ಭಾರೀ ಕುತೂಹಲ ಕೆರಳಿಸಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಆರಂಭಕ್ಕೆ ಎರಡೇ ದಿನಗಳು ಬಾಕಿ ಉಳಿದಿದೆ. ಜುಲೈ 12 ರಂದು ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಸರಣಿಗೆ ಚಾಲನೆ ಸಿಗಲಿದೆ. ಭಾರತ ಮತ್ತು ವಿಂಡೀಸ್ ನಡುವೆ ಎರಡು ಪಂದ್ಯಗಳ ಟೆಸ್ಟ್, ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಟೀಮ್ ಇಂಡಿಯಾ (Team India) ಒಂದು ವಾರ ಮುಂಚಿತವಾಗಿಯೇ ಕೆರಿಬಿಯನ್ ನಾಡಿಗೆ ತೆರಳಿದ್ದು, ಅಲ್ಲಿನ ವಾತಾವರಣಕ್ಕೆ ಹೊಂದಿಕೊಂಡು ಅಭ್ಯಾಸ ನಡೆಸುತ್ತಿದೆ. ಶನಿವಾರ ರೋಹಿತ್ ಶರ್ಮಾ (Rohit Sharma) ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ.
ಹಾಗಾದರೆ, ಭಾರತ- ವಿಂಡೀಸ್ ಸರಣಿ ಯಾವೆಗೆಲ್ಲ ನಡೆಯಲಿದೆ?, ಎಷ್ಟು ಗಂಟೆಗೆ ಪಂದ್ಯ ಶುರುವಾಗಲಿದೆ?, ಇಲ್ಲಿದೆ ನೋಡಿ ಎಲ್ಲ ಮಾಹಿತಿ.
(ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ವಿಂಡೀಸ್ ಕಾಲಮಾನದ ಪ್ರಕಾರ ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಆದರೆ, ಇದು ಭಾರತೀಯ ಕಾಲ ಮಾನದ ಪ್ರಕಾರ ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ.)
WC Qualifiers Final 2023: ವಿಶ್ವಕಪ್ ಕ್ವಾಲಿಫೈಯರ್ ಫೈನಲ್; ಇಂದು ಶ್ರೀಲಂಕಾ- ನೆದರ್ಲೆಂಡ್ಸ್ ಹಣಾಹಣಿ
(ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ)
(ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಐದು ಪಂದ್ಯಗಳ ಟಿ20 ಸರಣಿ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಪ್ರಾರಂಭವಾಗಲಿದೆ)
ಭಾರತದ ಕೆರಿಬಿಯನ್ ಪ್ರವಾಸದ ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳು ದೂರದರ್ಶನ್ ನೆಟ್ವರ್ಕ್ನ ಡಿಡಿ ಸ್ಪೋರ್ಟ್ಸ್ನಲ್ಲಿ ಮಾತ್ರ ನೇರಪ್ರಸಾರ ಕಾಣಲಿದೆ. ಅದುಬಿಟ್ಟರೆ ಆನ್ಲೈನ್ನಲ್ಲಿ ವೀಕ್ಷಿಸುವವರು ಜಿಯೋ ಸಿನಿಮಾ ಮತ್ತು ಫ್ಯಾನ್ಕೋಡ್ ಆ್ಯಪ್ ಮೂಲಕ ನೋಡಬಹುದು.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವೀಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.
ವೆಸ್ಟ್ ಇಂಡೀಸ್ ತಂಡ: ಕ್ರೇಗ್ ಬೆಥ್‌ವೈಟ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್, ಟಿ ಚಂದ್ರಪಾಲ್, ರಹಕೀಮ್ ಕಾರ್ನ್‌ವಾಲ್, ಜೋಶುವಾ ಡಿ ಸಿಲ್ವಾ, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕಿರ್ಕ್ ಮೆಕೆಂಜಿ, ರೇಯಾನ್, ಕೆಮರ್ ರೋಚ್, ಜೋಮೆಲ್.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್, ಮುಖೇಶ್ ಕುಮಾರ್, ಉಮ್ರಾನ್ ಮಲಿಕ್.
ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ