AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತದ ವಿರುದ್ಧ ಹೀನಾಯ ಸೋಲು; ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಮೊದಲ ತಲೆದಂಡ

India vs Pakistan Asia Cup Match: ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಸೋಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ (ಪಿಸಿಬಿ) ದೊಡ್ಡ ಸಂಚಲನವನ್ನು ಉಂಟುಮಾಡಿದೆ. ಭಾರತದ 7 ವಿಕೆಟ್‌ಗಳ ಜಯದ ನಂತರ, ಪಾಕಿಸ್ತಾನ ತಂಡದ ನಿರ್ದೇಶಕ ಉಸ್ಮಾನ್ ವಹಾಲಾ ಅವರನ್ನು ಅಮಾನತುಗೊಳಿಸಲಾಗಿದೆ. ಪಂದ್ಯದ ನಂತರದ ಕೈಕುಲುಕದ ಘಟನೆಯನ್ನು ನಿರ್ವಹಿಸುವಲ್ಲಿನ ವೈಫಲ್ಯಕ್ಕಾಗಿ ಅವರನ್ನು ದೂಷಿಸಲಾಗಿದೆ. ಪಿಸಿಬಿ ಮ್ಯಾಚ್ ರೆಫರಿ ವಿರುದ್ಧವೂ ಆಕ್ಷೇಪ ವ್ಯಕ್ತಪಡಿಸಿದೆ.

IND vs PAK: ಭಾರತದ ವಿರುದ್ಧ ಹೀನಾಯ ಸೋಲು; ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಮೊದಲ ತಲೆದಂಡ
Pakistan Team
ಪೃಥ್ವಿಶಂಕರ
|

Updated on:Sep 15, 2025 | 8:21 PM

Share

2025 ರ ಏಷ್ಯಾಕಪ್‌ನಲ್ಲಿ (Asia Cup 2025) ಟೀಂ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ (PCB) ಕೋಲಾಹಲ ಉಂಟಾಗಿದೆ. ಭಾರತದ ವಿರುದ್ಧ 7 ವಿಕೆಟ್​ಗಳ ಸೋಲಿನ ಜೊತೆಗೆ, ಪಾಕಿಸ್ತಾನಿ ಆಟಗಾರರು ಮೈದಾನದಲ್ಲಿ ಅವಮಾನವನ್ನು ಎದುರಿಸಬೇಕಾಯಿತು. ವಾಸ್ತವವಾಗಿ, ಈ ಪಂದ್ಯ ಮುಗಿದ ನಂತರ ಟೀಂ ಇಂಡಿಯಾದ ಆಟಗಾರರು, ಪಾಕಿಸ್ತಾನಿ ಆಟಗಾರರೊಂದಿಗೆ ಹಸ್ತಲಾಘವ ಮಾಡದೆ ಡ್ರೆಸಿಂಗ್ ರೂಮ್​ಗೆ ತೆರಳಿದರು. ಈ ಘಟನೆಯ ನಂತರ, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪಾಕ್ ತಂಡದ ನಿರ್ದೇಶಕರನ್ನು ಹುದ್ದೆಯಿಂದ ಅಮಾನತುಗೊಳಿಸಿದ್ದಾರೆ.

ನಿರ್ದೇಶಕರಿಗೆ ಗೇಟ್​​ಪಾಸ್

ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತಂಡದ ನಿರ್ದೇಶಕ ಉಸ್ಮಾನ್ ವಹಾಲಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಈ ಹುದ್ದೆಯಿಂದ ಅಮಾನತುಗೊಳಿಸಿದೆ. ಪಂದ್ಯದ ನಂತರ ಕೈಕುಲುಕದ ಘಟನೆಯನ್ನು ನಿರ್ವಹಿಸುವಲ್ಲಿನ ಲೋಪಗಳಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ, ಇದು ಪಾಕಿಸ್ತಾನ ತಂಡವನ್ನು ಕ್ರೀಡಾ ಮನೋಭಾವದ ವಿಷಯದಲ್ಲಿ ದುರ್ಬಲ ಸ್ಥಾನಕ್ಕೆ ತಳ್ಳಿದೆ ಎಂಬುದು ಮಂಡಳಿಯ ಅಭಿಪ್ರಾಯವಾಗಿದೆ. ಹೀಗಾಗಿ ಉಸ್ಮಾನ್ ವಹಾಲಾ ಅವರ ತಲೆದಂಡವಾಗಿದೆ.

ಉಸ್ಮಾನ್ ವಹಾಲಾ ಅವರನ್ನು ಕಳೆದ ಎರಡು ವರ್ಷಗಳಿಂದ ಈ ಹುದ್ದೆಗೆ ನೇಮಿಸಲಾಗಿತ್ತು. ಇದು ಮಾತ್ರವಲ್ಲದೆ ಅವರು ಪಾಕಿಸ್ತಾನ ಸೂಪರ್ ಲೀಗ್‌ನ ಅಧ್ಯಕ್ಷರೂ ಆಗಿದ್ದಾರೆ. ಈ ಸೂಕ್ಷ್ಮ ಸಮಸ್ಯೆಯನ್ನು ಸಮಯಕ್ಕೆ ಸರಿಯಾಗಿ ಪರಿಹರಿಸಲು ಅವರು ವಿಫಲರಾಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅಲ್ಲದೆ ಪಂದ್ಯ ಪೂರ್ವ ಸಿದ್ಧತೆಗಳಲ್ಲಿ ಪಾಕಿಸ್ತಾನದ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಹಾಲಾ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪವನ್ನು ಹೊರಿಸಲಾಗಿದೆ. ಪಂದ್ಯ ಪ್ರಾರಂಭವಾಗುವ ಮೊದಲೇ ಅವರು ಈ ಸಮಸ್ಯೆಯನ್ನು ಪ್ರಸ್ತಾಪಿಸಿ ಪರಿಹರಿಸಬೇಕಿತ್ತು ಎಂಬುದು ಮಂಡಳಿಯ ಅಭಿಪ್ರಾಯ.

IND vs PAK: ಶೇಕ್ ಹ್ಯಾಂಡ್ ಮಾಡದ ಟೀಂ ಇಂಡಿಯಾಕ್ಕೆ ಶಿಕ್ಷೆ? ಐಸಿಸಿ ನಿಯಮ ಏನು ಹೇಳುತ್ತೆ?

ರೆಫರಿ ವಿರುದ್ಧವೂ ಕ್ರಮಕ್ಕೆ ಆಗ್ರಹ

ನಿರ್ದೇಶಕರನ್ನು ಹುದ್ದೆಯಿಂದ ತೆಗೆದು ಹಾಕುವುದರ ಜೊತೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಪಂದ್ಯದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ವಿರುದ್ಧವೂ ಗಂಭೀರ ಆರೋಪಗಳನ್ನು ಮಾಡಿದೆ. ಟಾಸ್ ಸಮಯದಲ್ಲಿ ಕೈಕುಲುಕದಂತೆ ಇಬ್ಬರೂ ನಾಯಕರಿಗೆ ಮ್ಯಾಚ್ ರೆಫರಿ ಹೇಳಿದ್ದಾರೆ. ಇದು ಐಸಿಸಿಯ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಿಸಿಬಿ ಆರೋಪಿಸಿದೆ. ಈ ಕಾರಣಕ್ಕಾಗಿ ಮ್ಯಾಚ್ ರೆಫರಿ ಪೈಕ್ರಾಫ್ಟ್ ಅವರನ್ನು ಏಷ್ಯಾಕಪ್ ಪಂದ್ಯಾವಳಿಯಿಂದ ತೆಗೆದುಹಾಕುವಂತೆ ಪಿಸಿಬಿ ಒತ್ತಾಯಿಸಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥರೂ ಆಗಿರುವ ಮೊಹ್ಸಿನ್ ನಖ್ವಿ, ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಐಸಿಸಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Mon, 15 September 25

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ