AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs AUS: ಪಾಕಿಸ್ತಾನದ ವಿರುದ್ಧ ಸೋತ ಆಸ್ಟ್ರೇಲಿಯಾ

Pakistan vs Australia 1st T20 result: ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ T20 ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ 22 ರನ್‌ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ. ಲಾಹೋರ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ 168 ರನ್ ಗಳಿಸಿ, ಆಸ್ಟ್ರೇಲಿಯಾವನ್ನು 146 ರನ್‌ಗಳಿಗೆ ಕಟ್ಟಿಹಾಕಿತು. ಅಬ್ರಾರ್ ಅಹ್ಮದ್ ಮತ್ತು ಸ್ಯಾಮ್ ಅಯೂಬ್ ಅವರ ಬೌಲಿಂಗ್ ಹಾಗೂ ಸಲ್ಮಾನ್ ಆಘಾ ಬ್ಯಾಟಿಂಗ್ ಮಿಂಚಿತು. ಈ ಗೆಲುವು T20 ವಿಶ್ವಕಪ್‌ಗೆ ಪಾಕಿಸ್ತಾನದ ಆತ್ಮವಿಶ್ವಾಸ ಹೆಚ್ಚಿಸಿದೆ.

PAK vs AUS: ಪಾಕಿಸ್ತಾನದ ವಿರುದ್ಧ ಸೋತ ಆಸ್ಟ್ರೇಲಿಯಾ
Pak Vs Aus
ಪೃಥ್ವಿಶಂಕರ
|

Updated on:Jan 29, 2026 | 8:41 PM

Share

ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ (Pakistan vs Australia) ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಭರ್ಜರಿ ಜಯ ಸಾಧಿಸಿದೆ. ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಪ್ರವಾಸಿ ತಂಡವನ್ನು 56 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಈ ಗೆಲುವು ಟಿ0 ವಿಶ್ವಕಪ್‌ಗೆ ಸಿದ್ಧತೆಯಲ್ಲಿರುವ ಪಾಕಿಸ್ತಾನದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಪಾಕಿಸ್ತಾನ ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಅದ್ಭುತ ಪ್ರದರ್ಶನ ನೀಡಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಿತು.

168 ರನ್ ಕಲೆಹಾಕಿದ ಪಾಕಿಸ್ತಾನ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 168 ರನ್ ಗಳಿಸಿತು. ತಂಡದ ಪರ ಸ್ಯಾಮ್ ಅಯೂಬ್ 22 ಎಸೆತಗಳಲ್ಲಿ 40 ರನ್ ಗಳಿಸಿ, ನಾಯಕ ಸಲ್ಮಾನ್ ಆಘಾ ಅವರೊಂದಿಗೆ ಎರಡನೇ ವಿಕೆಟ್‌ಗೆ 74 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಸಲ್ಮಾನ್ ಆಘಾ ಕೂಡ 39 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಆದಾಗ್ಯೂ, ಮಧ್ಯಮ ಓವರ್‌ಗಳಲ್ಲಿ ರನ್ ವೇಗ ನಿಧಾನವಾಯಿತು. ಟಿ20 ತಂಡಕ್ಕೆ ಮರಳಿದ ಬಾಬರ್ ಆಝಂ 20 ಎಸೆತಗಳಲ್ಲಿ ಕೇವಲ 24 ರನ್ ಗಳಿಸಿದರೆ, ಉಸ್ಮಾನ್ ಖಾನ್ 18 ರನ್‌ಗಳ ಕೊಡುಗೆ ನೀಡಿದರು ಮತ್ತು ಮೊಹಮ್ಮದ್ ನವಾಜ್ 15 ರನ್‌ಗಳೊಂದಿಗೆ ಅಜೇಯರಾಗಿ ಉಳಿದರು.

ಆಸ್ಟ್ರೇಲಿಯಾ ಪರ ಆಡಮ್ ಜಂಪಾ ಅದ್ಭುತ ಪ್ರದರ್ಶನ ನೀಡಿ 4 ಓವರ್‌ಗಳಲ್ಲಿ 24 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರೆ, ಕ್ಸೇವಿಯರ್ ಬಾರ್ಟ್ಲೆಟ್ ಮತ್ತು ಮಹ್ಲಿ ಬಿಯರ್ಡ್‌ಮನ್ ತಲಾ 2 ವಿಕೆಟ್‌ಗಳನ್ನು ಪಡೆದು ಪಾಕಿಸ್ತಾನ ದೊಡ್ಡ ಮೊತ್ತವನ್ನು ದಾಖಲಿಸದಂತೆ ತಡೆದರು. ಆದಾಗ್ಯೂ, ಈ ಸ್ಕೋರ್ ಗೆಲುವಿನ ಮೊತ್ತವಾಗಿ ಸಾಬೀತಾಯಿತು.

ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸೊನ್ನೆ ಸುತ್ತಿದ ಪಾಕ್ ಆರಂಭಿಕರು

ಆಸ್ಟ್ರೇಲಿಯಾದ ಬ್ಯಾಟಿಂಗ್ ವಿಫಲ

169 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾದ ಇನ್ನಿಂಗ್ಸ್ ಸಂಪೂರ್ಣವಾಗಿ ಕುಸಿಯಿತು. ಇಡೀ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ ಕೇವಲ 146 ರನ್‌ಗಳಿಸಲಷ್ಟೇ ಶಕ್ತವಾಗಿ ಪಂದ್ಯವನ್ನು 22 ರನ್‌ಗಳಿಂದ ಸೋತಿತು. ಕ್ಯಾಮರೂನ್ ಗ್ರೀನ್ ಆಸ್ಟ್ರೇಲಿಯಾ ಪರ ಗರಿಷ್ಠ ಸ್ಕೋರರ್ 36 ರನ್‌ಗಳಿಸಿದರೆ, ಕ್ಸೇವಿಯರ್ ಬಾರ್ಟ್ಲೆಟ್ 34 ರನ್‌ಗಳ ಕೊಡುಗೆ ನೀಡಿದರು. ಟ್ರಾವಿಸ್ ಹೆಡ್ ಕೂಡ ಕೇವಲ 23 ರನ್‌ ಬಾರಿಸಿದರು. ಆದಾಗ್ಯೂ, ಆಸ್ಟ್ರೇಲಿಯಾ ತಮ್ಮ ಇನ್ನಿಂಗ್ಸ್‌ನಲ್ಲಿ 48 ಡಾಟ್ ಬಾಲ್‌ಗಳನ್ನು ಮಾಡಿದ್ದು, ಸೋಲಿಗೆ ಪ್ರಮುಖ ಕಾರಣವಾಯಿತು.

ಪಾಕಿಸ್ತಾನ ಪರ ಅಬ್ರಾರ್ ಅಹ್ಮದ್ ಅದ್ಭುತ ಬೌಲಿಂಗ್ ಮಾಡಿ ನಾಲ್ಕು ಓವರ್‌ಗಳಲ್ಲಿ ಕೇವಲ 10 ರನ್ ನೀಡಿ ಎರಡು ವಿಕೆಟ್ ಪಡೆದರು. ಸ್ಯಾಮ್ ಅಯೂಬ್ ಕೂಡ ಎರಡು ವಿಕೆಟ್ ಪಡೆದರೆ, ಶದಾಬ್ ಖಾನ್ ಮತ್ತು ಮೊಹಮ್ಮದ್ ನವಾಜ್ ತಲಾ ಒಂದು ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿಗೆ ಗಣನೀಯ ಕೊಡುಗೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 pm, Thu, 29 January 26

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ