹಣಿ

ಮೂರು ಪಂದ್ಯಗಳ ಏಕದಿನ ಸರಣಿ:

  • ಮೊದಲ ಏಕದಿನ ಜುಲೈ 27 – ಕೆನ್ಸಿಂಗ್ಟನ್ ಓವಲ್, ಬಾರ್ಬಡಸ್
  • ದ್ವಿತೀಯ ಏಕದಿನ ಜುಲೈ 29 – ಕೆನ್ಸಿಂಗ್ಟನ್ ಓವಲ್, ಬಾರ್ಬಡಸ್
  • ತೃತೀಯ ಏಕದಿನ ಆಗಸ್ಟ್ 1 – ಬ್ರಿಯನ್ ಲಾರಾ ಸ್ಟೇಡಿಯಂ, ಟ್ರಿನಿಡಾಡ್

(ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ)

ಐದು ಪಂದ್ಯಗಳ ಟಿ20 ಸರಣಿ:

  • ಮೊದಲ ಟಿ20 ಆಗಸ್ಟ್ 3 – ಬ್ರಿಯನ್ ಲಾರಾ ಸ್ಟೇಡಿಯಂ, ಟ್ರಿನಿಡಾಟ್
  • ದ್ವಿತೀಯ ಟಿ20 ಆಗಸ್ಟ್ 6 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ
  • ತೃತೀಯ ಟಿ20 ಆಗಸ್ಟ್ 8 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ
  • ನಾಲ್ಕನೇ ಟಿ20 ಆಗಸ್ಟ್ 12 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ
  • ಐದನೇ ಟಿ20 ಆಗಸ್ಟ್ 13 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ

(ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಐದು ಪಂದ್ಯಗಳ ಟಿ20 ಸರಣಿ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಪ್ರಾರಂಭವಾಗಲಿದೆ)

ಭಾರತದ ಕೆರಿಬಿಯನ್ ಪ್ರವಾಸದ ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳು ದೂರದರ್ಶನ್ ನೆಟ್​ವರ್ಕ್​ನ ಡಿಡಿ ಸ್ಪೋರ್ಟ್ಸ್​ನಲ್ಲಿ ಮಾತ್ರ ನೇರಪ್ರಸಾರ ಕಾಣಲಿದೆ. ಅದುಬಿಟ್ಟರೆ ಆನ್​ಲೈನ್​ನಲ್ಲಿ ವೀಕ್ಷಿಸುವವರು ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್ ಮೂಲಕ ನೋಡಬಹುದು.

ಟೆಸ್ಟ್ ಸರಣಿಗೆ ಉಭಯ ತಂಡಗಳು:

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವೀಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ವೆಸ್ಟ್ ಇಂಡೀಸ್ ತಂಡ: ಕ್ರೇಗ್ ಬೆಥ್‌ವೈಟ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್, ಟಿ ಚಂದ್ರಪಾಲ್, ರಹಕೀಮ್ ಕಾರ್ನ್‌ವಾಲ್, ಜೋಶುವಾ ಡಿ ಸಿಲ್ವಾ, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕಿರ್ಕ್ ಮೆಕೆಂಜಿ, ರೇಯಾನ್, ಕೆಮರ್ ರೋಚ್, ಜೋಮೆಲ್.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್, ಮುಖೇಶ್ ಕುಮಾರ್, ಉಮ್ರಾನ್ ಮಲಿಕ್.

ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ