PAK vs WI: ಬರೋಬ್ಬರಿ 13 ವರ್ಷಗಳ ನಂತರ ವಿಶ್ವಕಪ್​ನಲ್ಲಿ ಮೊದಲ ಗೆಲುವು ಕಂಡ ಪಾಕಿಸ್ತಾನ!

Women's World cup 2022: 2022 ರ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತನ್ನ ಮೊದಲ ಗೆಲುವಿನ ರುಚಿ ಕಂಡಿದೆ. ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಪಾಕ್ ವನಿತಾ ತಂಡ ಈ ಸಾಧನೆ ಮಾಡಿದೆ.

PAK vs WI: ಬರೋಬ್ಬರಿ 13 ವರ್ಷಗಳ ನಂತರ ವಿಶ್ವಕಪ್​ನಲ್ಲಿ ಮೊದಲ ಗೆಲುವು ಕಂಡ ಪಾಕಿಸ್ತಾನ!
ಪಾಕ್ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on:Mar 21, 2022 | 3:17 PM

2022 ರ ಐಸಿಸಿ ಮಹಿಳಾ ವಿಶ್ವಕಪ್‌ (ICC Women ‘s World Cup 2022)ನಲ್ಲಿ ಪಾಕಿಸ್ತಾನ ತನ್ನ ಮೊದಲ ಗೆಲುವಿನ ರುಚಿ ಕಂಡಿದೆ. ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಪಾಕ್ ವನಿತಾ ತಂಡ ಈ ಸಾಧನೆ ಮಾಡಿದೆ. ಟೂರ್ನಿಯಲ್ಲಿ ಇದುವರೆಗೆ ಆಡಿದ 5 ಪಂದ್ಯಗಳಲ್ಲಿ ಪಾಕಿಸ್ತಾನಕ್ಕೆ ಇದು ಮೊದಲ ಜಯವಾಗಿದೆ. ಇದಕ್ಕೂ ಮುನ್ನ ಸತತ 4 ಪಂದ್ಯಗಳಲ್ಲಿ ಸೋತಿದ್ದರು. ಮಹಿಳಾ ವಿಶ್ವಕಪ್ ಇತಿಹಾಸವನ್ನು ಅವಲೋಕಿಸಿದರೆ, 13 ವರ್ಷಗಳ ನಂತರ ಪಾಕಿಸ್ತಾನಕ್ಕೆ ಇದು ಮೊದಲ ಜಯವಾಗಿದೆ. ವಿಶ್ವಕಪ್ ಪಿಚ್‌ನಲ್ಲಿ ಪಾಕಿಸ್ತಾನಕ್ಕೆ ಕೊನೆಯ ಗೆಲುವು 2009 ರಲ್ಲಿ ಸಿಕ್ಕಿತ್ತು. ವಿಶ್ವಕಪ್​ನಲ್ಲಿ ಸತತ 18 ಪಂದ್ಯಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ಆದರೆ, ವೆಸ್ಟ್ ಇಂಡೀಸ್ ವಿರುದ್ಧದ ಸೋಲಿನ ಸರಣಿಯನ್ನು ಪಾಕಿಸ್ತಾನ ಮುರಿಯುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ನ್ಯೂಜಿಲೆಂಡ್ ನೆಲದಲ್ಲಿ ಪಾಕಿಸ್ತಾನಕ್ಕೆ ಇದು ಮೊದಲ ಏಕದಿನ ಜಯವಾಗಿದೆ.

ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಹ್ಯಾಮಿಲ್ಟನ್‌ನಲ್ಲಿ ನಡೆದಿದ್ದು, ಆರಂಭದಲ್ಲಿ ಮಳೆ ಪಂದ್ಯಕ್ಕೆ ಅಡ್ಡಿಯುಂಟ್ಟು ಮಾಡಿತ್ತು. ಮಳೆಯಿಂದಾಗಿ ಪಂದ್ಯದ ಓವರ್‌ಗಳನ್ನು ತಲಾ 20 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ವೆಸ್ಟ್ ಇಂಡೀಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತ್ತು.

ಪಾಕಿಸ್ತಾನದ ಬೆಸ್ಟ್ ಬೌಲಿಂಗ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ತಂಡದ ಯಾವುದೇ ಬ್ಯಾಟರ್ ಪಿಚ್​ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಟಿ20 ಕ್ರಿಕೆಟ್‌ನಲ್ಲಿ 2 ಶತಕ ಬಾರಿಸಿದ ಡಿಯಾಂಡ್ರಾ ಡಾಟಿನ್ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದರೂ, ಅವರು ಕೇವಲ 27 ರನ್ ಗಳಿಸಿ ಔಟಾದರು. ಇಡೀ ಕೆರಿಬಿಯನ್ ತಂಡ 20 ಓವರ್‌ಗಳನ್ನು ಆಡುವಲ್ಲಿ ಯಶಸ್ವಿಯಾಯಿತು. ಆದರೆ ಸ್ಕೋರ್ ಬೋರ್ಡ್​ನಲ್ಲಿ 7 ವಿಕೆಟ್ ನಷ್ಟಕ್ಕೆ 89 ರನ್ ಸೇರಿಸಲಷ್ಟೇ ಶಕ್ತವಾಯಿತು. ಇದಕ್ಕುತ್ತರವಾಗಿ ಪಾಕಿಸ್ತಾನ 7 ಎಸೆತಗಳು ಬಾಕಿಯಿರುವಂತೆ ಎರಡು ವಿಕೆಟ್ ಕಳೆದುಕೊಂಡು 90 ರನ್‌ಗಳ ಗುರಿ ತಲುಪಿತು. ಪಾಕ್ ಪರ ನಾಯಕಿ ಬಿಸ್ಮಾ ಮತ್ತು ಒಮೈಮಾ ಸೊಹೈಲ್ ಕೊನೆಯವರೆಗೂ ಅಜೇಯರಾಗಿ ಉಳಿದು ತಂಡಕ್ಕೆ ಜಯ ತಂದುಕೊಟ್ಟರು. ಬಿಸ್ಮಾ 20 ರನ್ ಗಳಿಸಿ ಔಟಾಗದೆ ಉಳಿದರೆ, ಒಮೈಮಾ ಅಜೇಯ 22 ರನ್ ಗಳಿಸಿದರು.

ಪಾಯಿಂಟ್ ಪಟ್ಟಿಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಪಾಕ್ ವಿರುದ್ಧ ಸೋತರೂ ಪಾಯಿಂಟ್ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ಸ್ಥಾನಕ್ಕೆ ಧಕ್ಕೆಯಾಗಿಲ್ಲ. ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಹಾಗೂ 3ರಲ್ಲಿ ಸೋತಿದೆ. ಈ ಮೂಲಕ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ. ಅದೇ ಸಮಯದಲ್ಲಿ, ಪಾಕಿಸ್ತಾನದ ಸ್ಥಾನವೂ ಬದಲಾಗಿಲ್ಲ. 5 ಪಂದ್ಯಗಳಲ್ಲಿ ಪಾಕಿಸ್ತಾನಕ್ಕೆ ಇದು ಮೊದಲ ಜಯವಾಗಿದೆ.

ಇದನ್ನೂ ಓದಿ: Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

Published On - 2:59 pm, Mon, 21 March 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ