ಇಂಗ್ಲೆಂಡ್‌ ವಿರುದ್ಧದ ಉಳಿದೆರಡು ಟೆಸ್ಟ್ ಪಂದ್ಯಗಳಿಗೆ ಪಾಕ್ ತಂಡ ಪ್ರಕಟ; ಬಾಬರ್, ಆಫ್ರಿದಿಗೆ ತಂಡದಿಂದ ಗೇಟ್​ಪಾಸ್

PAK vs ENG: ಪಾಕಿಸ್ತಾನ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಉಳಿದೆರಡು ಪಂದ್ಯಗಳಿಗೆ ಆತಿಥೇಯ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ತಂಡದ ಆಯ್ಕೆಯಲ್ಲಿ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಪಾಕ್ ಆಯ್ಕೆ ಮಂಡಳಿ, ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ಜೀವಾಳ ಎನಿಸಿಕೊಂಡಿರುವ ಆಟಗಾರರನ್ನೇ ತಂಡದಿಂದ ಕೈಬಿಟ್ಟಿದೆ.

ಇಂಗ್ಲೆಂಡ್‌ ವಿರುದ್ಧದ ಉಳಿದೆರಡು ಟೆಸ್ಟ್ ಪಂದ್ಯಗಳಿಗೆ ಪಾಕ್ ತಂಡ ಪ್ರಕಟ; ಬಾಬರ್, ಆಫ್ರಿದಿಗೆ ತಂಡದಿಂದ ಗೇಟ್​ಪಾಸ್
ಪಾಕಿಸ್ತಾನ ಟೆಸ್ಟ್ ತಂಡ
Follow us
ಪೃಥ್ವಿಶಂಕರ
|

Updated on:Oct 13, 2024 | 6:10 PM

ಪಾಕಿಸ್ತಾನ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಉಳಿದೆರಡು ಪಂದ್ಯಗಳಿಗೆ ಆತಿಥೇಯ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ತಂಡದ ಆಯ್ಕೆಯಲ್ಲಿ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಪಾಕ್ ಆಯ್ಕೆ ಮಂಡಳಿ, ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ಜೀವಾಳ ಎನಿಸಿಕೊಂಡಿರುವ ಆಟಗಾರರನ್ನೇ ತಂಡದಿಂದ ಕೈಬಿಟ್ಟಿದೆ. ಅದರಂತೆ ತಂಡದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂರನ್ನು ಇಡೀ ಸರಣಿಯಿಂದಲೇ ಹೊರಹಾಕಿದೆ. ಹಾಗೆಯೇ ತಂಡದ ಸ್ಟಾರ್ ಬೌಲರ್ ಶಾಹೀನ್ ಶಾ ಆಫ್ರಿದಿ ಮತ್ತು ನಸೀಮ್ ಶಾ ಅವರಿಗೂ ಸಹ ಗೇಟ್​ಪಾಸ್ ನೀಡಿದೆ. ಒಟ್ಟಿನಲ್ಲಿ 4 ಆಟಗಾರರು ತಂಡದಿಂದ ಹೊರಬಿದಿದ್ದು, ಕೆಲವು ಹೊಸ ಮುಖಗಳಿಗೆ ಅವಕಾಶ ಸಿಕ್ಕಿದೆ.

ಬಾಬರ್​ಗೆ ಮರ್ಮಾಘಾತ

ಉಭಯ ತಂಡಗಳ ನಡುವೆ ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಇನಿಂಗ್ಸ್ ಮತ್ತು 47 ರನ್‌ಗಳಿಂದ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಮೊದಲ ಇನಿಂಗ್ಸ್‌ನಲ್ಲಿ 556 ರನ್ ಗಳಿಸಿತ್ತಾದರೂ ಸೋಲಿನಿಂದ ಪಾರಾಗಲು ಸಾಧ್ಯವಾಗಲಿಲ್ಲ. ಆದರೆ ಎರಡೂ ಇನ್ನಿಂಗ್ಸ್‌ಗಳಲ್ಲಿ ಬಾಬರ್ ಆಝಂ ಬ್ಯಾಟ್ ಸದ್ದು ಮಾಡಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 30 ರನ್ ಗಳಿಸಿದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಗಳಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಸತತ 18ನೇ ಇನ್ನಿಂಗ್ಸ್‌ನಲ್ಲಿ 50ರ ಗಡಿ ಮುಟ್ಟಲು ಬಾಬರ್​ಗೆ ಸಾಧ್ಯವಾಗಲಿಲ್ಲ. ಡಿಸೆಂಬರ್ 2022 ರಲ್ಲಿ ಕೊನೆಯದಾಗಿ ಶತಕ ಸಿಡಿಸಿದ್ದ ಬಾಬರ್, ಆ ಬಳಿಕ ನಿರಂತರವಾಗಿ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಬಾಬರ್​ ಅವರನ್ನು ತಂಡದಿಂದ ಹೊರಹಾಕಬೇಕೆನ್ನುವ ಒತ್ತಡ ಹೆಚ್ಚಿತ್ತು. ಅಂತಿಮವಾಗಿ ಪಿಸಿಬಿಯ ಹೊಸ ಆಯ್ಕೆ ಸಮಿತಿಯು ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಶಾಹೀನ್ ಸೇರಿದಂತೆ ಮೂವರಿಗೆ ಕೋಕ್

ಬಾಬರ್ ಜೊತೆಗೆ, ತಂಡದ ಪ್ರಮುಖ ಬೌಲರ್ ಶಾಹೀನ್ ಶಾ ಆಫ್ರಿದಿ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ಮೂರು ಮಾದರಿಯ ಕ್ರಿಕೆಟ್​ನಲ್ಲೂ ಪಾಕ್ ತಂಡವನ್ನು ಪ್ರತಿನಿಧಿಸುತ್ತಿರುವ ಆಫ್ರಿದಿಗೂ ಆಯ್ಕೆ ಮಂಡಳಿ ಗೇಟ್ ಪಾಸ್ ನೀಡಿದೆ. ವಾಸ್ತವವಾಗಿ ಬಾಬರ್‌ ಅವರಂತೆ ಶಾಹೀನ್‌ ಆಫ್ರಿದಿ ಅವರ ಪ್ರದರ್ಶನವೂ ಕಳೆದ ಒಂದೂವರೆ ವರ್ಷದಿಂದ ಕಳಪೆಯಾಗಿದೆ. ಇದಕ್ಕೆ ಉದಾಹರಣೆಯಾಗಿ ಮುಲ್ತಾನ್ ಟೆಸ್ಟ್‌ನಲ್ಲಿ 26 ಓವರ್‌ ಎಸೆದ ಶಾಹೀನ್ 120 ರನ್‌ ನೀಡಿ 1 ವಿಕೆಟ್ ಮಾತ್ರ ಪಡೆದರು. ಕಳೆದ ಒಂದು ವರ್ಷದಲ್ಲಿ ಆಡಿರುವ 11 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಕೇವಲ 17 ವಿಕೆಟ್ ಮಾತ್ರ ಆಫ್ರಿದಿ ಖಾತೆಗೆ ಸೇರಿವೆ.

ಆಫ್ರಿದಿ ಜೊತೆಗೆ ಮತ್ತೊಬ್ಬ ವೇಗದ ಬೌಲರ್ ನಸೀಮ್ ಶಾರನ್ನು ಸರಣಿಯಿಂದ ಕೈಬಿಡಲಾಗಿದೆ. ಕಳೆದ ಪಂದ್ಯದಲ್ಲಿ ನಸೀಮ್ 31 ಓವರ್ ಎಸೆದು 157 ರನ್ ನೀಡಿ 2 ವಿಕೆಟ್ ಮಾತ್ರ ಕಬಳಿಸಿದರು. ಹೀಗಾಗಿ ಅವರ ಫಿಟ್ನೆಸ್ ಮೇಲೆ ನಿರಂತರವಾಗಿ ಪ್ರಶ್ನೆಗಳು ಕೇಳಿಬರುತ್ತಿವೆ ಆದ್ದರಿಂದ ಅವರನ್ನು ಸರಣಿಯಿಂದ ತೆಗೆದುಹಾಕಲಾಗಿದೆ. ಇದಕ್ಕೂ ಮೊದಲು, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಿಂದಲೂ ನಸೀಮ್ ಮತ್ತು ಶಾಹೀನ್ ಅವರನ್ನು ಕೈಬಿಡಲಾಗಿತ್ತು. ಇವರಲ್ಲದೆ ಮೊದಲ ಟೆಸ್ಟ್​ನಲ್ಲಿ ಅಸ್ವಸ್ಥಗೊಂಡಿದ್ದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ.

ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಸ್ಥಾನ

ಸರಣಿಯಿಂದ ಹೊರಬಿದ್ದಿರುವ ಈ ಸ್ಟಾರ್ ಆಟಗಾರರ ಸ್ಥಾನದಲ್ಲಿ ಆಯ್ಕೆ ಸಮಿತಿಯು 3 ಅನ್‌ಕ್ಯಾಪ್ಡ್ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಈ ಮೂವರಿಗೆ ಅವಕಾಶ ನೀಡಬೇಕೆಂದು ಬಹಳ ದಿನಗಳಿಂದ ಬೇಡಿಕೆ ಇತ್ತು. ಅದರಂತೆ ಕಮ್ರಾನ್ ಗುಲಾಮ್ ಮತ್ತು ವಿಕೆಟ್ ಕೀಪರ್ ಹಸಿಬುಲ್ಲಾ ಜೊತೆಗೆ ಸ್ಪಿನ್ನರ್ ಮೆಹ್ರಾನ್ ಮುಮ್ತಾಜ್ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಉಳಿದೆರಡು ಟೆಸ್ಟ್ ಪಂದ್ಯಗಳಿಗೆ ಪಾಕ್ ತಂಡ: ಶಾನ್ ಮಸೂದ್ (ನಾಯಕ), ಸೌದ್ ಶಕೀಲ್ (ಉಪನಾಯಕ), ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಹಸೀಬುಲ್ಲಾ, ಕಮ್ರಾನ್ ಗುಲಾಮ್, ಮೆಹ್ರಾನ್ ಮುಮ್ತಾಜ್, ಮೀರ್ ಹಮ್ಜಾ, ಮೊಹಮ್ಮದ್ ಅಲಿ, ಮೊಹಮ್ಮದ್ ಹುರೈರಾ, ಮೊಹಮ್ಮದ್ ರಿಜ್ವಾನ್, ನೋಮನ್ ಅಲಿ, ಸೈಮ್ ಅಯೂಬ್, ಸಾಜಿದ್ ಖಾನ್, ಸಲ್ಮಾನ್ ಅಘಾ ಮತ್ತು ಜಾಹಿದ್ ಮಹಮೂದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:55 pm, Sun, 13 October 24

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ