IND vs ENG: ರೋಹಿತ್ಗೆ ಹಿಂಬಡ್ತಿ, ಗಿಲ್ಗೆ ಮುಂಬಡ್ತಿ: ಟೀಮ್ ಇಂಡಿಯಾ ಮಾಜಿ ಆಟಗಾರನ ರಣತಂತ್ರ
India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ವಿಶಾಖಪಟ್ಟಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಪ್ರದರ್ಶನದ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಯುವ ಆಟಗಾರ ಶುಭ್‌ಮನ್ ಗಿಲ್ ಪ್ರದರ್ಶನದ ವ್ಯಾಪಕ ಆಕ್ರೋಶಗಳು ಕೇಳಿ ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಕಳೆದ 10 ಟೆಸ್ಟ್ ಇನಿಂಗ್ಸ್ಗಳಲ್ಲಿ ಗಿಲ್ ವಿಫಲರಾಗಿರುವುದು. ಈ ವೈಫಲ್ಯಕ್ಕೆ ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಕಾರಣಾನಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಏಕೆಂದರೆ ಶುಭ್‌ಮನ್ ಗಿಲ್ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ಆಟಗಾರ. ಇದೀಗ ಮೂರನೇ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ಇನ್ನು ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಇಲ್ಲಿ ಆರಂಭಿಕನಾಗಿ ರೋಹಿತ್ ಶರ್ಮಾ ಕಡೆಯಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡದ ಸಂಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವುದು ಸೂಕ್ತ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್.
ವಾಸಿಂ ಜಾಫರ್ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ಗೂ ಮುನ್ನ ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಇಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಸ್ಥಾನ ಪಲ್ಲಟ ಮಾಡುವುದು ಉತ್ತಮ ಎಂದಿದ್ದಾರೆ ಜಾಫರ್.
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್‌ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಬೇಕು. ಇನ್ನು ಅನುಭವಿ ಆಟಗಾರನಾಗಿ ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ.
ಏಕೆಂದರೆ ರೋಹಿತ್ ಶರ್ಮಾ ಸ್ಪಿನ್ ಉತ್ತಮವಾಗಿ ಆಡುತ್ತಾರೆ. ಅವರು 3ನೇ ಕ್ರಮಾಂಕದಲ್ಲಿ ಆಡಿದರೆ ಆತಂಕ ಪಡುವ ಅಗತ್ಯವಿಲ್ಲ. ಗಿಲ್ ಆರಂಭಿಕನಾಗಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಅದೇ ಸ್ಥಾನದಲ್ಲಿ ಅವರನ್ನು ಮತ್ತೆ ಕಣಕ್ಕಿಳಿಸಬೇಕು. ಇದರಿಂದ ಅವರು ಮತ್ತೆ ಫಾರ್ಮ್ ಕಂಡುಕೊಳ್ಳುವ ಸಾಧ್ಯತೆಯಿದೆ ಎಂದು ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
ವಾಸಿಂ ಜಾಫರ್ ನೀಡಿರುವ ಸಲಹೆವು ಟೀಮ್ ಇಂಡಿಯಾದ ಭವಿಷ್ಯದ ದೃಷ್ಟಿಯಿಂದಲೂ ಉತ್ತಮ. ಏಕೆಂದರೆ 36 ವರ್ಷದ ರೋಹಿತ್ ಶರ್ಮಾ ಹೆಚ್ಚೆಂದರೆ ಒಂದು ವರ್ಷ ಟೆಸ್ಟ್ ಆಡಬಹುದು. ಅದಕ್ಕೂ ಮುನ್ನ ಖಾಯಂ ಆರಂಭಿಕರನ್ನು ಕಂಡುಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡ ತನ್ನ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಲಿದೆಯಾ ಕಾದು ನೋಡಬೇಕಿದೆ.
ಇದನ್ನೂ ಓದಿ: IND vs ENG: ರವೀಂದ್ರ ಜಡೇಜಾ ಬದಲಿ ಆಟಗಾರ ಯಾರು?
ಭಾರತ ಟೆಸ್ಟ್ ತಂಡ (2ನೇ ಪಂದ್ಯಕ್ಕೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.