AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾವನ್ನು ಸೋಲಿಸಿದರೆ ನಾನು ಜಿಂಬಾಬ್ವೆ ದೇಶದ ಪ್ರಜೆಯನ್ನೇ ಮದುವೆಯಾಗುವೆ; ಪಾಕ್ ನಟಿ

T20 World Cup 2022: ಈ ಹಿಂದೆಯೂ ಸಾಕಷ್ಟು ಬಾರಿ ಈ ಪಾಕಿಸ್ತಾನಿ ನಟಿ ಟೀಮ್ ಇಂಡಿಯಾವನ್ನು ವಿವಾದಾತ್ಮಕ ಪೋಸ್ಟ್‌ಗಳ ಮೂಲಕ ಟೀಕಿಸುವುದರೊಂದಿಗೆ ಸುದ್ದಿಯಲ್ಲಿದ್ದರು.

ಟೀಂ ಇಂಡಿಯಾವನ್ನು ಸೋಲಿಸಿದರೆ ನಾನು ಜಿಂಬಾಬ್ವೆ ದೇಶದ ಪ್ರಜೆಯನ್ನೇ ಮದುವೆಯಾಗುವೆ; ಪಾಕ್ ನಟಿ
ಟೀಂ ಇಂಡಿಯಾ, ಪಾಕ್ ನಟಿ
TV9 Web
| Edited By: |

Updated on:Nov 03, 2022 | 5:28 PM

Share

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ (T20 World Cup) ಪಾಕಿಸ್ತಾನ (Pakistan) ತಂಡ ತನ್ನ ಕಳಪೆ ಪ್ರದರ್ಶನದಿಂದಾಗಿ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಟೀಂ ಇಂಡಿಯಾ (Team India) ಮತ್ತು ಜಿಂಬಾಬ್ವೆ ಎದುರು ಸೋತಿರುವುದರಿಂದ ಬಾಬರ್ ಪಡೆಗೆ ಸೆಮಿಸ್ ಅವಕಾಶಗಳು ಜಟಿಲವಾಗಿವೆ. ಹೀಗಾಗಿ ಪಾಕ್ ತಂಡ ನಾಕ್-ಔಟ್ ರೇಸ್ ತಲುಪಲು ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರೀ ಹಂತರದಲ್ಲಿ ಗೆಲ್ಲಬೇಕಿದೆ. ಹಾಗೆಯೇ ಇತರ ತಂಡಗಳ ಯಶಸ್ಸಿನ ಮೇಲೆ ಅವಲಂಬಿತವಾಗಿದೆ. ಈ ಕಡೆ ಟೀಂ ಇಂಡಿಯಾ ಈಗಾಗಲೇ ಸೆಮೀಸ್​ಗೆ ಲಗ್ಗೆ ಇಟ್ಟಿದ್ದು, ಸೂಪರ್ 12ರ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆಯನ್ನು ಎದುರಿಸಲಿರುವ ರೋಹಿತ್ ಸೇನಾ ಆ ಪಂದ್ಯದಲ್ಲಿ ಗೆದ್ದರೆ ಪಾಯಿಂಟ್ಸ್ ಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಈ ನಡುವೆ ಟೀಂ ಇಂಡಿಯಾವನ್ನು ಈ ಹಿಂದೆ ಹಲವು ಬಾರಿ ಟೀಕಿಸಿದ್ದ ಪಾಕಿಸ್ತಾನಿ ನಟಿ ಸೆಹರ್ ಶಿನ್ವಾರಿ (Sehar Shinwari) ಮತ್ತೊಮ್ಮೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.

ನವೆಂಬರ್ 6 ರಂದು ನಡೆಯುವ ಜಿಂಬಾಬ್ವಿ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಜಿಂಬಾಬ್ವೆ ತಂಡ ಮಣಿಸಿದರೆ ಆ ದೇಶದ ವ್ಯಕ್ತಿಯನ್ನು ಮದುವೆಯಾಗುವುದಾಗಿ ಪಾಕ್ ನಟಿ ಟ್ವೀಟ್​ನಲ್ಲಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸೆಹರ್ ಶಿನ್ವಾರಿ, ‘ಮುಂದಿನ ಪಂದ್ಯದಲ್ಲಿ ಜಿಂಬಾಬ್ವೆ ಭಾರತವನ್ನು ಸೋಲಿಸಿದರೆ, ನಾನು ಆ ದೇಶದ ಪ್ರಜೆಯನ್ನು ಮದುವೆಯಾಗುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಟೀಂ ಇಂಡಿಯಾನೇ ಈಕೆಯ ಬಂಡವಾಳ

ಈ ಹಿಂದೆಯೂ ಸಾಕಷ್ಟು ಬಾರಿ ಈ ಪಾಕಿಸ್ತಾನಿ ನಟಿ ಟೀಮ್ ಇಂಡಿಯಾವನ್ನು ವಿವಾದಾತ್ಮಕ ಪೋಸ್ಟ್‌ಗಳ ಮೂಲಕ ಟೀಕಿಸುವುದರೊಂದಿಗೆ ಸುದ್ದಿಯಲ್ಲಿದ್ದರು. ನಿನ್ನೆಯ ಬಾಂಗ್ಲಾದೇಶ-ಭಾರತ ಪಂದ್ಯದ ವೇಳೆ ರೋಹಿತ್ ತಂಡ ಸೋಲಬೇಕು ಎಂದು ಪದೇ ಪದೇ ಟ್ವೀಟ್ ಮಾಡಿದ್ದರು. ಈ ಹಿಂದೆ ತವರಿನಲ್ಲಿ ನಡೆದ ಟಿ20 ಸರಣಿಯ ಭಾಗವಾಗಿ ಭಾರತ ಆಸೀಸ್ ವಿರುದ್ಧ ಸೋತಾಗ ಟೀಂ ಇಂಡಿಯಾವನ್ನು ಇದೇ ರೀತಿ ಟೀಕಿಸಿದ್ದರು.

ಇದನ್ನೂ ಓದಿ: ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಗೆ ಕೊಹ್ಲಿ, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ ನಾಮನಿರ್ದೇಶನ

ಟ್ರೋಲ್ ಮಾಡಿದ ನೆಟ್ಟಿಗರು

ಈ ನಡುವೆ ಪಾಕಿಸ್ತಾನಿ ನಟಿ ಮಾಡಿರುವ ಟ್ವೀಟ್​ಗೆ ಕ್ರಿಕೆಟ್ ಪ್ರೇಮಿಗಳು ಹಾಗೂ ಟೀಂ ಇಂಡಿಯಾ ಅಭಿಮಾನಿಗಳು ನಟಿಯ ಟ್ವೀಟ್​ಗೆ ಸಖತ್ತಾಗಿಯೇ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಭಾರತ-ಬಾಂಗ್ಲಾ ಪಂದ್ಯದ ವೇಳೆ ಈಕೆಯ ಭವಿಷ್ಯ ಸುಳ್ಳಾಗಿತ್ತು. ಈಗ ಮತ್ತೆ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಈಗೆ ಜೀವನ ಪೂರ್ತಿ ಮದುವೆಯಾಗದೆ ಒಂಟಿಯಾಗಿ ಬದುಕುವುದು ಹೇಗೆ ಎಂದು ಯೋಚಿಸಿದರೆ ಬೇಸರವಾಗುತ್ತದೆ ಎಂದು ಹಲವು ನೆಟ್ಟಿಗರು ಇವರನ್ನು ಟ್ರೋಲ್ ಮಾಡಿದ್ದರೆ, ಇನ್ನು ಕೆಲವರು, ಜಿಂಬಾಬ್ವೆ ಎದುರು ಸೋಲಲು ನಾವು ಪಾಕಿಸ್ತಾನ ತಂಡವಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Thu, 3 November 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ