AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs AUS: ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದು ದಾಖಲೆ ಬರೆದ ಪಾಕಿಸ್ತಾನ

Pakistan vs Australia: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ 2-1 ಅಂತರದಿಂದ ಗೆದ್ದುಕೊಂಡಿದೆ. ಲಾಹೋರ್‌ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆಸೀಸ್ ಕೇವಲ 157 ರನ್‌ಗಳಿಗೆ ಆಲೌಟ್ ಆಗಿತ್ತು. ಬಾಬರ್ ಆಝಂ ಅವರ ಉಪಯುಕ್ತ ಇನ್ನಿಂಗ್ಸ್​ನಿಂದಾಗಿ ಪಾಕ್ ತಂಡ ಈ ಗುರಿಯನ್ನು ಸುಲಭವಾಗಿ ತಲುಪಿತ್ತು. ಆಸ್ಟ್ರೇಲಿಯಾ ವಿರುದ್ಧ ಸತತ ಮೂರು ಏಕದಿನ ಸರಣಿ ಗೆದ್ದ ಮೊದಲ ಏಷ್ಯನ್ ತಂಡ ಎಂಬ ಐತಿಹಾಸಿಕ ದಾಖಲೆಯನ್ನು ಪಾಕಿಸ್ತಾನ ನಿರ್ಮಿಸಿದೆ. ಇದು ವಿಶ್ವದ ಎರಡನೇ ತಂಡವೂ ಹೌದು.

PAK vs AUS: ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದು ದಾಖಲೆ ಬರೆದ ಪಾಕಿಸ್ತಾನ
Pak Vs Aus
ಪೃಥ್ವಿಶಂಕರ
|

Updated on: Jun 05, 2026 | 3:39 PM

Share

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಪಾಕಿಸ್ತಾನದ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ (Pakistan vs Australia) ತಂಡ 2-1 ಅಂತರದಿಂದ ಸರಣಿ ಕಳೆದುಕೊಂಡು ಬರಿ ಕೈಯಲ್ಲಿ ತನ್ನ ತವರಿಗೆ ವಾಪಸ್ ಮರಳಿದೆ. ಆತಿಥೇಯ ಪಾಕಿಸ್ತಾನ ತಂಡ ಜೂನ್ 4 ರಂದು ಲಾಹೋರ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯವನ್ನು ನಾಲ್ಕು ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿತು. ಈ ಸರಣಿ ಗೆಲುವಿನೊಂದಿಗೆ ಪಾಕಿಸ್ತಾನ ವಿಶೇಷ ದಾಖಲೆಯನ್ನು ನಿರ್ಮಿಸಿತು. ಆಸ್ಟ್ರೇಲಿಯಾ ವಿರುದ್ಧ ಸತತ ಮೂರು ಏಕದಿನ ಸರಣಿಗಳನ್ನು ಗೆದ್ದ ಮೊದಲ ಏಷ್ಯನ್ ತಂಡ ಎಂಬ ಹೆಗ್ಗಳಿಕೆಗೆ ಇದೀಗ ಪಾಕಿಸ್ತಾನ ಪಾತ್ರವಾಗಿದೆ. ಮಾತ್ರವಲ್ಲದೆ ಈ ಸಾಧನೆ ಮಾಡಿದ ವಿಶ್ವದ ಎರಡನೇ ತಂಡವೆಂಬ ದಾಖಲೆಯೂ ಪಾಕ್ ಪಾಲಾಗಿದೆ.

38 ರನ್‌ಗೆ 7 ವಿಕೆಟ್ ಪತನ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ತನ್ನ ಕೊನೆಯ ಏಳು ವಿಕೆಟ್‌ಗಳನ್ನು ಕೇವಲ 38 ರನ್‌ಗಳಿಗೆ ಕಳೆದುಕೊಂಡಿತು. ಇತ್ತ ತಂಡಕ್ಕೆ ಉತ್ತಮ ಆರಂಭವೂ ಸಿಗಲಿಲ್ಲ. ಶೂನ್ಯಕ್ಕೆ ಮೊದಲ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ, 42 ರನ್​ಗಳಿಗೆ ತನ್ನ ಎರಡನೇ ವಿಕೆಟ್ ಕಳೆದುಕೊಂಡಿತು. 100 ರನ್​ಗಳ ಒಳಗೆ ಮೂರನೇ ವಿಕೆಟ್ ಕೂಡ ಪತನವಾಯಿತು. ಆದಾಗ್ಯೂ ನಾಯಕ ಜೋಶ್ ಇಂಗ್ಲಿಸ್ ಒಂದು ತುದಿಯನ್ನು ದೃಢವಾಗಿ ನಿಂತು 65 ರನ್​ಗಳ ಇನ್ನಿಂಗ್ಸ್ ಆಡಿದರು. ಇಂಗ್ಲಿಸ್ ಕ್ರೀಸ್‌ನಲ್ಲಿದ್ದ ತನಕ, ಆಸ್ಟ್ರೇಲಿಯಾ ದೊಡ್ಡ ಸ್ಕೋರ್‌ ದಾಖಲಿಸುವಂತೆ ತೋರುತ್ತಿತ್ತು. ಆದರೆ ಶಾಹೀನ್ ಶಾ ಅಫ್ರಿದಿ ಇಂಗ್ಲಿಸ್ ಅವರನ್ನು ಔಟ್ ಮಾಡಿದ ತಕ್ಷಣ, ಇಡೀ ಆಸ್ಟ್ರೇಲಿಯನ್ ಇನ್ನಿಂಗ್ಸ್ ತರಗೆಲೆಗಳಂತೆ ಉದುರಿತು.

157 ರನ್​ಗಳಿಗೆ ಆಲೌಟ್

ಒಂದು ಹಂತದಲ್ಲಿ ಆಸ್ಟ್ರೇಲಿಯಾ 26 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 119 ರನ್ ಗಳಿಸಿತ್ತು. ಆದರೆ ಜೋಶ್ ಇಂಗ್ಲಿಸ್ ಔಟಾದ ಬಳಿಕ ಆಸ್ಟ್ರೇಲಿಯಾದ ಯಾವುದೇ ಬ್ಯಾಟ್ಸ್‌ಮನ್​ಗೆ ಕ್ರೀಸ್‌ನಲ್ಲಿ ಹೆಚ್ಚು ಕಾಲ ಉಳಿಯಲು ಸಾಧ್ಯವಾಗಲಿಲ್ಲ. ತಂಡವು 157 ರನ್ ತಲುಪುವ ಹೊತ್ತಿಗೆ, ಉಳಿದ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಜೋಶ್ ಇಂಗ್ಲಿಸ್ ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟ್ಸ್‌ಮನ್​ಗೂ 20 ರನ್ ಗಳಿಸಲು ಸಾಧ್ಯವಾಗಲಿಲ್ಲ. ಮಾರ್ನಸ್ ಲಬುಶೇನ್ ಮತ್ತು ಅಲೆಕ್ಸ್ ಕ್ಯಾರಿ ತಲಾ 19 ರನ್ ಗಳಿಸಿದರೆ, ಕೊನೆಯಲ್ಲಿ ಆಡಮ್ ಜಂಪಾ 10 ರನ್ ಗಳಿಸಿದರು. ಬೇರೆ ಯಾವುದೇ ಆಟಗಾರನಿಗೆ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.

4 ವಿಕೆಟ್‌ಗಳಿಂದ ಗೆದ್ದ ಪಾಕ್

158 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಪಾಕಿಸ್ತಾನ 41.5 ಓವರ್‌ಗಳಲ್ಲಿ ಕೇವಲ ಆರು ವಿಕೆಟ್‌ಗಳ ನಷ್ಟಕ್ಕೆ ಗೆಲುವಿನ ದಡ ಮುಟ್ಟಿತು. ಈ ರನ್ ಚೇಸ್‌ನಲ್ಲಿ ಪಾಕಿಸ್ತಾನದ ಪರ ಬಾಬರ್ ಆಝಂ 40 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಹಾಗೆಯೇ ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಶದಾಬ್ ಖಾನ್ ಕೂಡ 29 ರನ್‌ ಬಾರಿಸಿ ಅಜೇಯರಾಗಿ ಉಳಿದರು. ಆರಂಭಿಕ ಆಟಗಾರ ಮಾಜ್ ಸದಾಕತ್ ಕೂಡ 27 ರನ್​ಗಳ ಕಾಣಿಕೆ ನೀಡಿದರು. ಈ ಮೂಲಕ ಪಾಕಿಸ್ತಾನ ತಂಡವು ಮೂರನೇ ಏಕದಿನ ಪಂದ್ಯವನ್ನು ಇನ್ನೂ 49 ಎಸೆತಗಳು ಬಾಕಿ ಇರುವಂತೆ 4 ವಿಕೆಟ್‌ಗಳಿಂದ ಗೆದ್ದು ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತು.

IND vs AFG: ಭಾರತ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ

ಹ್ಯಾಟ್ರಿಕ್ ಸರಣಿ ಜಯ

ಇದು ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನದ ಸತತ ಮೂರನೇ ಏಕದಿನ ಸರಣಿ ಗೆಲುವು. ಇದಕ್ಕೂ ಮೊದಲು, 2022 ರಲ್ಲಿ ತವರು ನೆಲದಲ್ಲಿ ನಡೆದ ಏಕದಿನ ಸರಣಿಯಲ್ಲಿ ಪಾಕಿಸ್ತಾನ ತಂಡವು ಆಸ್ಟ್ರೇಲಿಯಾವನ್ನು 2-1 ಅಂತರದಿಂದ ಸೋಲಿಸಿತ್ತು. ನಂತರ, 2024 ರಲ್ಲಿ, ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-2 ಅಂತರದಿಂದ ಗೆದ್ದುಕೊಂಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!