AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LA 2028 Olympics: ಒಲಿಂಪಿಕ್ಸ್​​ನಿಂದ ಪಾಕಿಸ್ತಾನ್ ಔಟ್

Olympics 2028: 1900 ರಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಒಮ್ಮೆ ಮಾತ್ರ ಕ್ರಿಕೆಟ್ ಪಂದ್ಯವೊಂದನ್ನು ಆಡಲಾಗಿತ್ತು. 128 ವರ್ಷಗಳ ಹಿಂದೆ ನಡೆದ ಈ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಮತ್ತು ಫ್ರಾನ್ಸ್ ದೇಶಗಳು ಸೆಣಸಿದ್ದವು. ಈ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು 185 ರನ್‌ಗಳಿಂದ ಸೋಲಿಸಿ ಗ್ರೇಟ್ ಬ್ರಿಟನ್ ಚಿನ್ನದ ಪದಕ ಗೆದ್ದುಕೊಂಡಿತ್ತು. ಇದೀಗ ಮತ್ತೆ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

LA 2028 Olympics: ಒಲಿಂಪಿಕ್ಸ್​​ನಿಂದ ಪಾಕಿಸ್ತಾನ್ ಔಟ್
Pakistan
ಝಾಹಿರ್ ಯೂಸುಫ್
|

Updated on: Nov 08, 2025 | 8:53 AM

Share

ಬರೋಬ್ಬರಿ 128 ವರ್ಷಗಳ ನಂತರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಮರಳುತ್ತಿದೆ. ಲಾಸ್ ಏಂಜಲೀಸ್​ನಲ್ಲಿ 2028 ರಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್​ಗೂ ಅವಕಾಶ ನೀಡಲಾಗಿದೆ. ಅಲ್ಲದೆ ಇದಕ್ಕಾಗಿ ತಂಡಗಳನ್ನು ಫೈನಲ್ ಮಾಡುವಂತೆ ಐಸಿಸಿಗೆ ಸೂಚಿಸಿದೆ. ಇತ್ತ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ( ಐಸಿಸಿ) ಅರ್ಹತಾ ಮಾರ್ಗವನ್ನು ಸಹ ಅಂತಿಮಗೊಳಿಸಿದೆ. 

ನವೆಂಬರ್ 7 ರಂದು ದುಬೈನಲ್ಲಿ ನಡೆದ ತನ್ನ ಐಸಿಸಿ ಮಂಡಳಿ ಸಭೆಯಲ್ಲಿ, ಒಲಿಂಪಿಕ್ಸ್​ನಲ್ಲಿ ತಲಾ 6 ತಂಡಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಅದರಂತೆ ಪುರುಷ ಮತ್ತು ಮಹಿಳಾ ವಿಭಾಗಗಳಿಂದ ತಲಾ ಆರು ತಂಡಗಳು ಕ್ರೀಡಾಕೂಟದಲ್ಲಿ ಸ್ಪರ್ಧಿಸಲಿವೆ.

ಈ ಆರು ತಂಡಗಳನ್ನು ಟಿ20 ಟೀಮ್​ ಶ್ರೇಯಾಂಕವನ್ನು ಆಧರಿಸಿ ಆಯ್ಕೆ ಮಾಡಲಿದೆ. ಆದರೆ ಇಲ್ಲಿ ಪ್ರಾದೇಶಿಕ ಅರ್ಹತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಅಂದರೆ ತಂಡಗಳ ಆಯ್ಕೆಗಾಗಿ ಏಷ್ಯಾ, ಓಷಿಯಾನಿಯಾ, ಯುರೋಪ್ ಮತ್ತು ಆಫ್ರಿಕಾ ಪ್ರಾದೇಶಿಕತೆಯನ್ನು ಪರಿಗಣಿಸಲಾಗುತ್ತಿದ್ದು, ಈ ಪ್ರದೇಶದ ತಂಡಗಳಲ್ಲಿ ಹೆಚ್ಚಿನ ಶ್ರೇಯಾಂಕ ಹೊಂದಿರುವ ಟೀಮ್​ಗಳು ಒಲಿಂಪಿಕ್ಸ್​ಗೆ ಅರ್ಹತೆ ಪಡೆಯಲಿದೆ.

ಪ್ರಸ್ತುತ, ಐಸಿಸಿ ಶ್ರೇಯಾಂಕದ ಪ್ರಕಾರ.. ಏಷ್ಯಾದಲ್ಲಿ ಭಾರತ ತಂಡ ಅಗ್ರಸ್ಥಾನದಲ್ಲಿದೆ. ಇನ್ನು ಓಷಿಯಾನಿಯಾದಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆಫ್ರಿಕಾದಲ್ಲಿ ಸೌತ್ ಆಫ್ರಿಕಾ ತಂಡ ನಂಬರ್ ಒನ್ ಸ್ಥಾನದಲ್ಲಿದೆ. ಇನ್ನು ಯುರೋಪ್​ನಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದೆ. ಈ ನಾಲ್ಕು ತಂಡಗಳ ಜೊತೆ ಆತಿಥೇಯ ಅಮೆರಿಕ ತಂಡಕ್ಕೂ ಅವಕಾಶ ನೀಡಬೇಕಾಗುತ್ತದೆ. ಇಲ್ಲಾ ವೆಸ್ಟ್ ಇಂಡೀಸ್‌ ಅನ್ನು ಸಂಯೋಜಿತ ತಂಡವೆಂದು ಪರಿಗಣಿಸುವ ಸಾಧ್ಯತೆಯಿದೆ.

ಸದ್ಯ ಐದು ಸ್ಥಾನಗಳನ್ನು ಪ್ರತಿ ಪ್ರದೇಶ/ಖಂಡದಿಂದ ಅಗ್ರ ಶ್ರೇಯಾಂಕಿತ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಆರನೇ ತಂಡವನ್ನು ಜಾಗತಿಕ ಅರ್ಹತಾ ಸುತ್ತಿನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಐಸಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ಜಾಗತಿಕ ಆಯ್ಕೆ ಸುತ್ತು ಹೇಗಿರಲಿದೆ ಎಂಬುದರ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ. ಒಂದು ವೇಳೆ ಆರನೇ ತಂಡವನ್ನು ಐಸಿಸಿ ಟಿ20 ಶ್ರೇಯಾಂಕದ ಮೇಲೆ ಆಯ್ಕೆ ಮಾಡಿದರೆ ನ್ಯೂಝಿಲೆಂಡ್ ತಂಡಕ್ಕೆ ಅವಕಾಶ ಸಿಗಬಹುದು. ಏಕೆಂದರೆ ಪ್ರಸ್ತುತ ಟಿ20 ರ್ಯಾಂಕಿಂಗ್​​ನಲ್ಲಿ ಕಿವೀಸ್ ಪಡೆ 4ನೇ ಸ್ಥಾನದಲ್ಲಿದೆ. ಹೀಗಾಗಿ ಜಾಗತಿಕ ಆಯ್ಕೆ ಸುತ್ತಿನ ಮೂಲಕ ನ್ಯೂಝಿಲೆಂಡ್ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

ಪಾಕಿಸ್ತಾನಕ್ಕೆ ಬಿಗ್ ಶಾಕ್:

ಐಸಿಸಿ ಪ್ರಾದೇಶಿಕ ಅರ್ಹತಾ ಆಧಾರದ ಮೇಲೆ ತಂಡಗಳನ್ನು ಆಯ್ಕೆ ಮಾಡಿರುವುದರಿಂದ ಪಾಕಿಸ್ತಾನಕ್ಕೆ ಚಾನ್ಸ್ ಸಿಗುವುದಿಲ್ಲ. ಏಕೆಂದರೆ ಪ್ರಸ್ತುತ ಟಿ20 ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ 7ನೇ ಸ್ಥಾನದಲ್ಲಿದೆ. ಇದರಿಂದ ಚೊಚ್ಚಲ ಬಾರಿ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯುವ ಅವಕಾಶವನ್ನು ಪಾಕಿಸ್ತಾನ್ ಕಳೆದುಕೊಳ್ಳಲಿದೆ.

ಇದನ್ನೂ ಓದಿ: 5 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ವೆಸ್ಟ್ ಇಂಡೀಸ್

ಹೀಗಾಗಿ ಮುಂಬರುವ ಲಾಸ್ ಏಂಜಲೀಸ್​ ಒಲಿಂಪಿಕ್ಸ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ಕದನವನ್ನು ನಿರೀಕ್ಷಿಸುವಂತಿಲ್ಲ. 

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು