PAK vs NZ: ಸತತ 4ನೇ ಪಂದ್ಯದಲ್ಲೂ ಹೀನಾಯ ಸೋಲು ಕಂಡ ಪಾಕಿಸ್ತಾನ..!

PAK vs NZ: ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಈಗಾಗಲೇ 3-0 ಅಂತರದಲ್ಲಿ ಕಳೆದುಕೊಂಡಿದ್ದ ಪಾಕಿಸ್ತಾನ ತಂಡ ಇಂದು ನಡೆದ ನಾಲ್ಕನೇ ಪಂದ್ಯದಲ್ಲೂ 7 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಈ ಮೂಲಕ 2023 ರ ಏಕದಿನ ವಿಶ್ವಕಪ್ ಬಳಿಕ ಆಡಿರುವ ಏಳೂ ಪಂದ್ಯಗಳಲ್ಲೂ ಪಾಕ್ ತಂಡಕ್ಕೆ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ.

PAK vs NZ: ಸತತ 4ನೇ ಪಂದ್ಯದಲ್ಲೂ ಹೀನಾಯ ಸೋಲು ಕಂಡ ಪಾಕಿಸ್ತಾನ..!
ಪಾಕಿಸ್ತಾನ ತಂಡ
Follow us
ಪೃಥ್ವಿಶಂಕರ
|

Updated on:Jan 19, 2024 | 4:50 PM

ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಈಗಾಗಲೇ 3-0 ಅಂತರದಲ್ಲಿ ಕಳೆದುಕೊಂಡಿದ್ದ ಪಾಕಿಸ್ತಾನ ತಂಡ (Pakistan vs New Zealand) ಇಂದು ನಡೆದ ನಾಲ್ಕನೇ ಪಂದ್ಯದಲ್ಲೂ 7 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆದ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿತು. ಉತ್ತರವಾಗಿ ನ್ಯೂಜಿಲೆಂಡ್ ತಂಡ 19ನೇ ಓವರ್‌ನಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಈ ಮೂಲಕ 2023 ರ ಏಕದಿನ ವಿಶ್ವಕಪ್ ಬಳಿಕ ಆಡಿರುವ ಏಳೂ ಪಂದ್ಯಗಳಲ್ಲೂ ಪಾಕ್ ತಂಡಕ್ಕೆ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ.

2023 ರ ನವೆಂಬರ್​ನಲ್ಲಿ ಕೊನೆಯ ಗೆಲುವು

ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಪಾಕ್ ತಂಡ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಿತ್ತು. ಆದರೆ ಆ ಸರಣಿಯಲ್ಲೂ ಪಾಕ್ ತಂಡಕ್ಕೆ ಒಂದೇ ಒಂದು ಗೆಲುವು ದಕ್ಕಿರಲಿಲ್ಲ. ಹೀಗಾಗಿ ಕಳೆದ ವರ್ಷ ನವೆಂಬರ್ 4 ರಂದು ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದ್ದ ಪಾಕ್ ತಂಡಕ್ಕೆ ಈ ವರ್ಷ ಗೆಲುವಿನ ಖಾತೆ ತೆರೆಯಲು ಇದುವರೆಗು ಸಾಧ್ಯವಾಗಿಲ್ಲ.

PAK vs NZ: 6,4,4,4,6..! ಒಂದೇ ಓವರ್​ನಲ್ಲಿ 24 ರನ್ ಬಿಟ್ಟುಕೊಟ್ಟ ಪಾಕ್ ನಾಯಕ ಅಫ್ರಿದಿ; ವಿಡಿಯೋ ನೋಡಿ

ರಿಜ್ವಾನ್ ಏಕಾಂಗಿ ಹೋರಾಟ

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ ಐದು ವಿಕೆಟ್‌ಗೆ 158 ರನ್ ಗಳಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಮೊಹಮ್ಮದ್ ರಿಜ್ವಾನ್ 63 ಎಸೆತಗಳಲ್ಲಿ 90 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದ್ದನ್ನು ಬಿಟ್ಟರೆ ತಂಡದ ಉಳಿದ ಬ್ಯಾಟ್ಸ್‌ಮನ್‌ಗಳಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರಲಿಲ್ಲ. ಕಳೆದ ಮೂರು ಪಂದ್ಯಗಳಲ್ಲಿ ಸತತ ಅರ್ಧಶತಕ ಬಾರಿಸಿದ್ದ ಮಾಜಿ ನಾಯಕ ಬಾಬರ್ ಕೂಡ ಇಂದಿನ ಪಂದ್ಯದಲ್ಲಿ 11 ಎಸೆತಗಳಲ್ಲಿ 19 ರನ್ ಗಳಿಸಲಷ್ಟೇ ಶಕ್ತರಾದರು. ರಿಜ್ವಾನ್ ನಂತರ, ಮೊಹಮ್ಮದ್ ನವಾಜ್ ಗಳಿಸಿದ 21 ರನ್ ತಂಡದ ಪರ ಗರಿಷ್ಠ ಸ್ಕೋರ್ ಆಗಿತ್ತು.

ಮೊದಲ ಎರಡು ಓವರ್‌ಗಳಲ್ಲಿ 3 ವಿಕೆಟ್

ಇದಾದ ಬಳಿಕ ನ್ಯೂಜಿಲೆಂಡ್ ತಂಡ ಈ ಗುರಿಯನ್ನು ಬೆನ್ನಟ್ಟಲು ಮುಂದಾದಾಗ ನಾಯಕ ಶಾಹೀನ್ ಶಾ ಆಫ್ರಿದಿ ಮೊದಲ ಓವರ್‌ನಲ್ಲಿಯೇ ಎರಡು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪಂದ್ಯವನ್ನು ರೋಮಾಂಚನಗೊಳಿಸಲು ಪ್ರಯತ್ನಿಸಿದರು. 8 ರನ್​ಗಳಿಸಿದ್ದ ಫಿಲ್ ಅಲೆನ್​ರನ್ನು ಔಟ್ ಮಾಡುವ ಮೂಲಕ ವಿಕೆಟ್​ಗಳ ಖಾತೆ ತೆರೆದ ಶಾಹೀನ್, ಮುಂದಿನ ಓವರ್‌ನಲ್ಲಿ ಟಿಮ್ ಸೆಫೋರ್ಡ್ ಅವರನ್ನು ಔಟ್ ಮಾಡಿದರು. ಬಳಿಕ ವಿಲ್ ಯಂಗ್ ಅವರನ್ನು ಪೆವಿಲಿಯನ್​ಗಟ್ಟಿದರು. ಈ ಮೂಲಕ ಪಾಕ್ ತಂಡದ ಗೆಲುವಿನ ಆಸೆಗೆ ಅಫ್ರಿದಿ ನೀರೆರೆದರು.

ಫಿಲಿಪ್ಸ್ – ಮಿಚೆಲ್ ಸ್ಫೋಟಕ ಇನ್ನಿಂಗ್ಸ್

ಆರಂಭದಲ್ಲೇ ನ್ಯೂಜಿಲೆಂಡ್ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದಾಗ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತ ಗ್ಲೆನ್ ಫಿಲಿಪ್ಸ್ ಮತ್ತು ಡೇರಿಲ್ ಮಿಚೆಲ್ ತಂಡವನ್ನು ಗೆಲುವಿನ ದಡ ಸೇರಿಸಿದರು . ಮೊದಲಿಗೆ ಇಬ್ಬರೂ ಎಚ್ಚರಿಕೆಯ ಆಟವಾಡಿದ್ದರಿಂದ ಹೆಚ್ಚಿನ ವಿಕೆಟ್ ನಷ್ಟವಾಗಲಿಲ್ಲ. ಹೀಗಾಗಿ ತಂಡ ಸುಲಭವಾಗಿ 100 ರ ಗಡಿ ದಾಟಿತು. ಬಳಿಕ ನ್ಯೂಜಿಲೆಂಡ್ ಗೆಲುವಿನ ವಾಸನೆ ಬಂದ ತಕ್ಷಣ ಫಿಲಿಪ್ಸ್ ಮತ್ತು ಮಿಚೆಲ್ ಬಿರುಸಿನ ಬ್ಯಾಟಿಂಗ್ ಆರಂಭಿಸಿದರು. ಅಂತಿಮವಾಗಿ ತಂಡವು ಕೇವಲ 18.1 ಓವರ್‌ಗಳಲ್ಲಿ ಗೆಲುವಿನ ದಡ ಮುಟ್ಟಿತು. ಈ ಮೂಲಕ ಪಾಕಿಸ್ತಾನದ ಗೆಲುವಿನ ಕನಸು ಮತ್ತೊಮ್ಮೆ ಭಗ್ನಗೊಂಡಿತು. ಕಿವೀಸ್ ಪರ ಗ್ಲೆನ್ ಫಿಲಿಪ್ಸ್ 52 ಎಸೆತಗಳಲ್ಲಿ ಅಜೇಯ 70 ರನ್ ಮತ್ತು ಡೇರಿಲ್ ಮಿಚೆಲ್ 44 ಎಸೆತಗಳಲ್ಲಿ ಅಜೇಯ 72 ರನ್ ಸಿಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Fri, 19 January 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?