AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್, ಏಷ್ಯನ್ ಗೇಮ್ಸ್​​ಗೆ ಪಾಕ್ ತಂಡ ಪ್ರಕಟ; ಈ ದಿನದಂದು ಭಾರತದ ವಿರುದ್ಧ ಪಂದ್ಯ

Pakistan Women's Squad: 2026ರ ಮಹಿಳಾ ಟಿ20 ಏಷ್ಯಾಕಪ್ ಮತ್ತು ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡ ಪ್ರಕಟವಾಗಿದೆ. ಯುವ ಆಲ್‌ರೌಂಡರ್ ಫಾತಿಮಾ ಸನಾ ನಾಯಕಿಯಾಗಿದ್ದು, ಹಿರಿಯ ಆಲಿಯಾ ರಿಯಾಜ್ ಏಷ್ಯನ್ ಗೇಮ್ಸ್‌ನಲ್ಲಿ ತಂಡ ಸೇರಲಿದ್ದಾರೆ. ಆಗಸ್ಟ್ 28 ರಿಂದ ಯುಎಇಯಲ್ಲಿ ನಡೆಯುವ ಏಷ್ಯಾಕಪ್‌ನಲ್ಲಿ ಭಾರತ-ಪಾಕ್ ಸೆಪ್ಟೆಂಬರ್ 5 ರಂದು ಮುಖಾಮುಖಿಯಾಗಲಿವೆ.

ಏಷ್ಯಾಕಪ್, ಏಷ್ಯನ್ ಗೇಮ್ಸ್​​ಗೆ ಪಾಕ್ ತಂಡ ಪ್ರಕಟ; ಈ ದಿನದಂದು ಭಾರತದ ವಿರುದ್ಧ ಪಂದ್ಯ
Pak Team
ಪೃಥ್ವಿಶಂಕರ
|

Updated on:Aug 17, 2026 | 4:09 PM

Share

2026 ರ ಮಹಿಳಾ ಟಿ20 ಏಷ್ಯಾಕಪ್ (2026 Women’s Asia Cup) ಇದೇ ಆಗಸ್ಟ್ 28 ರಿಂದ ಆರಂಭವಾಗಲಿದೆ. ಈ ಕ್ರೀಡಾಕೂಟಕ್ಕೆ ಭಾರತ ಮಹಿಳಾ ತಂಡವನ್ನು ಕೆಲವೇ ದಿನಗಳ ಹಿಂದೆ ಬಿಸಿಸಿಐ ಪ್ರಕಟಿಸಿತ್ತು. ಇದೀಗ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮಹಿಳಾ ತಂಡವೂ ಪ್ರಕಟವಾಗಿದೆ. ಏಷ್ಯಾಕಪ್​ಗೆ ಮಾತ್ರವಲ್ಲದೆ ಅದಾದ ಬಳಿಕ ಜಪಾನ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ ಏಷ್ಯನ್ ಕ್ರೀಡಾಕೂಟಕ್ಕೂ ಪಾಕ್ ಮಹಿಳಾ ತಂಡ ಪ್ರಕಟವಾಗಿದೆ. ಯುವ ಆಲ್‌ರೌಂಡರ್ ಫಾತಿಮಾ ಸನಾ ಈ ಎರಡೂ ಪಂದ್ಯಾವಳಿಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ಪಾಕ್ ಮಹಿಳಾ ತಂಡ ಹೀಗಿದೆ

ಹಿರಿಯ ಬ್ಯಾಟರ್ ಆಲಿಯಾ ರಿಯಾಜ್ ಅವರನ್ನು ಏಷ್ಯನ್ ಗೇಮ್ಸ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ಆಯ್ಕೆದಾರರು ಸದಾಫ್ ಶಮಾಸ್ ಮತ್ತು ಸಿದ್ರಾ ಅಮೀನ್ ಅವರನ್ನು ಕೈಬಿಟ್ಟಿದ್ದಾರೆ. ಪಾಕಿಸ್ತಾನವು ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ ಕ್ವಾರ್ಟರ್ ಫೈನಲ್‌ಗೆ ನೇರವಾಗಿ ಪ್ರವೇಶಿಸಲಿದೆ. ಸೆಪ್ಟೆಂಬರ್ 17 ರಂದು ನಡೆಯಲಿರುವ ಕ್ವಾರ್ಟರ್ ಫೈನಲ್‌ನಲ್ಲಿ ಪಾಕಿಸ್ತಾನವು ಥೈಲ್ಯಾಂಡ್ ತಂಡವನ್ನು ಎದುರಿಸಲಿದೆ.

ಏಷ್ಯಾಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಪಾಕಿಸ್ತಾನ ತಂಡದಲ್ಲಿ ಮುನೀಬ್ ಅಲಿ ಸಿದ್ದಿಕಿ ವಿಕೆಟ್ ಕೀಪರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಆಯೇಷಾ ಜಾಫರ್, ಇಮಾನ್ ನಸೀರ್, ಇಮಾನ್ ಫಾತಿಮಾ, ಗುಲ್ ಫಿರೋಜಾ, ಮೊಮಿನಾ ರಿಯಾಸತ್, ನಜಿಹಾ ಅಲ್ವಿ, ನಶ್ರಾ ಸಂಧು, ಸಾದಿಯಾ ಇಕ್ಬಾಲ್, ಸೈರಾ ಜಬೀನ್, ಶಾವಲ್ ಜುಲ್ಫಿಕರ್, ತುಬಾ ಹಸನ್, ಉಮ್ಮೆ ಹನಿ, ವಹೀದಾ ಅಖ್ತರ್ ಮುಖ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ತಸ್ಮಿಯಾ ರುಬಾಬ್, ಹುಮ್ನಾ ಬಿಲಾಲ್, ಮಹಮ್ ಅನೀಸ್, ಸದಾಫ್ ಶಮಾಸ್ ಸ್ಟ್ಯಾಂಡ್‌ಬೈ ಆಟಗಾರ್ತಿಯರಾಗಿ ಆಯ್ಕೆಯಾಗಿದ್ದಾರೆ.

ಏಷ್ಯನ್ ಗೇಮ್ಸ್​ಗೂ ಅದೇ ತಂಡ

ಏಷ್ಯನ್ ಗೇಮ್ಸ್​ನಲ್ಲೂ ಇದೇ ತಂಡ ಕಣಕ್ಕಿಳಿಯಲಿದೆ. ಆದರೆ ಹಿರಿಯ ಬ್ಯಾಟರ್ ಆಲಿಯಾ ರಿಯಾಜ್ ಈ ಕ್ರೀಡಾಕೂಟದಲ್ಲಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. ನಟಾಲಿಯಾ ಪರ್ವೇಜ್ ಮತ್ತು ರಮೀನ್ ಶಮಿಮ್‌ರಂತಹ ಆಟಗಾರ್ತಿಯರಿಗೆ ಮೀಸಲು ವಿಭಾಗದಲ್ಲಿ ಅವಕಾಶ ನೀಡಲಾಗಿದೆ. ಹೊಸ ತಂತ್ರಗಳೊಂದಿಗೆ ಮೈದಾನಕ್ಕೆ ಇಳಿಯುತ್ತಿರುವ ಪಾಕಿಸ್ತಾನ ಮಹಿಳಾ ತಂಡವು ಭಾರತೀಯ ಮಹಿಳಾ ತಂಡದೊಂದಿಗೆ ಎಷ್ಟರ ಮಟ್ಟಿಗೆ ಸ್ಪರ್ಧಿಸಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ತಲಾ 4 ತಂಡಗಳ 2 ಗುಂಪು

ಇನ್ನು ಹತ್ತನೇ ಆವೃತ್ತಿಯ ಮಹಿಳಾ ಟಿ20 ಏಷ್ಯಾಕಪ್ ಮೇಲೆ ಹೇಳಿದಂತೆ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿದೆ. ಒಟ್ಟು 8 ಏಷ್ಯಾದ ದೇಶಗಳು ಈ ಟೂರ್ನಿಯಲ್ಲಿ ಸ್ಪರ್ಧಿಸುತ್ತಿವೆ. ಅವುಗಳನ್ನು ತಲಾ ನಾಲ್ಕು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.

ಭಾರತ- ಪಾಕ್ ಮುಖಾಮುಖಿ

ಹಾಲಿ ಚಾಂಪಿಯನ್ ಭಾರತ, ಪಾಕಿಸ್ತಾನ, ಥೈಲ್ಯಾಂಡ್ ಮತ್ತು ಹಾಂಗ್ ಕಾಂಗ್ ತಂಡಗಳು ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿವೆ. ಈ ಎರಡು ಸಾಂಪ್ರದಾಯಿಕ ಎದುರಾಳಿಗಳು ಒಂದೇ ಗುಂಪಿನಲ್ಲಿರುವುದರಿಂದ, ಲೀಗ್ ಹಂತದಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆಯುವುದು ಖಚಿತ. ಸೆಪ್ಟೆಂಬರ್ 5 ರಂದು ನಡೆಯಲಿರುವ ಗುಂಪು ಹಂತದ ಅಂತಿಮ ಮತ್ತು ಅತ್ಯಂತ ನಿರ್ಣಾಯಕ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈ ಹೈ-ವೋಲ್ಟೇಜ್ ಪಂದ್ಯವು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Mon, 17 August 26

Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!