AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs AUS: ಪಾಕಿಸ್ತಾನ್ ತಂಡದಿಂದ ಶಾಹೀನ್ ಅಫ್ರಿದಿ ಹೊರಕ್ಕೆ..!

PAK vs AUS 3rd Test: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಹೀನಾಯವಾಗಿ ಸೋತಿದೆ. ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ತಂಡ 360 ರನ್​ಗಳಿಂದ ಗೆದ್ದುಕೊಂಡಿತ್ತು. ಇನ್ನು 2ನೇ ಪಂದ್ಯದಲ್ಲಿ ಪಾಕ್ ತಂಡವು 79 ರನ್​ಗಳಿಂದ ಸೋಲನುಭವಿಸಿತ್ತು.

PAK vs AUS: ಪಾಕಿಸ್ತಾನ್ ತಂಡದಿಂದ ಶಾಹೀನ್ ಅಫ್ರಿದಿ ಹೊರಕ್ಕೆ..!
Shaheen Afridi
TV9 Web
| Edited By: |

Updated on: Jan 02, 2024 | 12:36 PM

Share

ಆಸ್ಟ್ರೇಲಿಯಾ (Australia) ವಿರುದ್ಧ ಪಿಂಕ್ ಟೆಸ್ಟ್ ಪಂದ್ಯಕ್ಕಾಗಿ ಪಾಕಿಸ್ತಾನ್ (Pakistan) ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಸಿಡ್ನಿಯಲ್ಲಿ ನಡೆಯಲಿರುವ ಈ ಪಂದ್ಯದಿಂದ ತಂಡದ ಪ್ರಮುಖ ಬೌಲರ್ ಶಾಹೀನ್ ಅಫ್ರಿದಿಯನ್ನು ಕೈ ಬಿಡಲಾಗಿದೆ. ಹಾಗೆಯೇ ಎಡಗೈ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್​ಗೂ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿಲ್ಲ.

ಇಲ್ಲಿ ಇಮಾಮ್ ಉಲ್ ಹಕ್ ಬದಲಿಗೆ ಯುವ ಬ್ಯಾಟರ್ ಸೈಮ್ ಅಯ್ಯೂಬ್​ಗೆ ಅವಕಾಶ ನೀಡಲಾಗಿದೆ. ಹಾಗೆಯೇ ಶಾಹೀನ್ ಅಫ್ರಿದಿ ಸ್ಥಾನದಲ್ಲಿ ಸಾಜಿದ್ ಖಾನ್ ಕಾಣಿಸಿಕೊಂಡಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಮೊಹಮ್ಮದ್ ರಿಝ್ವಾನ್ ಅವರನ್ನೇ ಮುಂದುವರೆಸಲಾಗಿದೆ.

ಸರಣಿ ಸೋತಿತುವ ಪಾಕಿಸ್ತಾನ್:

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಹೀನಾಯವಾಗಿ ಸೋತಿದೆ. ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ತಂಡ 360 ರನ್​ಗಳಿಂದ ಗೆದ್ದುಕೊಂಡಿತ್ತು. ಇನ್ನು 2ನೇ ಪಂದ್ಯದಲ್ಲಿ ಪಾಕ್ ತಂಡವು 79 ರನ್​ಗಳಿಂದ ಸೋಲನುಭವಿಸಿತ್ತು.

ಇದೀಗ 2-0 ಅಂತರದಿಂದ ಸರಣಿ ಸೋತಿರುವ ಪಾಕಿಸ್ತಾನ್ ತಂಡವು ಕ್ವೀನ್ ಸ್ವೀಪ್ ತಪ್ಪಿಸಿಕೊಳ್ಳಲು ತಂಡದಲ್ಲಿ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯಿಂದಾಗಿ ಪಾಕ್ ತಂಡದ ಪ್ರಮುಖ ಬೌಲರ್ ಶಾಹೀನ್ ಶಾ ಅಫ್ರಿದಿ ಹೊರಬಿದ್ದಿರುವುದು ಅಚ್ಚರಿ.

ಪಾಕಿಸ್ತಾನ್ ಪ್ಲೇಯಿಂಗ್ 11:

  1. ಅಬ್ದುಲ್ಲಾ ಶಫೀಕ್
  2.  ಸೈಮ್ ಅಯ್ಯೂಬ್
  3.  ಶಾನ್ ಮಸೂದ್
  4.  ಬಾಬರ್ ಆಝಂ
  5.  ಸೌದ್ ಶಕೀಲ್
  6. ಮೊಹಮ್ಮದ್ ರಿಝ್ವಾನ್
  7.  ಸಲ್ಮಾನ್ ಅಲಿ ಅಘಾ
  8.  ಸಾಜಿದ್ ಖಾನ್
  9.  ಹಸನ್ ಅಲಿ
  10.  ಮೀರ್ ಹಂಝ
  11. ಅಮೀರ್ ಜಮಾಲ್

ಇದನ್ನೂ ಓದಿ: Australia vs Pakistan: ಏನಿದು ಪಿಂಕ್ ಟೆಸ್ಟ್​?

ಪಾಕಿಸ್ತಾನ್ ತಂಡ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಶಾನ್ ಮಸೂದ್ (ನಾಯಕ), ಬಾಬರ್ ಆಝಂ, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಅಲಿ ಅಘಾ, ಅಮೀರ್ ಜಮಾಲ್, ಶಾಹೀನ್ ಶಾ ಅಫ್ರಿದಿ, ಹಸನ್ ಅಲಿ, ಮಿರ್ ಹಂಝ, ಸರ್ಫರಾಝ್ ಅಹ್ಮದ್, ಮೊಹಮ್ಮದ್ ನವಾಝ್ , ಫಹೀಮ್ ಅಶ್ರಫ್, ಅಬ್ರಾರ್ ಅಹ್ಮದ್, ಸೈಮ್ ಅಯ್ಯೂಬ್, ಮೊಹಮ್ಮದ್ ವಾಸಿಮ್ ಜೂನಿಯರ್, ಸಾಜಿದ್ ಖಾನ್.

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ