ಐಸಿಸಿ ಏಕದಿನ ವಿಶ್ವಕಪ್ನಲ್ಲಿ (ICC World Cup) ಇಂದು ಪಾಕಿಸ್ತಾನದ ಮೊದಲ ಪಂದ್ಯ ನಡೆಯಲಿದೆ. ಇದಕ್ಕೆ ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಸಜ್ಜಾಗಿ ನಿಂತಿದೆ. ವಿಶೇಷ ಎಂದರೆ ಬರೋಬ್ಬರಿ 27 ವರ್ಷಗಳ ಬಳಿಕ ಹೈದರಾಬಾದ್‌ನಲ್ಲಿ ವಿಶ್ವಕಪ್ ಪಂದ್ಯವೊಂದು ನಡೆಯುತ್ತಿದೆ. ಈ ಹಿಂದೆ ಅಜರುದ್ದೀನ್ ನಾಯಕರಾಗಿದ್ದಾಗ ಹೈದರಾಬಾದ್‌ನಲ್ಲಿ ವಿಶ್ವಕಪ್ ಪಂದ್ಯ ನಡೆದಿತ್ತು. ಆ ಬಳಿಕ ಇಂದು ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣ ವಿಶ್ವಕಪ್ ಪಂದ್ಯಗಳಿಗೆ ವೇದಿಕೆಯಾಗಿದೆ. ಈ ಬಾರಿ ಇಲ್ಲಿ ಒಟ್ಟು ಮೂರು ವಿಶ್ವಕಪ್ ಪಂದ್ಯಗಳು ನಡೆಯುತ್ತಿವೆ.
ಇಂದು ಮಧ್ಯಾಹ್ನ 2 ಗಂಟೆಗೆ ಪಾಕಿಸ್ತಾನ ಹಾಗೂ ನೆದರ್ಲೆಂಡ್ಸ್ ತಂಡಗಳ ನಡುವಣ ಪಂದ್ಯ ಆರಂಭವಾಗಲಿದೆ. ಪಂದ್ಯದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಆಯೋಜಕರು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದಾರೆ. ಕ್ರೀಡಾಂಗಣದಲ್ಲಿ ಹೊಸ ಬಣ್ಣ, ಬೆಳಕಿನ, ಆಸನಗಳ ವ್ಯವಸ್ಥೆ ಮಾಡಲಾಗಿದೆ. 10 ಸಾವಿರ ಹೊಸ ಆಸನಗಳು ಲಭ್ಯವಾಗುವಂತೆ ಮಾಡಿರುವ ಸ್ಟೇಡಿಯಂ ಮ್ಯಾನೇಜರ್ಗಳು ಮುಂದಿನ ಪಂದ್ಯದ ವೇಳೆಗೆ ಸ್ಟೇಡಿಯಂನಲ್ಲಿರುವ ಎಲ್ಲಾ ಸೀಟುಗಳನ್ನು ಬದಲಾಯಿಸುವುದಾಗಿ ಕೂಡ ಹೇಳಿದ್ದಾರೆ.
ಟೀಮ್ ಇಂಡಿಯಾ ಟ್ರೈನಿಂಗ್ ಸೆಷನ್ನಿಂದ ಬಯಲಾಯಿತು ದೊಡ್ಡ ಸುದ್ದಿ: ಭಾರತದ ಮಾಸ್ಟರ್ ಪ್ಲಾನ್ ಏನು ನೋಡಿ
ಇನ್ನು ಪಾಕಿಸ್ತಾನ ಪಂದ್ಯದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಹಾಗೂ ಅಧಿಕಾರಿಗಳು ಎಲ್ಲಾ ರೀತಿಯ ಬಂದೋಬಸ್ತ್ ಮಾಡಿದ್ದಾರೆ. ಒಟ್ಟು 1500 ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಕ್ರೀಡಾಂಗಣದಲ್ಲಿ ಪಂದ್ಯಗಳು ಸುಗಮವಾಗಿ ನಡೆಯಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಚಕೊಂಡ ಪೊಲೀಸ್ ಆಯುಕ್ತ ಡಿ.ಎಸ್.ಚೌಹಾಣ್ ತಿಳಿಸಿದ್ದಾರೆ. ಗೇಟ್ ಸಂಖ್ಯೆ 1 ರಿಂದ ಮಾತ್ರ ಆಟಗಾರರಿಗೆ ಕ್ರೀಡಾಂಗಣ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕ್ರೀಡಾಂಗಣದ ಸುತ್ತ 360 ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಬಾಂಬ್ ಸ್ಕ್ವಾಡ್‌ಗಳನ್ನು ಕೂಡ ನಿಯೋಜಿಸಲಾಗಿದೆ.
ಬ್ಯಾನರ್, ವಾಟರ್ ಬಾಟಲ್, ಕ್ಯಾಮೆರಾ, ಸಿಗರೇಟ್, ಲ್ಯಾಪ್ ಟಾಪ್, ಎಲೆಕ್ಟ್ರಾನಿಕ್ ವಸ್ತುಗಳು, ಮ್ಯಾಚ್ ಬಾಕ್ಸ್, ಲೈಟರ್, ಚಾಕು, ಬೈನಾಕ್ಯುಲರ್, ಪೆನ್ನು, ಬ್ಯಾಟರಿ, ಹೆಲ್ಮೆಟ್, ಸುಗಂಧ ದ್ರವ್ಯದ ಬಾಟಲಿಗಳನ್ನು ಪಂದ್ಯಕ್ಕೆ ಹಾಜರಾಗುವ ಪ್ರೇಕ್ಷಕರಿಗೆ ತರಲು ನಿರ್ಬಂಧಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಎಲ್ಲ ಪ್ರವೇಶ ಕೇಂದ್ರಗಳ ಬಳಿ ತಪಾಸಣೆಗೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಇವುಗಳ ಜೊತೆಗೆ ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆಯನ್ನು ಏರ್ಪಡಿಸಲಾಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ