PAK vs ENG: ಟಾಸ್ ಗೆದ್ದ ಇಂಗ್ಲೆಂಡ್; 1992ರ ವಿಶ್ವಕಪ್ನಂತೆ ಪಾಕಿಸ್ತಾನ ಮೊದಲು ಬ್ಯಾಟಿಂಗ್; ಉಭಯ ತಂಡಗಳು ಹೀಗಿವೆ
T20 World Cup 2022: 992ರ ವಿಶ್ವಕಪ್ನಲ್ಲೂ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ ಈ ಪಂದ್ಯದಲ್ಲೂ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನ ಟಿ20 ಚಾಂಪಿಯನ್ ಆಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.
ಕಾಯುತ್ತಿದ್ದ ಸಮಯ ಬಂದಿದೆ. ಟಿ20 ವಿಶ್ವಕಪ್ 2022 (T20 World Cup 2022) ತನ್ನ ಪ್ರಯಾಣದ ಕೊನೆಯ ಹಂತವನ್ನು ತಲುಪಿದೆ. ಇಂದಿನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ (Pakistan and England) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಅಂದರೆ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲಿದೆ. ಕಾಕತಾಳಿಯವೆಂದರೆ 1992ರ ವಿಶ್ವಕಪ್ನಲ್ಲೂ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ ಈ ಪಂದ್ಯದಲ್ಲೂ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನ ಟಿ20 ಚಾಂಪಿಯನ್ ಆಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಟಾಸ್ ಗೆದ್ದ ನಂತರ, ಬಾಬರ್ ಅಜಮ್ ಮತ್ತು ಜೋಸ್ ಬಟ್ಲರ್ ತಮ್ಮ ತಮ್ಮ ತಂಡದ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಪಾಕಿಸ್ತಾನ ಫೈನಲ್ ಟಿಕೆಟ್ ಖಚಿತಪಡಿಸಿಕೊಂಡಿತ್ತು. ಹಾಗೆಯೇ ಇಂಗ್ಲೆಂಡ್ ಕೂಡ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು. ಈಗ ಎರಡೂ ತಂಡಗಳಲ್ಲಿ ಯಾರು ಗೆದ್ದರೂ ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಲಿದ್ದಾರೆ.
ಎರಡೂ ತಂಡಗಳಲ್ಲೂ ಬದಲಾವಣೆ ಇಲ್ಲ
ಅಂತಿಮ ಕದನಕ್ಕೆ ಪಾಕಿಸ್ತಾನ ಮತ್ತು ಇಂಗ್ಲೆಂಡ್ ಎರಡೂ ತಂಡಗಳು ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿ-ಫೈನಲ್ ಗೆಲುವಿನ ಸಂಯೋಜನೆಯೊಂದಿಗೆ ಅಂತಿಮ ಮೈದಾನವನ್ನು ಆಡಲು ಎರಡೂ ತಂಡಗಳು ಮೆಲ್ಬೋರ್ನ್ ಮೈದಾನದಲ್ಲಿ ಕಾಲಿಟ್ಟಿದ್ದಾರೆ.
ಇದನ್ನೂ ಓದಿ: ಬರ್ತ್ ಡೇ ಪಾರ್ಟಿಯಲ್ಲಿ ಕಾಲು ಮುರಿದುಕೊಂಡು ಶಸ್ತ್ರಚಿಕಿತ್ಸೆಗೆ ಒಳಗಾದ ಆರ್ಸಿಬಿ ಆಲ್ರೌಂಡರ್..!
Toss news from the MCG ?
England have won the toss and opted to bowl in the #T20WorldCupFinal against Pakistan ?#PAKvENG | ?: https://t.co/HdpneOINqo pic.twitter.com/I2ucGfsYCs
— ICC (@ICC) November 13, 2022
ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ
ಪಾಕಿಸ್ತಾನ- ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಮೊಹಮ್ಮದ್ ವಾಸಿಮ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ, ಹ್ಯಾರಿಸ್ ರೌಫ್
ಇಂಗ್ಲೆಂಡ್- ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರಣ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್
ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:14 pm, Sun, 13 November 22