PAK vs AUS: ಪಾಕ್ ವಿರುದ್ಧ 38 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ
Pakistan vs Australia 3rd ODI: ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಏಕದಿನ ಸರಣಿ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನಿ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ ಕೇವಲ 157 ರನ್‌ಗಳಿಗೆ ಆಲೌಟ್ ಆಗಿದೆ. ನಾಯಕ ಜೋಶ್ ಇಂಗ್ಲಿಸ್ (65) ಹೋರಾಟ ನಡೆಸಿದರೂ, ಶಾಹೀನ್ ಅಫ್ರಿದಿ (3 ವಿಕೆಟ್) ಮಾರಕ ಬೌಲಿಂಗ್ ಮುಂದೆ ಉಳಿದ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ಸರಣಿ ಗೆಲ್ಲಲು ಪಾಕಿಸ್ತಾನಕ್ಕೆ ಸುಲಭ ಗುರಿ ಲಭಿಸಿದೆ.

ಪ್ರಸ್ತುತ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Pakistan vs Australia) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈಗಾಗಲೇ ನಡೆದಿರುವ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಕೊನೆಯ ಪಂದ್ಯವನ್ನು ಗೆದ್ದ ತಂಡಕ್ಕೆ ಸರಣಿ ಸಿಗಲಿದೆ. ಹೀಗಾಗಿ ಇಂದು ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ, ಪಾಕಿಸ್ತಾನಿ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ ಹೋಗಿದೆ. ಇದರ ಪರಿಣಾಮವಾಗಿ ಇಡೀ ಆಸ್ಟ್ರೇಲಿಯಾ ತಂಡವು 42 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 157 ರನ್‌ಗಳಿಗೆ ಆಲೌಟ್ ಆಗಿದೆ.
ಆಸೀಸ್ಗೆ ಆರಂಭದಲ್ಲೇ ಆಘಾತ
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ತನ್ನ ಕೊನೆಯ ಏಳು ವಿಕೆಟ್‌ಗಳನ್ನು ಕೇವಲ 38 ರನ್‌ಗಳಿಗೆ ಕಳೆದುಕೊಂಡಿತು. ಇತ್ತ ತಂಡಕ್ಕೆ ಉತ್ತಮ ಆರಂಭವೂ ಸಿಗಲಿಲ್ಲ. ಶೂನ್ಯಕ್ಕೆ ಮೊದಲ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ, 42 ರನ್‌ಗಳಿಗೆ ತನ್ನ ಎರಡನೇ ವಿಕೆಟ್ ಕಳೆದುಕೊಂಡಿತು. 100 ರನ್ಗಳ ಒಳಗೆ ಮೂರನೇ ವಿಕೆಟ್ ಕೂಡ ಪತನವಾಯಿತು. ಆದಾಗ್ಯೂ ನಾಯಕ ಜೋಶ್ ಇಂಗ್ಲಿಸ್ ಒಂದು ತುದಿಯನ್ನು ದೃಢವಾಗಿ ನಿಂತು 65 ರನ್ಗಳ ಇನ್ನಿಂಗ್ಸ್ ಆಡಿದರು. ಇಂಗ್ಲಿಸ್ ಕ್ರೀಸ್‌ನಲ್ಲಿದ್ದ ತನಕ, ಆಸ್ಟ್ರೇಲಿಯಾ ದೊಡ್ಡ ಸ್ಕೋರ್ ದಾಖಲಿಸುವಂತೆ ತೋರುತ್ತಿತ್ತು. ಆದರೆ ಶಾಹೀನ್ ಶಾ ಅಫ್ರಿದಿ ಇಂಗ್ಲಿಸ್ ಅವರನ್ನು ಔಟ್ ಮಾಡಿದ ತಕ್ಷಣ, ಇಡೀ ಆಸ್ಟ್ರೇಲಿಯನ್ ಇನ್ನಿಂಗ್ಸ್ ತರಗೆಲೆಗಳಂತೆ ಉದುರಿತು.
157 ರನ್‌ಗಳಿಗೆ ಆಲೌಟ್
ಒಂದು ಹಂತದಲ್ಲಿ ಆಸ್ಟ್ರೇಲಿಯಾ 26 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 119 ರನ್ ಗಳಿಸಿತ್ತು. ಆದರೆ ಜೋಶ್ ಇಂಗ್ಲಿಸ್ ಔಟಾದ ಬಳಿಕ ಆಸ್ಟ್ರೇಲಿಯಾದ ಯಾವುದೇ ಬ್ಯಾಟ್ಸ್ಮನ್ಗೆ ಕ್ರೀಸ್‌ನಲ್ಲಿ ಹೆಚ್ಚು ಕಾಲ ಉಳಿಯಲು ಸಾಧ್ಯವಾಗಲಿಲ್ಲ. ತಂಡವು 157 ರನ್ ತಲುಪುವ ಹೊತ್ತಿಗೆ, ಉಳಿದ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಜೋಶ್ ಇಂಗ್ಲಿಸ್ ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟ್ಸ್ಮನ್ಗೂ 20 ರನ್ ಗಳಿಸಲು ಸಾಧ್ಯವಾಗಲಿಲ್ಲ. ಮಾರ್ನಸ್ ಲಬುಶೇನ್ ಮತ್ತು ಅಲೆಕ್ಸ್ ಕ್ಯಾರಿ ತಲಾ 19 ರನ್ ಗಳಿಸಿದರೆ, ಕೊನೆಯಲ್ಲಿ ಆಡಮ್ ಜಂಪಾ 10 ರನ್ ಗಳಿಸಿದರು. ಬೇರೆ ಯಾವುದೇ ಆಟಗಾರನಿಗೆ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.
ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್
ಶಾಹೀನ್ ಶಾ ಅಫ್ರಿದಿ ಮಾರಕ ದಾಳಿ
ಪಾಕಿಸ್ತಾನ ಪರ ಶಾಹೀನ್ ಶಾ ಅಫ್ರಿದಿ ಅದ್ಭುತ ಬೌಲಿಂಗ್ ಪ್ರದರ್ಶಿಸಿ ಎಂಟು ಓವರ್‌ಗಳಲ್ಲಿ 30 ರನ್‌ಗಳಿಗೆ ಮೂರು ವಿಕೆಟ್ ಪಡೆದರು. ಅಬ್ರಾರ್ ಅಹ್ಮದ್ ಮತ್ತು ಶಾದಾಬ್ ಖಾನ್ ತಲಾ ಎರಡು ವಿಕೆಟ್ ಪಡೆದರು. ಹ್ಯಾರಿಸ್ ರೌಫ್ ಕೂಡ ಒಂದು ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




