AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs BAN: 2ನೇ ಟೆಸ್ಟ್ ಪಂದ್ಯಕ್ಕೆ ಪಾಕ್ ತಂಡ ಪ್ರಕಟ; ಮಾಜಿ ನಾಯನಿಗೆ ಗೇಟ್​ ಪಾಸ್..!

PAK vs BAN: ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ರಾವಲ್ಪಿಂಡಿಯಲ್ಲಿ ನಡೆಯಲಿದೆ. ಇದು ಆಗಸ್ಟ್ 30 ರಿಂದ ನಡೆಯಲಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಪಂದ್ಯಕ್ಕಾಗಿ 12 ಸದಸ್ಯರ ಪಾಕ್ ತಂಡವನ್ನು ಇಂದು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ತಂಡದ ಪ್ರಮುಖ ವೇಗದ ಬೌಲರ್ ಶಾಹೀನ್ ಅಫ್ರಿದಿ ಹೆಸರು ಕಾಣೆಯಾಗಿದ್ದು, ಸರಣಿಯ ಎರಡನೇ ಮತ್ತು ಕೊನೆಯ ಪಂದ್ಯದಿಂದ ಮಾಜಿ ನಾಯಕನನ್ನು ಹೊರಗಿಡಲು ಮಂಡಳಿ ನಿರ್ಧರಿಸಿದೆ.

PAK vs BAN: 2ನೇ ಟೆಸ್ಟ್ ಪಂದ್ಯಕ್ಕೆ ಪಾಕ್ ತಂಡ ಪ್ರಕಟ; ಮಾಜಿ ನಾಯನಿಗೆ ಗೇಟ್​ ಪಾಸ್..!
PAK vs BAN Pakistan announce playing 12 for 2nd Test kannada news
ಪೃಥ್ವಿಶಂಕರ
|

Updated on:Aug 29, 2024 | 4:50 PM

Share

ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ರಾವಲ್ಪಿಂಡಿಯಲ್ಲಿ ನಡೆಯಲಿದೆ. ಇದು ಆಗಸ್ಟ್ 30 ರಿಂದ ನಡೆಯಲಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಪಂದ್ಯಕ್ಕಾಗಿ 12 ಸದಸ್ಯರ ಪಾಕ್ ತಂಡವನ್ನು ಇಂದು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ತಂಡದ ಪ್ರಮುಖ ವೇಗದ ಬೌಲರ್ ಶಾಹೀನ್ ಅಫ್ರಿದಿ ಹೆಸರು ಕಾಣೆಯಾಗಿದ್ದು, ಸರಣಿಯ ಎರಡನೇ ಮತ್ತು ಕೊನೆಯ ಪಂದ್ಯದಿಂದ ಮಾಜಿ ನಾಯಕನನ್ನು ಹೊರಗಿಡಲು ಮಂಡಳಿ ನಿರ್ಧರಿಸಿದೆ. ಅವರ ಸ್ಥಾನದಲ್ಲಿ ಎಡಗೈ ವೇಗದ ಬೌಲರ್ ಮೀರ್ ಹಮ್ಜಾ ಮತ್ತು ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದು, ಈ ಇಬ್ಬರಲ್ಲಿ ಒಬ್ಬರು ಮಾತ್ರ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ.

ಅಫ್ರಿದಿಗೆ ಕೋಕ್

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ಗೆ ಮಾಜಿ ನಾಯಕ ಹಾಗೂ ತಂಡದ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸುವ ಶಾಹೀನ್ ಅಫ್ರಿದಿ ಆಯ್ಕೆಯಾಗದಿರುವುದಕ್ಕೆ ಯಾವುದೇ ಕಾರಣವನ್ನು ನೀಡಲಾಗಿಲ್ಲ. ಆದಾಗ್ಯೂ, ಅವರಿಗೆ ಅವಕಾಶ ನೀಡದಿರುವ ಹಿಂದೆ ಹಲವು ಕಾರಣಗಳಿದ್ದು, ಅದರಲ್ಲಿ ಮೊದಲ ಕಾರಣವೆಂದರೆ ಅವರ ಕಳಪೆ ಫಾರ್ಮ್​. ಮೊದಲ ಟೆಸ್ಟ್‌ನಲ್ಲಿ ಪಾಕಿಸ್ತಾನ ತಂಡ ತನ್ನ ವೇಗದ ಬೌಲರ್‌ಗಳನ್ನು ನೆಚ್ಚಿಕೊಂಡಿತ್ತು. ಹೀಗಾಗಿಯೇ ನಾಲ್ವರು ವೇಗದ ಬೌಲರ್‌ಗಳನ್ನು ಕಣಕ್ಕಿಳಿಸಿತ್ತು.

ಪಿಚ್ ಅನ್ನು ವೇಗಿಗಳಿಗೆ ನೆರವಾಗುವಂತೆ ಸಿದ್ದಪಡಿಸಿದ್ದ ಕಾರಣ ಮಾಜಿ ನಾಯಕ ಶಾಹೀನ್ ಅಫ್ರಿದಿ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಆಫ್ರಿದಿಗೆ ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಹೊಸ ಚೆಂಡನ್ನು ಸ್ವಿಂಗ್ ಮಾಡುವಲ್ಲಿ ಹೆಸರುವಾಸಿಯಾಗಿರುವ ಶಾಹೀನ್, ಮೊದಲ ಪಂದ್ಯದಲ್ಲಿ ಅಂತಹದ್ಯಾವುದೇ ಕರಾಮತ್ತು ತೊರಲಿಲ್ಲ. ಅಲ್ಲದೆ ಅವರ ವೇಗವು ತುಂಬಾ ಕಡಿಮೆಯಾಗಿತ್ತು. ಮೊದಲ ಟೆಸ್ಟ್ ಪಂದ್ಯದಲ್ಲಿ 32 ಓವರ್‌ಗಳನ್ನು ಎಸೆದ ಅಫ್ರಿದಿ ಕೇವಲ 2 ವಿಕೆಟ್‌ಗಳನ್ನು ಮಾತ್ರ ಉರುಳಿಸಿದ್ದರು.

ಇನ್ನೊಂದು ಪ್ರಮುಖ ಕಾರಣವೆಂದರೆ, ಮೊದಲ ಟೆಸ್ಟ್ ಪಂದ್ಯದ ವೇಳೆ ಶಾಹೀನ್ ಅಫ್ರಿದಿ ಅವರ ಮಡದಿ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಹೀಗಾಗಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುವ ಸಲುವಾಗಿ ಅಫ್ರಿದಿ ಅವರೇ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿರಬಹುದು. ಆದರೆ ಈ ಬಗ್ಗೆ ಪಿಸಿಬಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವ ತನಕ ಯಾವುದನ್ನು ನಿರ್ಧಿಷ್ಟವಾಗಿ ಹೇಳಲು ಸಾಧ್ಯವಿಲ್ಲ.

ಬಾಬರ್ ಮೇಲೂ ತೂಗುಗತ್ತಿ?

ಇದೀಗ ಎರಡನೇ ಟೆಸ್ಟ್​ನಿಂದ ಶಾಹೀನ್ ಅವರನ್ನು ಹೊರಗಿಟ್ಟಿರುವ ನಂತರ, ಬಾಬರ್ ಆಝಂ ಅವರನ್ನು ತಂಡದಿಂದ ಕೈಬಿಡಲಾಗುವುದು ಎಂಬ ಊಹಾಪೋಹಗಳು ಪ್ರಾರಂಭವಾಗಿವೆ. ಇದಕ್ಕೆ ಕಾರಣವೂ ಇದ್ದು ಟೆಸ್ಟ್‌ನ ಕಳೆದ 14 ಇನ್ನಿಂಗ್ಸ್‌ಗಳಲ್ಲಿ ಒಂದೇ ಒಂದು ಶತಕ ಅಥವಾ ಅರ್ಧಶತಕವನ್ನು ಗಳಿಸಲು ಬಾಬರ್​ಗೆ ಸಾಧ್ಯವಾಗಲಿಲ್ಲ. ಈ 14 ಇನ್ನಿಂಗ್ಸ್​ಗಳಲ್ಲಿ ಕೇವಲ 161 ರನ್ ಗಳಿಸಲಷ್ಟೇ ಶಕ್ತರಾಗಿರುವ ಬಾಬರ್ ಮೊದಲ ಪಂದ್ಯದಲ್ಲಿ ಕೇವಲ 22 ರನ್ ಮಾತ್ರ ಕಲೆಹಾಕಿದ್ದರು. ಇದರಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದ ಬಾಬರ್, ಎರಡನೇ ಇನ್ನಿಂಗ್ಸ್‌ನಲ್ಲಿ 22 ರನ್ ಬಾರಿಸಿದ್ದರು.

ಎರಡನೇ ಟೆಸ್ಟ್‌ಗೆ ಪಾಕಿಸ್ತಾನ ತಂಡ

ಶಾನ್ ಮಸೂದ್ (ನಾಯಕ), ಸೌದ್ ಶಕೀಲ್ (ಉಪನಾಯಕ), ಅಬ್ರಾರ್ ಅಹ್ಮದ್, ಮೊಹಮ್ಮದ್ ಅಲಿ, ಸಲ್ಮಾನ್ ಅಲಿ ಅಗಾ, ಸೈಮ್ ಅಯೂಬ್, ಬಾಬರ್ ಆಝಂ, ಮೀರ್ ಹಮ್ಜಾ, ಮೊಹಮ್ಮದ್ ರಿಜ್ವಾನ್, ಅಬ್ದುಲ್ಲಾ ಶಫೀಕ್, ನಸೀಮ್ ಶಾ ಮತ್ತು ಖುರ್ರಂ ಶಹಜಾದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Thu, 29 August 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್