PAK vs ENG: ಬರೋಬ್ಬರಿ 44 ತಿಂಗಳ ನಂತರ ತವರಿನಲ್ಲಿ ಟೆಸ್ಟ್ ಪಂದ್ಯ ಗೆದ್ದ ಪಾಕ್ ತಂಡ

PAK vs ENG: ತವರು ನೆಲದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಕಾಯುವಿಕೆಯನ್ನು ಕೊನೆಗೂ ಪಾಕ್ ತಂಡ ಅಂತ್ಯಗೊಳಿಸಿದೆ. ಬಾಬರ್ ಆಝಂ ಸೇರಿದ್ದಂತೆ ಸ್ಟಾರ್ ಆಟಗಾರರನ್ನು ತಂಡದಿಂದ ಕೈಬಿಟ್ಟಿದ್ದ ಪಂದ್ಯದಲ್ಲಿ ಪಾಕಿಸ್ತಾನ 152 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಮುಲ್ತಾನ್‌ನಲ್ಲಿ ನಡೆದ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಪಾಕಿಸ್ತಾನ ಕೇವಲ 4 ದಿನಗಳಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ.

PAK vs ENG: ಬರೋಬ್ಬರಿ 44 ತಿಂಗಳ ನಂತರ ತವರಿನಲ್ಲಿ ಟೆಸ್ಟ್ ಪಂದ್ಯ ಗೆದ್ದ ಪಾಕ್ ತಂಡ
ಪಾಕಿಸ್ತಾನ- ಇಂಗ್ಲೆಂಡ್
Follow us
|

Updated on:Oct 18, 2024 | 1:04 PM

ಮುಲ್ತಾನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡ 152 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿ 1-1 ರಿಂದ ಸಮಬಲಗೊಂಡಿದೆ. ಇದಕ್ಕೂ ಮುನ್ನ ಇದೇ ಮೈದಾನದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಇನ್ನಿಂಗ್ಸ್​ ಗೆಲುವು ಸಾಧಿಸಿತ್ತು. ಇದೀಗ ತಿರುಗೇಟು ನೀಡಿರುವ ಪಾಕಿಸ್ತಾನ ತಂಡ ಬರೋಬ್ಬರಿ 44 ತಿಂಗಳುಗಳ ನಂತರ ತನ್ನ ತವರು ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಇನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 366 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್​ನಲ್ಲಿ 291 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಪಾಕಿಸ್ತಾನ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 75 ರನ್‌ಗಳ ಮುನ್ನಡೆ ಸಾಧಿಸಿತ್ತು. 221 ರನ್​ಗಳಿಗೆ ಎರಡನೇ ಇನ್ನಿಂಗ್ಸ್ ಮುಗಿಸಿದ ಪಾಕಿಸ್ತಾನ ತಂಡ ಅಂತಿಮವಾಗಿ ಇಂಗ್ಲೆಂಡ್ ಗೆಲುವಿಗೆ 296 ರನ್‌ಗಳ ಗುರಿ ನೀಡಿತ್ತು. ಇತ್ತ 297 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ತಂಡ 144 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಎರಡನೇ ಟೆಸ್ಟ್​ನಲ್ಲಿ 152 ರನ್‌ಗಳ ಸೋಲು ಅನುಭವಿಸಿತು.

ಸ್ಪಿನ್ನರ್‌ಗಳ ಅದ್ಭುತ ಪ್ರದರ್ಶನ

ಎರಡನೇ ಟೆಸ್ಟ್ ಗೆಲುವಿಗೆ 297 ರನ್​​ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಬ್ಯಾಟ್ಸ್​ಮನ್​ಗಳು ಮುಲ್ತಾನ್ ಪಿಚ್​ನಲ್ಲಿ ಪಾಕ್ ಸ್ಪಿನ್ನರ್​ಗಳ ಮುಂದೆ ಮಂಡಿಯೂರಿದರು. ಎರಡನೇ ಟೆಸ್ಟ್​ನಲ್ಲಿ ಆಡುವ ಅವಕಾಶ ಪಡೆದಿದ್ದ ನೋಮನ್ ಅಲಿ ಏಕಾಂಗಿಯಾಗಿ ಇಂಗ್ಲೆಂಡ್‌ನ 8 ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್​ಗಟ್ಟಿದರು. ಪರಿಣಾಮ ಇಡೀ ಇಂಗ್ಲೆಂಡ್ ತಂಡ ಒಟ್ಟಾಗಿ 150 ರನ್​ಗಳಿಸಲೂ ಸಾಧ್ಯವಾಗಲಿಲ್ಲ. ಅಂತಿಮವಾಗಿ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 144 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲನುಭವಿಸಿತು.

ಬಾಬರ್ ಬದಲಿಗೆ ಬಂದವ ಶತಕ ಸಿಡಿಸಿದ

ಮುಲ್ತಾನ್ ಟೆಸ್ಟ್​ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಕಮ್ರಾನ್ ಗುಲಾಮ್ ಶತಕದ ಇನ್ನಿಂಗ್ಸ್ ಆಡಿದರು. ವಾಸ್ತವವಾಗಿ ಬಾಬರ್ ಆಝಂ ಬದಲಿಗೆ ತಂಡ ಸೇರಿಕೊಂಡು ತಮ್ಮ ಚೊಚ್ಚಲ ಪಂದ್ಯವನ್ನಾಡಿದ ಕಮ್ರಾನ್ ಗುಲಾಮ್ 118 ರನ್‌ಗಳ ಇನಿಂಗ್ಸ್ ಆಡಿದರು. ಇದಾದ ಬಳಿಕ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 291 ರನ್​ಗಳಿಗೆ ಆಲೌಟ್ ಆಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ ಪರ ಸಲ್ಮಾನ್ ಅಘಾ 63 ರನ್ ಗಳಿಸಿ ತಂಡವನ್ನು 221 ರನ್‌ಗಳಿಗೆ ಕೊಂಡೊಯ್ದರು. ಈ ಮೂಲಕ ಇಂಗ್ಲೆಂಡ್​ಗೆ 297 ರನ್​ಗಳ ಗುರಿ ಸಿಕ್ಕಿತು.

ಸ್ಪಿನ್ ದಾಳಿಗೆ ಇಂಗ್ಲೆಂಡ್ ತತ್ತರ

297 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್​ಗೆ ಇನ್ನು ಸಾಕಷ್ಟು ಸಮಯವಿತ್ತು. ಆದರೆ ಸಮಯವಿದ್ದರೂ, ಪಾಕಿಸ್ತಾನಿ ಸ್ಪಿನ್ನರ್‌ಗಳ ದಾಳಿಯ ಮುಂದೆ ಆಂಗ್ಲ ಬ್ಯಾಟರ್​ಗಳಿಗೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ನೋಮನ್ ಅಲಿ ಮತ್ತು ಸಾಜಿದ್ ಖಾನ್ ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಆಂಗ್ಲ ಬ್ಯಾಟ್ಸ್‌ಮನ್‌ಗಳನ್ನು ಇನ್ನಿಲ್ಲದಂತೆ ಕಾಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಸಾಜಿದ್ ಖಾನ್ 7 ಮತ್ತು ನೋಮನ್ ಅಲಿ 3 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ನೋಮನ್ ಅಲಿ 8 ವಿಕೆಟ್, ಸಾಜಿದ್ 2 ವಿಕೆಟ್ ಪಡೆದರು. ಅಂದರೆ ಎರಡು ಇನ್ನಿಂಗ್ಸ್​ನಲ್ಲಿ ಉರುಳಿದ 20 ವಿಕೆಟ್​​ಗಳಲ್ಲಿ ನೋಮನ್ ಅಲಿ 11 ವಿಕೆಟ್ ಪಡೆದರೆ, ಸಾಜಿದ್ ಖಾನ್ 9 ವಿಕೆಟ್ ಪಡೆದರು.

1348 ದಿನಗಳ ಕಾಯುವಿಕೆ ಅಂತ್ಯ

ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಗೆದ್ದಿತ್ತು. ಎರಡನೇ ಟೆಸ್ಟ್​ನಲ್ಲಿ ಪಾಕಿಸ್ತಾನ ತಂಡ, ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಇದರೊಂದಿಗೆ 3 ಟೆಸ್ಟ್ ಪಂದ್ಯಗಳ ಸರಣಿ 1-1 ರಲ್ಲಿ ಸಮಬಲಗೊಂಡಿದೆ. ಮುಲ್ತಾನ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ, ಪಾಕಿಸ್ತಾನವು 1348 ದಿನಗಳ ಕಾಲ ತವರು ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆಲ್ಲದ ತನ್ನ ಕಾಯುವಿಕೆಯನ್ನು ಕೊನೆಗೊಳಿಸಿದೆ. ಕೊನೆಯದಾಗಿ ಪಾಕ್ ಪಡೆ ಫೆಬ್ರವರಿ 2021 ರಲ್ಲಿ ತವರು ನೆಲದಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Fri, 18 October 24

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ