AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs BAN: ದಾಖಲೆ ಕಣ್ತುಂಬಿಕೊಳ್ಳಲು ಕಾದಿದ್ದವರಿಗೆ ಸೊನ್ನೆಯ ಶಾಕ್ ನೀಡಿದ ಬಾಬರ್ ಆಝಂ

Babar Azam: ಬುಧವಾರದಿಂದ ಅಂದರೆ ಇಂದಿನಿಂದ ಆರಂಭವಾಗಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಟೆಸ್ಟ್ ತಂಡದ ಮಾಜಿ ನಾಯಕ ಬಾಬರ್ ಆಝಂ ದಯನೀಯವಾಗಿ ವಿಫಲರಾಗಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಬಾಬರ್ ತವರಿನಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಮಾದರಿಯಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.

PAK vs BAN: ದಾಖಲೆ ಕಣ್ತುಂಬಿಕೊಳ್ಳಲು ಕಾದಿದ್ದವರಿಗೆ ಸೊನ್ನೆಯ ಶಾಕ್ ನೀಡಿದ ಬಾಬರ್ ಆಝಂ
ಬಾಬರ್ ಆಝಂ
ಪೃಥ್ವಿಶಂಕರ
|

Updated on:Aug 21, 2024 | 7:35 PM

Share

ಬುಧವಾರದಿಂದ ಅಂದರೆ ಇಂದಿನಿಂದ ಆರಂಭವಾಗಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಟೆಸ್ಟ್ ತಂಡದ ಮಾಜಿ ನಾಯಕ ಬಾಬರ್ ಆಝಂ ದಯನೀಯವಾಗಿ ವಿಫಲರಾಗಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಬಾಬರ್ ತವರಿನಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಮಾದರಿಯಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್​ಗೆ ಕಾಲಿಟ್ಟ ಬಾಬರ್ ಒಂಬತ್ತನೇ ಓವರ್‌ನಲ್ಲಿ ಶೋರಿಫುಲ್ ಇಸ್ಲಾಮ್‌ಗೆ ಬಲಿಯಾದರು. ನಾಯಕ ಶಾನ್ ಮಸೂದ್ ಅವರ ವಿವಾದಾತ್ಮಕ ವಿಕೆಟ್ ನಂತರ ಮೈದಾನಕ್ಕೆ ಬಂದ ಬಾಬರ್, ಒಂಬತ್ತನೇ ಓವರ್​ನ ಎರಡನೇ ಎಸೆತದಲ್ಲಿ ವಿಕೆಟ್ ಕೀಪರ್ ಲಿಟನ್ ದಾಸ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಬೇಕಾಯಿತು. ಬಾಬರ್ ಕೇವಲ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದರು.

ಹುಸಿಯಾಯ್ತು ಅಭಿಮಾನಿಗಳ ನಿರೀಕ್ಷೆ

ವಿಶೇಷವೆಂದರೆ ಬಾಬರ್ ಆಝಂ ಸುಮಾರು 20 ತಿಂಗಳ ನಂತರ ತವರಿನಲ್ಲಿ ಟೆಸ್ಟ್ ಆಡುತ್ತಿದ್ದಾರೆ. ವಾಸ್ತವವಾಗಿ, ಪಾಕಿಸ್ತಾನ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನು ಜನವರಿ 2023 ರಲ್ಲಿ ತವರು ನೆಲದಲ್ಲಿ ಆಡಿತ್ತು. ಈ ಮೂಲಕ ಸುಮಾರು 20 ತಿಂಗಳ ನಂತರ ಬಾಬರ್ ಫೀಲ್ಡ್​ಗೆ ಮರಳಿದರೂ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲು ಸಾಧ್ಯವಾಗಲಿಲ್ಲ. ವಿಶೇಷವೆಂದರೆ ಮೂರು ವರ್ಷಗಳಲ್ಲಿ ಬಾಬರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಶೂನ್ಯಕ್ಕೆ ಔಟಾಗಿರುವುದು ಇದೇ ಮೊದಲು.

ಸೂಪರ್‌ಮ್ಯಾನ್ ಕ್ಯಾಚ್

ವಾಸ್ತವವಾಗಿ, ಈ ಪಂದ್ಯಕ್ಕೂ ಮುನ್ನ ಶೋರಿಫುಲ್ ಇಸ್ಲಾಂ, ನಾನು ಬಾಬರ್ ಆಝಂ ಅವರ ವಿಕೆಟ್ ಪಡೆಯಲು ಬಯಸುತ್ತೇನೆ ಎಂದು ಹೇಳಿದ್ದರು. ಅವರ ಆಸೆಯಂತೆ ಲಿಟನ್ ದಾಸ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಶೋರಿಫುಲ್ ಇಸ್ಲಾಂ ಅವರ ಆಸೆಯನ್ನು ಪೂರೈಸಿದರು. ಶೋರಿಫುಲ್, ಲೆಗ್ ಸ್ಟಂಪ್‌ನ ಹೊರಗೆ ಚೆಂಡನ್ನು ಬೌಲ್ ಮಾಡಿದರು. ಕೂಡಲೇ ಬಾಬರ್, ಆ ಚೆಂಡನ್ನು ವಿಕೆಟ್​ನ ಹಿಂದೆ ಬೌಂಡರಿಗಟ್ಟಲು ಯತ್ನಿಸಿದರು. ಆದರೆ ವಿಕೆಟ್​ ಹಿಂದೆ ನಿಂತಿದ್ದ ಲಿಟನ್ ಎಡಕ್ಕೆ ಅದ್ಭುತ ಡೈವ್ ಮಾಡಿ ಅತ್ಯುತ್ತಮ ಕ್ಯಾಚ್ ಪಡೆದರು.

ಬಾಬರ್ ಕೈತಪ್ಪಿದ ದಾಖಲೆಯ ಅವಕಾಶ

ಬಾಬರ್ ಆಝಂ ಈ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ್ದರೆ, ಅಂದರೆ 104 ರನ್ ಬಾರಿಸಿದ್ದರೆ, ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ 4000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆಯುವ ಅವಕಾಶವಿತ್ತು. ಆದರೆ ಮೊದಲ ಇನ್ನಿಂಗ್ಸ್​ನಲ್ಲಿ ಬಾಬರ್​ಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. ಇದೀಗ ಎರಡನೇ ಇನ್ನಿಂಗ್ಸ್​ನಲ್ಲಿ ಬಾಬರ್ 104 ರನ್ ಬಾರಿಸಿದರೆ, ಈ ದಾಖಲೆ ಅವರ ಖಾತೆ ಸೇರಲಿದೆ. ಬಾಬರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇದುವರೆಗೆ 52 ಪಂದ್ಯಗಳ 94 ಇನ್ನಿಂಗ್ಸ್‌ಗಳಲ್ಲಿ 3898 ರನ್ ಗಳಿಸಿದ್ದಾರೆ. ಬಾಬರ್ ಇನ್ನೂ 102 ರನ್ ಗಳಿಸಿದರೆ 4 ಸಾವಿರ ರನ್‌ಗಳ ಗಡಿಯನ್ನು ಪೂರ್ಣಗೊಳಿಸುತ್ತಾರೆ. ಹೀಗಾಗಿ ಮುಂದಿನ ಇನ್ನಿಂಗ್ಸ್‌ನಲ್ಲಿ ಬಾಬರ್ ಈ ಮೈಲಿಗಲ್ಲನ್ನು ದಾಟುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 pm, Wed, 21 August 24

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?