AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌಲರ್​ಗಳು ಚೆನ್ನಾಗಿ ಬ್ಯಾಟ್ ಮಾಡಿದ್ದಾರೆ: ಸೋಲಿನ ಬಳಿಕ ಪಾಕ್ ನಾಯಕನ ಹೇಳಿಕೆ

Pakistan vs Afghanistan: ಪಾಕಿಸ್ತಾನ್ ತಂಡಕ್ಕೆ ಬಿಗ್ ಶಾಕ್ ನೀಡುವಲ್ಲಿ ಅಫ್ಘಾನ್ ಪಡೆ ಯಶಸ್ವಿಯಾಗಿದೆ. ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಸೋತಿದ್ದ ಅಫ್ಘಾನಿಸ್ತಾನ್ ತಂಡ ಇದೀಗ 18 ರನ್​ಗಳಿಂದ ಗೆದ್ದು ಬೀಗಿದೆ. ಈ ಹೀನಾಯ ಸೋಲಿನ ಬಳಿಕ ಪಾಕಿಸ್ತಾನ್ ತಂಡದ ನಾಯಕ ಬೌಲರ್​ಗಳ ಬ್ಯಾಟಿಂಗ್ ಅನ್ನು ಹೊಗಳಿ ಗಮನ ಸೆಳೆದಿದ್ದಾರೆ.

ಬೌಲರ್​ಗಳು ಚೆನ್ನಾಗಿ ಬ್ಯಾಟ್ ಮಾಡಿದ್ದಾರೆ: ಸೋಲಿನ ಬಳಿಕ ಪಾಕ್ ನಾಯಕನ ಹೇಳಿಕೆ
Salman Ali Agha
ಝಾಹಿರ್ ಯೂಸುಫ್
|

Updated on: Sep 03, 2025 | 10:00 AM

Share

ಏಷ್ಯಾಕಪ್​ ಟೂರ್ನಿಗಾಗಿ ಭರ್ಜರಿ ಸಿದ್ಧತೆಯಲ್ಲಿರುವ ಪಾಕಿಸ್ತಾನ್ ತಂಡಕ್ಕೆ ಅಫ್ಘಾನಿಸ್ತಾನ್ ಆಘಾತ ನೀಡಿದೆ. ಅದು ಕೂಡ ಪಾಕ್ ಪಡೆಯನ್ನು ಮಕಾಡೆ ಮಲಗಿಸುವ ಮೂಲಕ. ಶಾರ್ಜಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸುವಲ್ಲಿ ಅಫ್ಘಾನಿಸ್ತಾನ್ ಯಶಸ್ವಿಯಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನ್ ಪರ ಆರಂಭಿಕ ದಾಂಡಿಗ ಸೆದಿಖುಲ್ಲಾ ಅಟಲ್ 45 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ ಗಳೊಂದಿಗೆ 64 ರನ್ ಬಾರಿಸಿದ್ದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಬ್ರಾಹಿಂ ಝದ್ರಾನ್ 45 ಎಸೆತಗಳಲ್ಲಿ 8 ಫೋರ್ ಹಾಗೂ 1 ಸಿಕ್ಸ್ ನೊಂದಿಗೆ 65 ರನ್ ಕಲೆಹಾಕಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಅಫ್ಘಾನಿಸ್ತಾನ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು.

170 ರನ್ ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು 75 ರನ್​ಗಳಿಸುವಷ್ಟರಲ್ಲಿ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಆ ಬಳಿಕ ತಂಡದ ಮೊತ್ತವನ್ನು 100ರ ಗಡಿದಾಟಿಸಿದ್ದು ಬೌಲರ್​ಗಳು. ಅದರಲ್ಲೂ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹ್ಯಾರಿಸ್ ರೌಫ್ 16 ಎಸೆತಗಳಲ್ಲಿ 4 ಸಿಕ್ಸರ್​ಗಳೊಂದಿಗೆ 34 ರನ್ ಬಾರಿಸಿದ್ದರು. 

ಅಂತಿಮವಾಗಿ ಪಾಕಿಸ್ತಾನ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 151 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಾಕ್ ಪಡೆ 18 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನ ಬಳಿಕ ಮಾತನಾಡಿದ ಪಾಕಿಸ್ತಾನ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ತಂಡದ ಬೌಲರ್​ಗಳ ಪ್ರದರ್ಶನವನ್ನು ಕೊಂಡಾಡಿದರು.

ಶಾರ್ಜಾ ಪಿಚ್​ನಲ್ಲಿ 170 ರನ್​ಗಳನ್ನು ಚೇಸ್ ಂಆಡುವುದು ಕಷ್ಟಕರವೇನಲ್ಲ, ಅದು ಸುಲಭ ಎಂದು ಭಾವಿಸುತ್ತೇನೆ. ಆದರೆ ನಮ್ಮ ಬ್ಯಾಟರ್​ಗಳು ಆರಂಭದಲ್ಲಿ ಚೆನ್ನಾಗಿ ಆಡಿದರೂ ಮಧ್ಯಮ ಕ್ರಮಾಂಕದಲ್ಲಿ ಸುಲಭವಾಗಿ ವಿಕೆಟ್ ಕೈಚೆಲ್ಲಿದರು. ಮಧ್ಯಮ ಓವರ್​ಗಳಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿದ್ದು ಸೋಲಿಗೆ ಕಾರಣವಾಯಿತು.

ಇದಾಗ್ಯೂ ನಮ್ಮ ಬೌಲರ್​ಗಳು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ನಮ್ಮ ಬ್ಯಾಟರ್​ಗಳು ಸ್ವಲ್ಪ ಎಚ್ಚರಿಕೆಯಿಂದ ಆಡಿದ್ದರೆ ಪಂದ್ಯದ ಫಲಿತಾಂಶ ಬೇರೆಯಾಗಿರುತ್ತಿತ್ತು. ಆದರೆ ಅಫ್ಘಾನಿಸ್ತಾನ್ ಸ್ಪಿನ್ನರ್​ಗಳು ನಮ್ಮ ಅವಕಾಶಗಳನ್ನು ಕಸಿದುಕೊಳ್ಳುವಲ್ಲಿ ಯಶಸ್ವಿಯಾದರು. ಹೀಗಾಗಿ ಪಾಕಿಸ್ತಾನ್ ತಂಡದ ಸೋಲನುಭವಿಸಿದೆ ಎಂದು ಸಲ್ಮಾನ್ ಅಲಿ ಅಘಾ ಹೇಳಿದ್ದಾರೆ.

ಇದನ್ನೂ ಓದಿ: ಬೇಡದ ದಾಖಲೆಯೊಂದಿಗೆ ಕೆರಿಯರ್ ಆರಂಭಿಸಿದ ಸೋನಿ ಬೇಕರ್

ಇತ್ತ ಸಲ್ಮಾನ್ ಅಲಿ ಅಘಾ ಬೌಲರ್​ಗಳು ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎನ್ನಲು ಮುಖ್ಯ ಕಾರಣ, ಪಾಕಿಸ್ತಾನ್ ಪರ ಈ ಪಂದ್ಯದಲ್ಲಿ ಗರಿಷ್ಠ ಸ್ಕೋರ್​ಗಳಿಸಿದ್ದೇ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹ್ಯಾರಿಸ್ ರೌಫ್. ಅಂತಿಮ ಓವರ್​ಗಳ ವೇಳೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ರೌಫ್ 34 ರನ್​ಗಳಿಸಿದ್ದೇ ಗರಿಷ್ಠ ಸ್ಕೋರ್. ಹೀಗಾಗಿಯೇ ಪಾಕ್ ನಾಯಕ ಬೌಲರ್​ಗಳ ಬ್ಯಾಟಿಂಗ್ ಅನ್ನು ಹೊಗಳಿದ್ದಾರೆ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ