AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಯಲ್ಲಿ ಇತಿಹಾಸ ನಿರ್ಮಿಸಿದ ಪಾಕಿಸ್ತಾನ್, ಇಂಗ್ಲೆಂಡ್… ಆದರೆ

Champions Trophy 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಭಾರತ, ಇಂಗ್ಲೆಂಡ್, ಪಾಕಿಸ್ತಾನ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಬಾಂಗ್ಲಾದೇಶ್, ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿದಿದ್ದವು. ಈ 8 ತಂಡಗಳಲ್ಲಿ ಸೆಮಿಫೈನಲ್​ಗೇರಿದ್ದು ಸೌತ್ ಆಫ್ರಿಕಾ, ಭಾರತ, ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್. ಇನ್ನುಳಿದ 4 ಟೀಮ್​ಗಳು ಟೂರ್ನಿಯಿಂದ ಹೊರಬಿದ್ದಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಇತಿಹಾಸ ನಿರ್ಮಿಸಿದ ಪಾಕಿಸ್ತಾನ್, ಇಂಗ್ಲೆಂಡ್... ಆದರೆ
England - Pakistan
ಝಾಹಿರ್ ಯೂಸುಫ್
|

Updated on: Mar 02, 2025 | 10:23 AM

Share

ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಪಂದ್ಯಗಳಿಗೆ ಇಂದು (ಮಾ.2) ತೆರೆ ಬೀಳಲಿದೆ. ಈ ಪಂದ್ಯಕ್ಕೂ ಮುನ್ನವೇ ಆತಿಥೇಯ ಪಾಕಿಸ್ತಾನ್ ಹಾಗೂ ಕ್ರಿಕೆಟ್ ಜನಕರಾದ ಇಂಗ್ಲೆಂಡ್ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು ಅಂತ್ಯಗೊಳಿಸಿದೆ. ಅದು ಸಹ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ನಿರ್ಮಿಸುವ ಮೂಲಕ ಎಂಬುದು ವಿಶೇಷ.

ಅಂದರೆ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆತಿಥೇಯ ದೇಶವೊಂದು ಒಂದೇ ಒಂದು ಪಂದ್ಯ ಗೆಲ್ಲದೆ ಟೂರ್ನಿಯನ್ನು ಅಂತ್ಯಗೊಳಿಸಿದೆ. ಈ ಬಾರಿಯ ಟೂರ್ನಿಗೆ ಆತಿಥ್ಯವಹಿಸಿದ್ದ ಪಾಕಿಸ್ತಾನ್ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಸೋತರೆ, ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಮುಗ್ಗರಿಸಿದೆ.

ಇನ್ನು ಬಾಂಗ್ಲಾದೇಶ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಮೊದಲ ಬಾರಿಗೆ ಆತಿಥೇಯ ತಂಡವೊಂದು ಗೆಲುವು ದಾಖಲಿಸದೇ ಟೂರ್ನಿ ಅಂತ್ಯಗೊಳಿಸಿದ ಅತ್ಯಂತ ಕೆಟ್ಟ ದಾಖಲೆ ಪಾಕಿಸ್ತಾನ್ ಪಾಲಾಗಿದೆ.

ಮತ್ತೊಂದೆಡೆ ಕ್ರಿಕೆಟ್ ಜನಕರಾದ ಇಂಗ್ಲೆಂಡ್ ತಂಡವು ಈ ಬಾರಿ ಗೆಲುವಿನ ಖಾತೆ ತೆರೆಯದೇ ಟೂರ್ನಿ ಅಂತ್ಯಗೊಳಿಸಿರುವುದು ವಿಶೇಷ. ಅಂದರೆ ಆಂಗ್ಲ ಪಡೆ ಆಡಿದ ಮೂರು ಪಂದ್ಯಗಳಲ್ಲೂ ಹೀನಾಯ ಸೋಲನುಭವಿಸಿದೆ.

ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದ ಇಂಗ್ಲೆಂಡ್, ದ್ವಿತೀಯ ಮ್ಯಾಚ್​ನಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಪರಾಜಯಗೊಂಡಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೌತ್ ಆಫ್ರಿಕಾ ಬಗ್ಗು ಬಡಿದಿದೆ. ಈ ಮೂಲಕ ಇಂಗ್ಲೆಂಡ್ ತಂಡವು ಇದೇ ಮೊದಲ ಬಾರಿಗೆ ಒಂದೇ ಗೆಲುವು ಕಾಣದೇ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಅಂತ್ಯಗೊಳಿಸಿದೆ.

ಇಂತಹದೊಂದು ಹೀನಾಯ ಸೋಲಿನ ಬೆನ್ನಲ್ಲೇ ಇಂಗ್ಲೆಂಡ್ ತಂಡದ ನಾಯಕತ್ವದಿಂದ ಜೋಸ್ ಬಟ್ಲರ್ ಕೆಳಗಿಳಿದಿದ್ದಾರೆ. ಹೀಗಾಗಿ ಮುಂಬರುವ ಸರಣಿ ವೇಳೆ ಇಂಗ್ಲೆಂಡ್ ತಂಡವನ್ನು ಹೊಸ ಕ್ಯಾಪ್ಟನ್ ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು

ಒಟ್ಟಿನಲ್ಲಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆಲ್ಲುವ ಫೇವರೇಟ್ ತಂಡಗಳಾಗಿ ಗುರುತಿಸಿಕೊಂಡಿದ್ದ ಪಾಕಿಸ್ತಾನ್ ಮತ್ತು ಇಂಗ್ಲೆಂಡ್ ತಂಡಗಳು ಒಂದೇ ಒಂದು ಗೆಲುವು ಕಾಣದೇ ಟೂರ್ನಿಯನ್ನು ಅಂತ್ಯಗೊಳಿಸಿದ್ದು ಮಾತ್ರ ವಿಪರ್ಯಾಸ ಎನ್ನಬಹುದು.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ