AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ತಂಡದಿಂದ ಮತ್ತೆ ಹೊರಬಿದ್ದ ಬಾಬರ್ ಆಝಂ

ಟಿ20 ವಿಶ್ವಕಪ್​ ಸಿದ್ಧತೆಗಾಗಿ ಪಾಕಿಸ್ತಾನ್ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳುತ್ತಿದೆ. ಈ ಪ್ರವಾಸದಲ್ಲಿ ಪಾಕ್ ಪಡೆಯುವ ಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸರಣಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದ್ದು, 15 ಸದಸ್ಯರುಗಳ ತಂಡದಲ್ಲಿ ಬಾಬರ್ ಆಝಂ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

ಪಾಕಿಸ್ತಾನ್ ತಂಡದಿಂದ ಮತ್ತೆ ಹೊರಬಿದ್ದ ಬಾಬರ್ ಆಝಂ
Babar Azam
ಝಾಹಿರ್ ಯೂಸುಫ್
|

Updated on:Dec 28, 2025 | 1:19 PM

Share

ಶ್ರೀಲಂಕಾ ವಿರುದ್ಧದ ಟಿ20 ಸರಣಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಬಾಬರ್​ ಆಝಂ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಕಳೆದೊಂದು ವರ್ಷದಿಂದ ಪಾಕ್ ಟಿ20 ತಂಡದಿಂದ ಹೊರಗುಳಿದಿದ್ದ ಬಾಬರ್ ಆಝಂ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಇದೀಗ ಟಿ20 ವಿಶ್ವಕಪ್​ಗೂ ಮುನ್ನ ನಡೆಯಲಿರುವ ಸರಣಿಯಿಂದ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಇತ್ತ ಬಾಬರ್ ಆಝಂ ಅವರನ್ನು ತಂಡದಿಂದ ಹೊರಗಿಡಲು ಮುಖ್ಯ ಕಾರಣ ಅವರು ಬಿಗ್ ಬ್ಯಾಷ್ ಲೀಗ್ ಆಡುತ್ತಿರುವುದು ಎನ್ನಲಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಬಿಎಲ್​ನಲ್ಲಿ ಬಾಬರ್ ಸಿಡ್ನಿ ಸಿಕ್ಸರ್ ಪರ ಕಣಕ್ಕಿಳಿಯುತ್ತಿದ್ದು, ಹೀಗಾಗಿ ಅವರನ್ನು ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿಲ್ಲ ಎಂದು ಹೇಳಲಾಗಿದೆ.

ಆದರೆ ಅದೇ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಣಕ್ಕಿಳಿಯುತ್ತಿದ್ದ ಶಾದಾಬ್ ಖಾನ್ ಪಾಕಿಸ್ತಾನ್ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿಯೇ ಪಾಕ್ ಟಿ20 ತಂಡದಿಂದ ಬಾಬರ್ ಆಝಂ ಮತ್ತೆ ಹೊರಬಿದ್ದರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಪಾಕಿಸ್ತಾನ್-ಶ್ರೀಲಂಕಾ ಸರಣಿ ಯಾವಾಗ ಶುರು?

ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಟಿ20 ಸರಣಿಯು ಜನವರಿ 7 ರಿಂದ ಶುರುವಾಗಲಿದೆ. ಈ ಸರಣಿಯ ಎಲ್ಲಾ ಮೂರು ಟಿ20 ಪಂದ್ಯಗಳು ದಂಬುಲ್ಲಾದಲ್ಲಿ ನಡೆಯಲಿವೆ . ಮೊದಲ ಪಂದ್ಯ ಜನವರಿ 7 ರಂದು, ಎರಡನೇ ಪಂದ್ಯ ಜನವರಿ 9 ರಂದು ಮತ್ತು ಮೂರನೇ ಪಂದ್ಯ ಜನವರಿ 11 ರಂದು ನಡೆಯಲಿದೆ. ಈ ಸರಣಿಯ ಬಳಿಕ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ಗೆ ಸಜ್ಜಾಗಲಿದೆ. 

ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಪಾಕಿಸ್ತಾನ್ ತಂಡವು ಭಾರತ, ನಮೀಬಿಯಾ , ನೆದರ್‌ಲೆಂಡ್ಸ್​ ಮತ್ತು ಯುನೈಟೆಡ್ ಸ್ಟೇಟ್ಸ್ ಅಮೆರಿಕ ಂಡಗಳನ್ನು ಎದುರಿಸಲಿದೆ. ಇದೀಗ ಪಾಕ್ ತಂಡದಲ್ಲಿ ಸ್ಥಾನ ಪಡೆದಿರುವ ಬಹುತೇಕ ಆಟಗಾರರು ಟಿ20 ವಿಶ್ವಕಪ್ ತಂಡದಲ್ಲೂ ಕಾಣಿಸಿಕೊಳ್ಳುವುದು ಖಚಿತ.

ಇದನ್ನೂ ಓದಿ: ಅಬ್ಬರ ಸಿಡಿಲಬ್ಬರ… ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಕೀರನ್ ಪೊಲಾರ್ಡ್

ಪಾಕಿಸ್ತಾನ್ ಟಿ20 ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ದುಲ್ ಸಮದ್ , ಅಬ್ರಾರ್ ಅಹ್ಮದ್ , ಫಹೀಮ್ ಅಶ್ರಫ್ , ಫಖರ್ ಝಮಾನ್ , ಖ್ವಾಜಾ ನಫೆ, ಮೊಹಮ್ಮದ್ ನವಾಝ್ , ಮೊಹಮ್ಮದ್ ಸಲ್ಮಾನ್ ಮಿರ್ಝ, ಮೊಹಮ್ಮದ್ ವಾಸಿಂ ಜೂನಿಯರ್ , ನಸೀಮ್ ಶಾ, ಸಾಹಿಬ್​ಝಾದ ಫರ್ಹಾನ್ , ಉಸ್ಮಾನ್ ತಾರಿಖ್, ಸೈಮ್ ಅಯೂಬ್ , ಶಾದಾಬ್ ಖಾನ್, ಉಸ್ಮಾನ್ ಖಾನ್.

Published On - 1:18 pm, Sun, 28 December 25