AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs ENG: ಪಾಕ್ ಬೌಲರ್​ಗಳ ಬೆಂಡೆತ್ತಿ ಹೊಸ ವಿಶ್ವ ದಾಖಲೆ ಬರೆದ ಇಂಗ್ಲೆಂಡ್

Pakistan vs England: ಆ ನಂತರ ಶುರುವಾಗಿದ್ದು ಪೋಪ್ ಹಾಗೂ ಹ್ಯಾರಿ ಬ್ರೂಕ್ ಅಬ್ಬರ. ಟೆಸ್ಟ್​ ಕ್ರಿಕೆಟ್​ನಲ್ಲಿ ಏಕದಿನ ಇನಿಂಗ್ಸ್​ ಆಡಿದ ಈ ಜೋಡಿ ಪಾಕಿಸ್ತಾನದ ಪ್ರಮುಖ ಬೌಲರ್​ಗಳ ಬೆಂಡೆತ್ತಿದರು.

PAK vs ENG: ಪಾಕ್ ಬೌಲರ್​ಗಳ ಬೆಂಡೆತ್ತಿ ಹೊಸ ವಿಶ್ವ ದಾಖಲೆ ಬರೆದ ಇಂಗ್ಲೆಂಡ್
England Batters
TV9 Web
| Edited By: |

Updated on:Dec 01, 2022 | 6:32 PM

Share

Pakistan vs England: ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಪಾಕಿಸ್ತಾನ್-ಇಂಗ್ಲೆಂಡ್ (Pakistan vs England) ನಡುವಣ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ ಹೊಸ ಇತಿಹಾಸ ಬರೆದಿದೆ. ಅದು ಕೂಡ ಇಂಗ್ಲೆಂಡ್ ದಾಂಡಿಗರ ಸಿಡಿಲಬ್ಬರದ ಮೂಲಕ ಎಂಬುದು ವಿಶೇಷ. ಅಂದರೆ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲೇ ಇಂಗ್ಲೆಂಡ್ ತಂಡದ ನಾಲ್ವರು ಶತಕ ಸಿಡಿಸಿ ಮಿಂಚಿದ್ದಾರೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಂಗ್ಲ ಪಡೆಯ ನಾಯಕ ಬೆನ್ ಸ್ಟೋಕ್ಸ್ (Ben Stokes) ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್​ ಪಾಕ್ ಬೌಲರ್​ಗಳಿಗೆ ಬಾಝ್ ​ಬಾಲ್ ಎಫೆಕ್ಟ್ ತೋರಿಸಿದರು.

ಮೊದಲ ಓವರ್​ನಲ್ಲೇ 14 ರನ್​ ಬಾರಿಸುವ ಮೂಲಕ ಭರ್ಜರಿಯಾಗಿ ಇನಿಂಗ್ಸ್ ಆರಂಭಿಸಿದ ಝ್ಯಾಕ್ ಕ್ರಾವ್ಲೆ ಹಾಗೂ ಬೆನ್ ಡಕೆಟ್ ಮೊದಲ ವಿಕೆಟ್​ಗೆ 233 ರನ್​ಗಳ ಜೊತೆಯಾಟವಾಡಿದರು. ಅದು ಕೂಡ ಕೇವಲ 35.4 ಓವರ್​ಗಳಲ್ಲಿ ಎಂಬುದು ವಿಶೇಷ. ಈ ಭರ್ಜರಿ ಜೊತೆಯಾಟದಲ್ಲಿ ಝ್ಯಾಕ್​ ಕ್ರಾವ್ಲೆ 111 ಎಸೆತಗಳಲ್ಲಿ 21 ಫೋರ್​ನೊಂದಿಗೆ 122 ರನ್ ಬಾರಿಸಿದರು. ಮತ್ತೊಂದೆಡೆ ಬೆನ್ ಡಕೆಟ್ 110 ಎಸೆತಗಳಲ್ಲಿ 15 ಫೋರ್​ನೊಂದಿಗೆ 107 ರನ್​ಗಳ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.

ಈ ಹಂತದಲ್ಲಿ ಝಾಹಿದ್ ಮೆಹಮೂದ್ ಎಸೆತದಲ್ಲಿ ಕ್ರಾವ್ಲೆ (107) ಔಟಾದರೆ, ಇದರ ಬೆನ್ನಲ್ಲೇ ಹ್ಯಾರಿಸ್ ರೌಫ್ ಎಸೆತದಲ್ಲಿ ಡಕೆಟ್ (122) ಕೂಡ ವಿಕೆಟ್ ಒಪ್ಪಿಸಿದರು. ಈ ವೇಳೆ ಜೊತೆಯಾದ ಒಲಿ ಪೋಪ್ ಹಾಗೂ ಜೋ ರೂಟ್ ಕೂಡ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದರು. ಆದರೆ 23 ರನ್​ಗಳಿಸಿದ್ದ ರೂಟ್ ಝಾಹಿದ್ ಮೆಹಮೂದ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು.

ಆ ನಂತರ ಶುರುವಾಗಿದ್ದು ಪೋಪ್ ಹಾಗೂ ಹ್ಯಾರಿ ಬ್ರೂಕ್ ಅಬ್ಬರ. ಟೆಸ್ಟ್​ ಕ್ರಿಕೆಟ್​ನಲ್ಲಿ ಏಕದಿನ ಇನಿಂಗ್ಸ್​ ಆಡಿದ ಈ ಜೋಡಿ ಪಾಕಿಸ್ತಾನದ ಪ್ರಮುಖ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ 104 ಎಸೆತಗಳಲ್ಲಿ 14 ಫೋರ್​ನೊಂದಿಗೆ ಒಲಿ ಪೋಪ್ 108 ರನ್ ಬಾರಿಸಿದರು. ಇದೇ ವೇಳೆ ಅಲಿ ಎಸೆತವನ್ನು ಗುರುತಿಸುವಲ್ಲಿ ಎಡವಿದ ಪೋಪ್ ಎಲ್​ಬಿ ಆಗಿ ನಿರ್ಗಮಿಸಿದರು. ಆದರೆ ಮತ್ತೊಂದೆಡೆ ಸಿಡಿಲಬ್ಬರ ಮುಂದುವರೆಸಿದ್ದ ಯುವ ಬ್ಯಾಟರ್ ಹ್ಯಾರಿ ಬ್ರೂಕ್ ಸೌದ್ ಶಕೀಲ್ ಎಸೆದ 68ನೇ ಓವರ್​ನ 6 ಎಸೆತಗಳಲ್ಲೂ ಭರ್ಜರಿ ಬೌಂಡರಿ ಬಾರಿಸಿದರು.

ಶಕೀಲ್ ಎಸೆದ ಮೊದಲ ಎಸೆತವನ್ನು ಔಟ್ ಸೈಡ್​ ಆಫ್​ನತ್ತ ಫೋರ್ ಬಾರಿಸಿದ ಬ್ರೂಕ್, 2ನೇ ಎಸೆತವನ್ನು ಎಕ್ಸ್​ಟ್ರಾ ಕವರ್​ನತ್ತ ಬಾರಿಸಿ ಬೌಂಡರಿಗಿಟ್ಟಿಸಿಕೊಂಡರು. ಇನ್ನು 3ನೇ ಎಸೆತವನ್ನು ಆಕರ್ಷಕ ಆಫ್​ ಸೈಡ್ ಶಾಟ್ ಮೂಲಕ ಬೌಂಡರಿಗೆ ತಲುಪಿಸಿದರು. ಹಾಗೆಯೇ 4ನೇ ಎಸೆತವನ್ನು ಆಫ್​ ಸೈಡ್​ನತ್ತ ಪುಲ್ ಮಾಡುವ ಮೂಲಕ ಫೋರ್​ಗಳಿಸಿದರೆ, 5ನೇ ಎಸೆತವನ್ನು ಎಕ್ಸ್​ಟ್ರಾ ಕವರ್​ನತ್ತ ಬಾರಿಸಿದರು. ಇನ್ನು ಅಂತಿಮ ಎಸೆತವನ್ನು ಮಿಡ್​ ವಿಕೆಟ್​ನತ್ತ ಬಾರಿಸುವ ಮೂಲಕ ಸೌದ್ ಶಕೀಲ್ ಓವರ್​ನಲ್ಲಿ 24 ರನ್ ಕಲೆಹಾಕಿದರು. ಈ ಮೂಲಕ ಒಂದೇ ಓವರ್​ನಲ್ಲಿ 6 ಫೋರ್ ಬಾರಿಸಿದ ವಿಶೇಷ ಸಾಧಕರ ಪಟ್ಟಿಗೆ ಹ್ಯಾರಿ ಬ್ರೂಕ್ ಸೇರ್ಪಡೆಯಾದರು.

ಅಷ್ಟೇ ಅಲ್ಲದೆ ಕೇವಲ 80 ಎಸೆತಗಳಲ್ಲಿ 14 ಫೋರ್, 2 ಸಿಕ್ಸ್​ನೊಂದಿಗೆ ಚೊಚ್ಚಲ ಶತಕ ಪೂರೈಸುವ ಮೂಲಕ ಬ್ಯಾಟ್ ಮೇಲೆಕ್ಕೆತ್ತಿದ್ದರು. ಸದ್ಯ ಇಂಗ್ಲೆಂಡ್ ತಂಡವು ಮೊದಲ ದಿನದಾಟದಲ್ಲಿ 4 ವಿಕೆಟ್ ಕಳೆದುಕೊಂಡು 506 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಹ್ಯಾರಿ ಬ್ರೂಕ್ (101) ಹಾಗೂ ನಾಯಕ ಬೆನ್​ ಸ್ಟೋಕ್ಸ್ (34) ಅಜೇಯರಾಗಿ ಉಳಿದಿದ್ದಾರೆ.

112 ವರ್ಷಗಳ ವಿಶ್ವ ದಾಖಲೆ ಉಡೀಸ್:

ವಿಶೇಷ ಎಂದರೆ ಇಂಗ್ಲೆಂಡ್ ತಂಡವು ಮೊದಲ ದಿನದಾಟದಲ್ಲಿ ಕೇವಲ 75 ಓವರ್​ಗಳಲ್ಲಿ 506 ರನ್ ಕಲೆಹಾಕಿದೆ. ಅಂದರೆ 450 ಎಸೆತಗಳಲ್ಲಿ 506 ರನ್ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಈ ಹಿಂದೆ ಮೊದಲ ದಿನದಾಟದಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು.

1910 ರಲ್ಲಿ ಆಸ್ಟ್ರೇಲಿಯಾ ತಂಡವು ಸಿಡ್ನಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ಮೊದಲ ದಿನದಾಟದಲ್ಲಿ ಬರೋಬ್ಬರಿ 494 ರನ್ ಕಲೆಹಾಕಿ ದಾಖಲೆ ನಿರ್ಮಿಸಿತ್ತು. ಇದೀಗ ಮೊದಲ ದಿನದಾಟದಲ್ಲಿ 506 ರನ್ ಬಾರಿಸುವ ಮೂಲಕ ಇಂಗ್ಲೆಂಡ್ ತಂಡವು 112 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಅಳಿಸಿ ಹಾಕಿರುವುದು ವಿಶೇಷ.

ಇದನ್ನೂ ಓದಿ: BazBall: ಟೆಸ್ಟ್ ಕ್ರಿಕೆಟ್ ಅನ್ನೇ ಉಡೀಸ್ ಮಾಡ್ತಾರಾ ಬಾಝ್: ಏನಿದು ಬಾಝ್​ಬಾಲ್?

ಪಾಕ್ ವಿರುದ್ಧ ಮೊದಲ ಟೆಸ್ಟ್​ನಲ್ಲಿ ಶತಕ ಬಾರಿಸಿದವರು:

  • ಝ್ಯಾಕ್ ಕ್ರಾವ್ಲೆ- 122 ರನ್​ (111 ಎಸೆತ)
  • ಬೆನ್​ ಡಕೆಟ್- 107 ರನ್​ (110 ಎಸೆತ)
  • ಒಲಿ ಪೋಪ್- 108 ರನ್​ (104 ಎಸೆತ)
  • ಹ್ಯಾರಿ ಬ್ರೂಕ್- 101* (81 ಎಸೆತ)

Published On - 6:31 pm, Thu, 1 December 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!