Asia Cup 2023: ಏಷ್ಯಾಕಪ್ ಸೂಪರ್-4 ಹಂತದ ಪಂದ್ಯಕ್ಕೆ ಪಾಕ್ ತಂಡ ಪ್ರಕಟ; ಸ್ಟಾರ್ ಬೌಲರ್​ಗೆ ಕೋಕ್

Asia Cup 2023: ಸೆಪ್ಟೆಂಬರ್ 6 ಬುಧವಾರದಂದು ಸೂಪರ್ 4 ಸುತ್ತು ಆರಂಭವಾಗಲಿದ್ದು ಈ ಹಂತದ ಮೊದಲ ಪಂದ್ಯ ಪಾಕಿಸ್ತಾನದ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ನಡೆಯಲಿದೆ. ಇದೀಗ ಈ ಸೂಪರ್ 4 ರ ಮೊದಲ ಪಂದ್ಯಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡವು ತಮ್ಮ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದು, ತಂಡದಲ್ಲಿ ಒಂದು ಬದಲಾವಣೆ ಮಾಡಿದೆ.

Asia Cup 2023: ಏಷ್ಯಾಕಪ್ ಸೂಪರ್-4 ಹಂತದ ಪಂದ್ಯಕ್ಕೆ ಪಾಕ್ ತಂಡ ಪ್ರಕಟ; ಸ್ಟಾರ್ ಬೌಲರ್​ಗೆ ಕೋಕ್
ಪಾಕಿಸ್ತಾನ ತಂಡ
Follow us
|

Updated on: Sep 06, 2023 | 7:12 AM

ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ (Sri Lanka vs Afghanistan) ತಂಡಗಳ ನಡುವಿನ ಕದನದ ಮುಕ್ತಾಯದ ಬಳಿಕ 2023ರ ಏಷ್ಯಾಕಪ್​ನ (Asia Cup 2023) ಲೀಗ್ ಹಂತಕ್ಕೂ ತೆರೆಬಿದ್ದಿದೆ. ಈ ರೋಚಕ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 2 ರನ್‌ಗಳ ಗೆಲುವು ಸಾಧಿಸಿದ ಶ್ರೀಲಂಕಾ ಈ ಗೆಲುವಿನೊಂದಿಗೆ ಸೂಪರ್ 4 ಹಂತಕ್ಕೆ ಬಿ ಗುಂಪಿನಲ್ಲಿ ಅಗ್ರ ತಂಡವಾಗಿ ಎಂಟ್ರಿಕೊಟ್ಟಿದೆ. ಸೆಪ್ಟೆಂಬರ್ 6 ಬುಧವಾರದಂದು ಸೂಪರ್ 4 ಸುತ್ತು ಆರಂಭವಾಗಲಿದ್ದು ಈ ಹಂತದ ಮೊದಲ ಪಂದ್ಯ ಪಾಕಿಸ್ತಾನದ ಹಾಗೂ ಬಾಂಗ್ಲಾದೇಶ (Pakistan vs Bangladesh) ತಂಡಗಳ ನಡುವೆ ನಡೆಯಲಿದೆ. ಇದೀಗ ಈ ಸೂಪರ್ 4 ರ ಮೊದಲ ಪಂದ್ಯಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡವು ತಮ್ಮ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದು, ತಂಡದಲ್ಲಿ ಒಂದು ಬದಲಾವಣೆ ಮಾಡಿದೆ.

ತಂಡದಲ್ಲಿ ಒಂದೇ ಬದಲಾವಣೆ

ಪಾಕಿಸ್ತಾನ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ಲ್ಲಿ ಒಂದು ಬದಲಾವಣೆ ಮಾಡಿದ್ದು, ಮೊಹಮ್ಮದ್ ನವಾಜ್ ಬದಲಿಗೆ ತಂಡದಲ್ಲಿ ಬೌಲಿಂಗ್ ಆಲ್ ರೌಂಡರ್ ಫಹೀಮ್ ಅಶ್ರಫ್​ಗೆ ಅವಕಾಶ ನೀಡಲಾಗಿದೆ. ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ನವಾಜ್ 8 ಓವರ್ ಬೌಲ್ ಮಾಡಿ 6.90 ಎಕಾನಮಿ ದರದಲ್ಲಿ 55 ರನ್ ನೀಡಿದ್ದರು. ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡ ಅವರನ್ನು ಆಡುವ ಹನ್ನೊಂದರಿಂದ ಕೈಬಿಟ್ಟಿದೆ.

ಏಷ್ಯಾಕಪ್ ಪಾಯಿಂಟ್ಸ್ ಟೇಬಲ್ ಹೇಗಿದೆ?, ಅತಿ ಹೆಚ್ಚು ರನ್, ವಿಕೆಟ್ ಪಡೆದವರು ಯಾರು?

ಪಾಕಿಸ್ತಾನ- ಬಾಂಗ್ಲಾದೇಶ ಮುಖಾಮುಖಿ

ಸೂಪರ್ 4 ರ ಮೊದಲ ಪಂದ್ಯ ಸೆಪ್ಟೆಂಬರ್ 6 ರಂದು ಬುಧವಾರ ನಡೆಯಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ (ಎ1) ಬಾಂಗ್ಲಾದೇಶವನ್ನು (ಬಿ2) ಎದುರಿಸಲಿದೆ. ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಮಧ್ಯಾಹ್ನ 2.30ರ ನಂತರ ನಡೆಯಲಿದೆ. ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಫಖರ್ ಜಮಾನ್, ಇಮಾಮ್-ಉಲ್-ಹಕ್, ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಹೀಮ್ ಅಶ್ರಫ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ ಮತ್ತು ಹ್ಯಾರಿಸ್ ರೌಫ್.

ಏಷ್ಯಾಕಪ್​ಗೆ ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟನ್ ದಾಸ್, ತಂಜೀದ್ ಹಸನ್, ತೋಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಮೆಹದಿ ಹಸನ್ ಮಿರಾಜ್, ತಸ್ಕೀನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ನಸುಮ್ ಅಹ್ಮದ್, ಶಮೀಮ್ ಹುಸೇನ್ ಇಸ್ಲಾಂ, ಇಸ್ಲಾಮ್ ಹುಸೇನ್, ಅಫೀದ್ ಮತ್ತು ಮೊಹಮ್ಮದ್ ನಯೀಮ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್