PAK vs ENG: ಸೋಲಿನ ಸುಳಿಯಲ್ಲಿರುವ ಪಾಕ್ ತಂಡಕ್ಕೆ ಕೊರೊನಾ ಕಾಟ..!

PAK vs ENG: ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ 20 ಸರಣಿಯ ಎರಡನೇ ಪಂದ್ಯಕ್ಕೂ ಮುನ್ನ, ಕೊರೊನಾ ವೈರಸ್ ಸೋಂಕು ಪಾಕ್ ತಂಡದೊಳಗೆ ನುಸುಳಿದೆ.

PAK vs ENG: ಸೋಲಿನ ಸುಳಿಯಲ್ಲಿರುವ ಪಾಕ್ ತಂಡಕ್ಕೆ ಕೊರೊನಾ ಕಾಟ..!
ಪಾಕ್ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on:Sep 22, 2022 | 8:52 PM

ಪಾಕಿಸ್ತಾನ ಮತ್ತು ಇಂಗ್ಲೆಂಡ್ (Pakistan and England) ನಡುವಿನ ಮೂರು ಪಂದ್ಯಗಳ ಟಿ 20 ಸರಣಿಯ ಎರಡನೇ ಪಂದ್ಯಕ್ಕೂ ಮುನ್ನ, ಕೊರೊನಾ ವೈರಸ್ (corona virus) ಸೋಂಕು ಪಾಕ್ ತಂಡದೊಳಗೆ ನುಸುಳಿದೆ. ಸೆಪ್ಟೆಂಬರ್ 22, ಗುರುವಾರದಂದು ಕರಾಚಿಯಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೂ ಮುನ್ನ, ಪಾಕಿಸ್ತಾನಿ ಶಿಬಿರದಲ್ಲಿ ಕೊರೊನಾ ಸೋಂಕಿನ ಪ್ರಕರಣವು ಮುನ್ನೆಲೆಗೆ ಬಂದಿದ್ದು, ಇದು ಪಂದ್ಯದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ. ಪಾಕಿಸ್ತಾನದ ಮಾಧ್ಯಮಗಳ ವರದಿಯ ಪ್ರಕಾರ, ಪಾಕಿಸ್ತಾನ ಕ್ರಿಕೆಟ್ ತಂಡದ ಸಹಾಯಕ ಸಿಬ್ಬಂದಿಯಲ್ಲಿ ಸೋಂಕು ಕಂಡುಬಂದಿದೆ. ಆದರೆ, ಎರಡೂ ತಂಡಗಳು ನಿಗದಿತ ವೇಳಾಪಟ್ಟಿಯಂತೆ ಪಂದ್ಯವನ್ನು ಮುಂದುವರಿಸಲು ಸಜ್ಜಾಗಿವೆ.

ಎರಡನೇ ಟಿ20 ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ

ಪಾಕಿಸ್ತಾನದ ಜಿಯೋ ನ್ಯೂಸ್ ವರದಿಯ ಪ್ರಕಾರ, ಸಹಾಯಕ ಸಿಬ್ಬಂದಿಗೆ ಸೋಂಕು ತಗುಲಿರುವುದು ಗುರುವಾರ ಗಮನಕ್ಕೆ ಬಮದಿದೆ. ಈ ವಿಷಯವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ಖಚಿತಪಡಿಸಿದೆ. ಆದರೆ, ಈ ಪಂದ್ಯವನ್ನು ನಿಗದಿತ ಸಮಯಕ್ಕೆ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸುವ ಬದ್ಧತೆಯನ್ನು ಪಿಸಿಬಿ ವ್ಯಕ್ತಪಡಿಸಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಗೆಲುವಿನೊಂದಿಗೆ ಸರಣಿ ಆರಂಭಿಸಿರುವ ಇಂಗ್ಲೆಂಡ್

ಟಿ20 ವಿಶ್ವಕಪ್‌ಗೂ ಮುನ್ನ ಉಭಯ ತಂಡಗಳ ನಡುವೆ 7 ಪಂದ್ಯಗಳ ಮಹತ್ವದ ಸರಣಿ ನಡೆಯುತ್ತಿದೆ. ಈ ಸರಣಿಯೊಂದಿಗೆ ಇಂಗ್ಲೆಂಡ್ ತಂಡ 17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಪಾಕಿಸ್ತಾನಕ್ಕೆ ಮರಳಿದೆ. ಪ್ರವಾಸಿ ತಂಡ ಕೂಡ ಅಮೋಘ ರೀತಿಯಲ್ಲಿ ಸರಣಿ ಆರಂಭಿಸಿದೆ. ನಿಯಮಿತ ನಾಯಕ ಜೋಸ್ ಬಟ್ಲರ್ ಸೇರಿದಂತೆ ಕೆಲವು ಪ್ರಮುಖ ಆಟಗಾರರ ಅನುಪಸ್ಥಿತಿಯ ಹೊರತಾಗಿಯೂ, ಕರಾಚಿಯಲ್ಲಿ ನಡೆದ ಮೊದಲ T20 ಪಂದ್ಯದಲ್ಲಿ ಇಂಗ್ಲೆಂಡ್ 7 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಇಂಗ್ಲೆಂಡ್‌ಗೆ ಈ ಸರಣಿಯೊಂದಿಗೆ, ಕಳೆದ ಮೂರೂವರೆ ವರ್ಷಗಳಿಂದ ಇಂಗ್ಲಿಷ್ ತಂಡದಿಂದ ಹೊರಗುಳಿದಿದ್ದ ಬಲಿಷ್ಠ ಆರಂಭಿಕ ಅಲೆಕ್ಸ್ ಹೇಲ್ಸ್ ಕೂಡ ಮರಳಿದ್ದಾರೆ. ಹೇಲ್ಸ್ ಮೊದಲ ಪಂದ್ಯದಲ್ಲಿ ದಿಟ್ಟ ಇನ್ನಿಂಗ್ಸ್ ಆಡಿ, ಕಠಿಣ ಪಿಚ್‌ನಲ್ಲಿ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವನ್ನು ಖಚಿತಪಡಿಸಿದರು.

ಬಾಬರ್ ಆಜಮ್ ಮೇಲೆ ಕಣ್ಣು

ಇದೀಗ ಎರಡನೇ ಟಿ20 ಪಂದ್ಯದ ಮೂಲಕ ಪಾಕಿಸ್ತಾನ ಸರಣಿಗೆ ಮರಳುವ ನಿರೀಕ್ಷೆಯಿದೆ. ಏಷ್ಯಾಕಪ್‌ನಿಂದಲೂ ಒಂದೂ ದೊಡ್ಡ ಇನ್ನಿಂಗ್ಸ್‌ ಆಡಲು ಸಾಧ್ಯವಾಗದ ಪಾಕ್‌ ನಾಯಕ ಬಾಬರ್‌ ಅಜಮ್‌ ಮೇಲೆ ಮತ್ತೊಮ್ಮೆ ಕಣ್ಣು ಬಿದ್ದಿದೆ. ಮೊದಲ ಟಿ20ಯಲ್ಲಿ ಬಾಬರ್ ಫಾರ್ಮ್​ಗೆ ಮರಳುತ್ತಿರುವುದು ಕಂಡುಬಂದರೂ, ಉತ್ತಮ ಆರಂಭದ ಹೊರತಾಗಿಯೂ ಅವರು ನಿಧಾನಗತಿಯ ಬ್ಯಾಟಿಂಗ್ ಮಾಡಿದಲ್ಲದೆ ಬಿಗ್ ಇನ್ನಿಂಗ್ಸ್ ಆಡಲು ವಿಫಲರಾದರು.

Published On - 8:01 pm, Thu, 22 September 22

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್