AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Ranking: ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಹಿಂದಿಕ್ಕಿದ ಪಾಕ್ ನಾಯಕ ಬಾಬರ್ ಅಜಮ್

ICC Test Ranking: ಪಾಕಿಸ್ತಾನದ 21 ವರ್ಷದ ಶಾಹೀನ್ ಟೆಸ್ಟ್ ಶ್ರೇಯಾಂಕದಲ್ಲಿ 10 ಸ್ಥಾನ ಮೇಲಕ್ಕೇರಿ ಅಗ್ರ 10 ಕ್ಕೆ ತಲುಪಿದ್ದಾರೆ. ಶಾಹೀನ್ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶಾಹೀನ್ 51 ರನ್ ಗಳಿಸಿ 6 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದರು.

ICC Test Ranking: ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಹಿಂದಿಕ್ಕಿದ ಪಾಕ್ ನಾಯಕ ಬಾಬರ್ ಅಜಮ್
ಪಾಕಿಸ್ತಾನ ತಂಡ
TV9 Web
| Edited By: |

Updated on: Aug 25, 2021 | 6:23 PM

Share

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ 1-0ಯಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿತು. 109 ರನ್ಗಳ ಅಂತರದ ಗೆಲುವು ಪಾಕಿಸ್ತಾನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಏರಲು ಸಹಾಯ ಮಾಡಿದೆ. ಈ ಬಾರಿ ತಂಡದ ನಾಯಕ ಬಾಬರ್ ಅಜಮ್ ಮತ್ತು ಯುವ ಬೌಲರ್ ಶಾಹೀನ್ ಅಫ್ರಿದಿ ಹೆಚ್ಚು ಲಾಭ ಪಡೆದಿದ್ದಾರೆ. ಇಬ್ಬರೂ ಅಗ್ರ 10 ಕ್ಕೆ ತಲುಪಿದ್ದಾರೆ.

ಪಾಕಿಸ್ತಾನದ 21 ವರ್ಷದ ಶಾಹೀನ್ ಟೆಸ್ಟ್ ಶ್ರೇಯಾಂಕದಲ್ಲಿ 10 ಸ್ಥಾನ ಮೇಲಕ್ಕೇರಿ ಅಗ್ರ 10 ಕ್ಕೆ ತಲುಪಿದ್ದಾರೆ. ಶಾಹೀನ್ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶಾಹೀನ್ 51 ರನ್ ಗಳಿಸಿ 6 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದರು. ನಂತರ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 43 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಹೀಗಾಗಿ, ಶಾಹೀನ್ ಇಡೀ ಪಂದ್ಯದಲ್ಲಿ 94 ರನ್ಗೆ 10 ವಿಕೆಟ್ ಪಡೆದರು. ಅವರ ಪ್ರದರ್ಶನದ ಕಾರಣ, ಅವರು 783 ಅಂಕಗಳೊಂದಿಗೆ ಟೆಸ್ಟ್ ಶ್ರೇಯಾಂಕದಲ್ಲಿ ಎಂಟನೇ ಸ್ಥಾನದಲ್ಲಿದ್ದಾರೆ.

ರಿಷಬ್ ಪಂತ್ ಹಿಂದಿಕ್ಕಿದ ಕ್ಯಾಪ್ಟನ್ ಬಾಬರ್ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಮೊದಲ ಇನ್ನಿಂಗ್ಸ್‌ನಲ್ಲಿ 75 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 33 ರನ್ ಗಳಿಸುವ ಮೂಲಕ ತನ್ನ ಟೆಸ್ಟ್ ಶ್ರೇಯಾಂಕವನ್ನು ಸುಧಾರಿಸಿಕೊಂಡಿದ್ದಾರೆ. ಅವರು ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಹಿಂದಿಕ್ಕಿ ಏಳನೇ ಸ್ಥಾನ ಪಡೆದಿದ್ದಾರೆ. ಬಾಬರ್ 749 ಅಂಕಗಳೊಂದಿಗೆ ಏಳನೇ ಮತ್ತು ಪಂತ್ 736 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.

Follow Us
TV9 Web
TV9 Web

TV9 Kannada

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ