IPL 2021 Points Table, Purple Cap and Orange Cap: ಯಾವ ಪ್ಲೇಯರ್ ಕೈಯಲ್ಲಿದೆ ಆರೆಂಜ್ ಕ್ಯಾಪ್-ಪರ್ಪಲ್ ಕ್ಯಾಪ್?

| Updated By: Vinay Bhat

Updated on: Sep 26, 2021 | 11:48 AM

ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ತೊಟ್ಟಿರುವ ಆಟಗಾರರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಖರ್ ಧವನ್ (Shikhar Dhawan) ಇದ್ದಾರೆ.

IPL 2021 Points Table, Purple Cap and Orange Cap: ಯಾವ ಪ್ಲೇಯರ್ ಕೈಯಲ್ಲಿದೆ ಆರೆಂಜ್ ಕ್ಯಾಪ್-ಪರ್ಪಲ್ ಕ್ಯಾಪ್?
IPL 2021 Purple Cap and Orange Cap
Follow us on

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಎರಡನೇ ಚರಣ ದಿನದಿಂದ ದಿನಕ್ಕೆ ರೋಚಕತೆ ಸೃಷ್ಟಿಸುತ್ತಿದೆ. ಈಗಾಗಲೇ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಟೂರ್ನಿಯಿಂದ ಹೊರಬಿದ್ದಿದೆ. ರಿಷಭ್ ಪಂತ್ (Rishabh Pant) ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಪ್ಲೇ ಆಫ್ ಪ್ರವೇಶಿಸಿದೆ. ಇದು ಖಚಿತವಾಗಿದ್ದು ಅಧಿಕೃತವಾಗಬೇಕಷ್ಟೆ. ಇತ್ತ ಐಪಿಎಲ್ 2021 ಪಾಯಿಂಟ್ ಟೇಬಲ್​, (IPL 2021 Point Table), ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್​ (Orange Cap and Purple Cap) ಪಟ್ಟಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಆಟಗಾರರು ತಾಮುಂದು ನಾಮುಂದು ಎಂಬಂತೆ ಅದ್ಭುತ ಪ್ರದರ್ಶನ ತೋರುತ್ತಿದ್ದು, ಪೈಪೋಟಿ ಹೆಚ್ಚುತ್ತಿದೆ. ಸದ್ಯ ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ತೊಟ್ಟಿರುವ ಆಟಗಾರರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಖರ್ ಧವನ್ (Shikhar Dhawan) ಇದ್ದಾರೆ. ಇವರು 10 ಪಂದ್ಯಗಳಲ್ಲಿ 430 ರನ್ ಗಳಿಸಿದ್ದು, ಈ ಆವೃತ್ತಿಯಲ್ಲಿ 3 ಅರ್ಧಶತಕ ಸಿಡಿಸಿದ್ದಾರೆ.

ಧವನ್ ಹಿಂಭಾಗದಲ್ಲೇ ಪಂಜಾಬ್ ಕಿಂಗ್ಸ್ ನಾಯಕ ಕೆ. ಎಲ್ ರಾಹುಲ್ ಇದ್ದು ಇವರು 9 ಪಂದ್ಯಗಳಲ್ಲಿ 401 ರನ್ ಸಿಡಿಸಿದ್ದಾರೆ. ಇವರ ಖಾತೆಯಿಂದ 4 ಅರ್ಧಶತಕ ಬಂದಿದ್ದು, 18 ಸಿಕ್ಸರ್, 34 ಫೋರ್ ಬಾರಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಸಿಎಸ್​ಕೆ ತಂಡದ ಫಾಫ್ ಡುಪ್ಲೆಸಿಸ್ ಇದ್ದಾರೆ. ಇವರು 9 ಪಂದ್ಯಗಳಲ್ಲಿ 351 ರನ್ ಗಳಿಸಿದ್ದಾರೆ.

ಇನ್ನೂ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿರುವ ಆಟಗಾರ ಆರ್​ಸಿಬಿ ತಂಡದ ಹರ್ಷಲ್ ಪಟೇಲ್. ಇವರು ಒಂಬತ್ತು ಪಂದ್ಯಗಳಲ್ಲಿ 19 ವಿಕೆಟ್ ಕಬಳಿಸಿದ್ದಾರೆ. ಈ ಬಾರಿ ಒಂದು ಸಲ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಎರಡನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆವೇಶ್ ಖಾನ್ ಇದ್ದು ಇವರು 10 ಪಂದ್ಯಗಳಲ್ಲಿ 15 ವಿಕೆಟ್ ಕಿತ್ತಿದ್ದಾರೆ. ಮೂರನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕ್ರಿಸ್ ಮೊರೀಸ್ ಇದ್ದು, ಇವರು ಕೂಡ ಒಂಬತ್ತು ಪಂದ್ಯಗಳಲ್ಲಿ 14 ವಿಕೆಟ್ ಕಬಳಿಸಿದ್ದಾರೆ.

ಇನ್ನೂ ಪಾಯಿಂಟ್ ಟೇಬಲ್ ಅನ್ನು ನೋಡಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಎಂಟರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.711 ನೆಟ್​ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದೆ.

ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಏಳರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 14 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.185 ನೆಟ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಚೆನ್ನೈ ಇನ್ನೊಂದು ಪಂದ್ಯ ಗೆದ್ದರೆ ದಾಖಲೆಯ 11ನೇ ಬಾರಿ ಪ್ಲೇ ಆಫ್ ಪ್ರವೇಶಿಸಿದ ಸಾಧನೆ ಮಾಡಲಿದೆ.

ಐಪಿಎಲ್ ಎರಡನೇ ಚರಣವನ್ನು ಕೆಟ್ಟದಾಗಿ ಪ್ರಾರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಐದರಲ್ಲಿ ಗೆಲುವು ಕಂಡಿದೆ. ನಾಲ್ಕರಲ್ಲಿ ಸೋತಿದೆ. ಒಟ್ಟು 10 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.720 ನೆಟ್​ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಒಟ್ಟು 9 ಪಂದ್ಯಗಳನ್ನು ಆಡಿದ್ದು ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಐದು ಪಂದ್ಯಗಳಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.363 ನೆಟ್​ರೇಟ್​ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಇನ್ನೂ ಕೆ. ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಪ್ಲೇ ಆಫ್​ಗೆ ಲಗ್ಗೆಯಿಡಲು ಹರಸಾಹಸ ಪಡುತ್ತಿದೆ. ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಕೇವಲ 4 ಪಂದ್ಯಗಳನ್ನಷ್ಟೆ ಗೆದ್ದಿದೆ. ಆರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.271 ನೆಟ್​ರೇಟ್​ನೊಂದಿಗೆ ಐದನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್ ಹಾದಿ ತುಂಬಾನೇ ಕಠಿಣವಾಗಿದೆ. ಒಟ್ಟು 9 ಪಂದ್ಯಗಳನ್ನು ಆಡಿದ್ದು ಸೋಲನ್ನು ಹೆಚ್ಚು ಕಂಡಿದೆ. ಕೇವಲ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, 5 ಪಂದ್ಯಗಳಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.310 ನೆಟ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಮುಂಬೈ ರೀತಿಯಲ್ಲೇ ಇದೆ. ನಾಲ್ಕರಲ್ಲಿ ಗೆಲುವು ಕಂಡರೆ ಐದರಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.319 ನೆಟ್​ರೇಟ್​ನೊಂದಿಗೆ ಏಳನೇ ಸ್ಥಾನದಲ್ಲಿದೆ.

ಸನ್​ರೈಸರ್ಸ್ ಹೈದಬಾದ್ ತಂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಆಡಿದ ಒಂಬತ್ತು ಪಂದ್ಯಗಳಲ್ಲಿ ಕೇವಲ ಒಂದರಲ್ಲಷ್ಟೆ ಗೆದ್ದಿದೆ. ಎಂಟು ಪಂದ್ಯಗಳಲ್ಲಿ ಸೋಲುಂಡಿದೆ. ಪಾಯಿಂಟ್ ಪಟ್ಟಿಯಲ್ಲಿ -0.637 ನೆಟ್​ರೇಟ್​ನೊಂದಿಗೆ ಕೊನೇಯ ಎಂಟನೇ ಸ್ಥಾನದಲ್ಲಿದೆ.

RCB Predicted Playing XI: ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ಕೊಹ್ಲಿ ಮಾಸ್ಟರ್ ಪ್ಲ್ಯಾನ್: ಮತ್ತೊಬ್ಬ ಆಟಗಾರ ಪದಾರ್ಪಣೆ?

KL Rahul: ಪಡಿಕ್ಕಲ್ ಅಲ್ಲ: ಆರ್​ಸಿಬಿ ಮುಂದಿನ ನಾಯಕ ಈ ಕನ್ನಡಿಗ ಎಂದ ರಾಯಲ್ ಚಾಲೆಂಜರ್ಸ್ ಆಟಗಾರ: ಯಾರು ಗೊತ್ತಾ?

(Orange Cap and Purple Cap IPL 2021 Points Table list after Delhi Capitals and Punjab Kings notch-up respective wins)