AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಸಮಾಜ…’; ಪಹಲ್ಗಾಮ್‌ ದುರಂತದಲ್ಲಿ ಮಡಿದವರಿಗೆ ಮೊಹಮ್ಮದ್ ಶಮಿ ಸಂತಾಪ

Pahalgam Terrorist Attack: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಇಡೀ ದೇಶ ಶೋಕದಲ್ಲಿದೆ. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಅನೇಕ ಕ್ರಿಕೆಟ್ ಆಟಗಾರರು ಈ ಕೃತ್ಯವನ್ನು ಖಂಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೊಹಮ್ಮದ್ ಶಮಿ ಕೂಡ ಈ ಘಟನೆಯನ್ನು ಖಂಡಿಸಿ, ಒಗ್ಗಟ್ಟಿನಿಂದಿರಲು ಮನವಿ ಮಾಡಿದ್ದಾರೆ.

‘ನಮ್ಮ ಸಮಾಜ...’; ಪಹಲ್ಗಾಮ್‌ ದುರಂತದಲ್ಲಿ ಮಡಿದವರಿಗೆ ಮೊಹಮ್ಮದ್ ಶಮಿ ಸಂತಾಪ
Mohammed Shami
Follow us
ಪೃಥ್ವಿಶಂಕರ
|

Updated on:Apr 23, 2025 | 5:38 PM

ಪಹಲ್ಗಾಮ್ ಭಯೋತ್ಪಾದಕರ (Pahalgam attack) ದಾಳಿಯನ್ನು ಇಡೀ ವಿಶ್ವವೇ ಖಂಡಿಸುತ್ತಿದೆ. ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹೇಯ್ಯ ಕೃತ್ಯವನ್ನು ಕ್ರಿಕೆಟ್ ಜಗತ್ತು ಕೂಡ ಖಂಡಿಸಿದ್ದು, ಸಚಿನ್ ತೆಂಡೂಲ್ಕರ್ (Sachin Tendulkar) ಅವರಿಂದ ವಿರಾಟ್ ಕೊಹ್ಲಿ ವರೆಗೆ ಅನೇಕ ಸ್ಟಾರ್ ಆಟಗಾರರು ಈ ಘಟನೆಯನ್ನು ಖಂಡಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಕ್ರಿಕೆಟಿಗರು, ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಭಯೋತ್ಪಾದಕರ ದಾಳಿಗೆ ಇದೀಗ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ (Mohammed Shami) ಕೂಡ ಪ್ರತಿಕ್ರಿಯಿಸಿದ್ದು, ‘ಇಂತಹ ಘಟನೆಗಳು ನಮ್ಮ ದೇಶದ ಸಮಾಜವನ್ನು ದುರ್ಬಲಗೊಳಿಸುತ್ತವೆ. ಈ ಕಷ್ಟದ ಸಮಯದಲ್ಲಿ ಎಲ್ಲಾ ದೇಶವಾಸಿಗಳು ಒಗ್ಗಟ್ಟಿನಿಂದ ಇರಬೇಕೆಂದು  ಮನವಿ ಮಾಡಿದ್ದಾರೆ.

ಶಮಿ ಹೇಳಿದ್ದೇನು?

‘ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ನನಗೆ ತೀವ್ರ ದುಃಖವಾಗಿದೆ. ಈ ಕ್ರೂರ ದಾಳಿಯಲ್ಲಿ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ, ಕುಟುಂಬಗಳು ನೋವಿನಲ್ಲಿ ಮುಳಿಗಿವೆ. ಈ ರೀತಿಯ ಹಿಂಸಾಚಾರವು ಒಬ್ಬ ವ್ಯಕ್ತಿಯನ್ನು ಗುರಿಯಾಗಿಸುವುದಲ್ಲದೆ, ನಮ್ಮ ಸಮಾಜದ ರಚನೆಯನ್ನು ದುರ್ಬಲಗೊಳಿಸುತ್ತದೆ. ಈ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯನ್ನು ಖಂಡಿಸುವಲ್ಲಿ ಮತ್ತು ಬಲಿಪಶುಗಳ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುವಲ್ಲಿ ನಾವು ಒಂದಾಗಬೇಕು. ಶಾಂತಿಗಾಗಿ ನಮ್ಮ ಬದ್ಧತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ. ಈ ದುರಂತದಿಂದ ಬಾಧಿತರಾದ ಎಲ್ಲರಿಗೂ ನಮ್ಮ ಸಂತಾಪಗಳು ಮತ್ತು ನ್ಯಾಯಕ್ಕಾಗಿ ಪ್ರಾರ್ಥಿಸುತ್ತೇವೆ’ ಎಂದು ಶಮಿ ಹೇಳಿದ್ದಾರೆ.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆಯಲ್ಲಿ ಸುಮಾರು 26 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯ ಬಲಿಪಶುಗಳಲ್ಲಿ ಹಿಂದೂ ಪ್ರವಾಸಿಗರಾಗಿದ್ದು, ಇದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.

ನ್ಯಾಯಕ್ಕಾಗಿ ವಿರಾಟ್ ಒತ್ತಾಯ

ವಿರಾಟ್ ಕೊಹ್ಲಿ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿ ನ್ಯಾಯಕ್ಕಾಗಿ ಒತ್ತಾಯಿಸಿದರು. ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಘೋರ ದಾಳಿಯಿಂದ ನನಗೆ ತುಂಬಾ ದುಃಖವಾಗಿದೆ. ಸಾವನ್ನಪ್ಪಿದವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ಕ್ರೂರ ಕೃತ್ಯಕ್ಕೆ ನ್ಯಾಯ ಸಿಗಲಿ ಮತ್ತು ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ಶಾಂತಿ ಮತ್ತು ಶಕ್ತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸಚಿನ್ ತೆಂಡೂಲ್ಕರ್ ಸಂತಾಪ

‘ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲಿನ ದುರಂತ ದಾಳಿಯಿಂದ ನನಗೆ ಆಘಾತ ಮತ್ತು ತೀವ್ರ ದುಃಖವಾಗಿದೆ. ಈ ಕರಾಳ ಸಮಯದಲ್ಲಿ ಭಾರತ ಮತ್ತು ಜಗತ್ತು ಬಾಧಿತ ಕುಟುಂಬಗಳೊಂದಿಗೆ ನಿಂತಿದೆ. ಸಾವನ್ನಪ್ಪಿರುವ ಜೀವಗಳಿಗೆ ಮತ್ತು ಆಸ್ತಿಪಾಸ್ತಿ ನಷ್ಟಕ್ಕೆ ಶೋಕ ವ್ಯಕ್ತಪಡಿಸುತ್ತೇನೆ ಮತ್ತು ನ್ಯಾಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Wed, 23 April 25