ಆಸ್ಟ್ರೇಲಿಯಾ- ಜಿಂಬಾಬ್ವೆ ಪ್ರವಾಸಕ್ಕೆ ಪಾಕ್ ತಂಡ ಪ್ರಕಟ; ನಾಯಕನ ಹೆಸರು ಇನ್ನೂ ನಿಗೂಢ
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಸ್ಟ್ರೇಲಿಯಾ ಮತ್ತು ಜಿಂಬಾಬ್ವೆ ಪ್ರವಾಸಗಳಿಗೆ ತಂಡವನ್ನು ಪ್ರಕಟಿಸಿದೆ. ಬಾಬರ್ ಆಝಂ ಮತ್ತು ಶಾಹೀನ್ ಅಫ್ರಿದಿ ಅವರ ಮರಳುವಿಕೆಯು ಗಮನಾರ್ಹ. ಹಲವು ಹೊಸ ಆಟಗಾರರಿಗೆ ಅವಕಾಶ ದೊರೆತಿದೆ. ಬಾಬರ್ ಏಕದಿನ ಮತ್ತು ಟಿ20 ತಂಡಗಳ ನಾಯಕತ್ವವನ್ನು ತ್ಯಜಿಸಿದ್ದು, ಹೊಸ ನಾಯಕನ ಹೆಸರನ್ನು ಇನ್ನೂ ಪ್ರಕಟಿಸಿಲ್ಲ. ಜಿಂಬಾಬ್ವೆ ಪ್ರವಾಸಕ್ಕೆ ಕೆಲವು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿರುವ ಪಾಕಿಸ್ತಾನ ತಂಡ ಬರೋಬ್ಬರಿ 3 ವರ್ಷಗಳ ನಂತರ ತವರಿನಲ್ಲಿ ಟೆಸ್ಟ್ ಸರಣಿ ಗೆದ್ದು, ಸರಣಿ ಗೆಲುವಿನ ಬರವನ್ನು ನೀಗಿಸಿಕೊಂಡಿತ್ತು. ಪ್ರಸ್ತುತ ಗೆಲುವಿನ ಸಂಭ್ರಮದಲ್ಲಿರುವ ಪಾಕಿಸ್ತಾನ ತಂಡ, ಇದೀಗ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಬೇಕಿದೆ. ಪಾಕಿಸ್ತಾನ ತಂಡ ಆಸ್ಟ್ರೇಲಿಯಾದಲ್ಲಿ ಏಕದಿನ ಮತ್ತು ಟಿ20 ಸರಣಿಗಳನ್ನು ಆಡಬೇಕಿದ್ದು, ನವೆಂಬರ್ 4 ರಿಂದ ಈ ಪ್ರವಾಸ ಆರಂಭವಾಗಲಿದೆ. ಇದಾದ ಬಳಿಕ ಪಾಕಿಸ್ತಾನ ತಂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, ಈ ಪ್ರವಾಸದಲ್ಲಿ 3 ಏಕದಿನ ಮತ್ತು ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಈ ಎರಡೂ ಪ್ರವಾಸಗಳಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟಿಸಿದ್ದು, ವಿಶೇಷವೆಂದರೆ ಈ ಬಾರಿ ಹಲವು ಹೊಸ ಮುಖಗಳಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.
ಬಾಬರ್-ಶಾಹೀನ್ ವಾಪಸಾತಿ
ಆಸ್ಟ್ರೇಲಿಯಾ ಮತ್ತು ಜಿಂಬಾಬ್ವೆ ಪ್ರವಾಸಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಆಯ್ಕೆಗಾರರು 15 ಸದಸ್ಯರ ತಂಡವನ್ನು ಪ್ರಕಟಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ತಂಡದಿಂದ ಹೊರಬಿದ್ದಿದ್ದ ಅನುಭವಿಗಳಾದ ಬಾಬರ್ ಆಝಂ, ನಸೀಮ್ ಶಾ ಮತ್ತು ಶಾಹೀನ್ ಆಫ್ರಿದಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಜಿಂಬಾಬ್ವೆ ಪ್ರವಾಸದಲ್ಲಿ ಈ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆಸ್ಟ್ರೇಲಿಯಾ ಪ್ರವಾಸದ ಹೊರತಾಗಿ, ಮೊಹಮ್ಮದ್ ರಿಜ್ವಾನ್ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯನ್ನು ಆಡಲಿದ್ದು, ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ.
ಈ ಆಟಗಾರರಿಗೆ ಅವಕಾಶ
ಅಮೀರ್ ಜಮಾಲ್, ಅರಾಫತ್ ಮಿನ್ಹಾಸ್, ಫೈಸಲ್ ಅಕ್ರಮ್, ಹಸಿಬುಲ್ಲಾ, ಮುಹಮ್ಮದ್ ಇರ್ಫಾನ್ ಖಾನ್ ಮತ್ತು ಸ್ಯಾಮ್ ಅಯೂಬ್ ಅವರು ಮೊದಲ ಬಾರಿಗೆ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಏಕದಿನ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ. ಮತ್ತೊಂದೆಡೆ, ಜಹಂದಾದ್ ಖಾನ್ ಮತ್ತು ಸಲ್ಮಾನ್ ಅಲಿ ಅಗಾ ಮೊದಲ ಬಾರಿಗೆ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ. ಅದೇ ಸಮಯದಲ್ಲಿ, ಮೊಹಮ್ಮದ್ ಹಸ್ನೈನ್ ಬಹಳ ಸಮಯದ ನಂತರ ತಂಡಕ್ಕೆ ಮರಳಿದ್ದಾರೆ.
ನೂತನ ನಾಯಕನ ಹೆಸರನ್ನು ಇನ್ನೂ ಪ್ರಕಟಿಸಿಲ್ಲ
ವಾಸ್ತವವಾಗಿ, ಬಾಬರ್ ಆಝಂ ಇತ್ತೀಚೆಗೆ ಏಕದಿನ ಮತ್ತು ಟಿ20 ತಂಡದ ನಾಯಕತ್ವವನ್ನು ತೊರೆದಿದ್ದರು. ಇಂತಹ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯಾ ಪ್ರವಾಸದಿಂದ ತಂಡಕ್ಕೆ ಹೊಸ ನಾಯಕ ಸಿಗಲಿದ್ದಾರೆ. ಆದರೆ ಪಾಕಿಸ್ತಾನ ಕ್ರಿಕೆಟ್‌ನ ಆಯ್ಕೆಗಾರರು ತಂಡದ ಘೋಷಣೆಯೊಂದಿಗೆ ನಾಯಕನ ಹೆಸರನ್ನು ಇದುವರೆಗೂ ಬಹಿರಂಗಪಡಿಸಿಲ್ಲ. ಪಿಸಿಬಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಅಕ್ಟೋಬರ್ 27 ರಂದು ಅಂದರೆ ಇಂದು ಸಂಜೆ 4 ಗಂಟೆಗೆ ನಾಯಕನ ಹೆಸರನ್ನು ಪ್ರಕಟಿಸಲಾಗುವುದು.
ಆಸ್ಟ್ರೇಲಿಯಾ ಪ್ರವಾಸಕ್ಕೆ ಪಾಕಿಸ್ತಾನ ತಂಡ
ಏಕದಿನ ತಂಡ: ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಅರಾಫತ್ ಮಿನ್ಹಾಸ್, ಬಾಬರ್ ಆಝಂ, ಫೈಸಲ್ ಅಕ್ರಮ್, ಹ್ಯಾರಿಸ್ ರೌಫ್, ಹಸಿಬುಲ್ಲಾ (ವಿಕೆಟ್ ಕೀಪರ್), ಕಮ್ರಾನ್ ಗುಲಾಮ್, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ಇರ್ಫಾನ್ ಖಾನ್, ನಸೀಮ್ ಶಾ, ಸ್ಯಾಮ್ ಅಯೂಬ್, ಸಲ್ಮಾನ್ ಅಲಿ ಅಗಾ, ಶಾಹೀನ್ ಶಾ ಅಫ್ರಿದಿ.
ಟಿ20 ಸರಣಿಗೆ ಪಾಕಿಸ್ತಾನ ತಂಡ- ಅರಾಫತ್ ಮಿನ್ಹಾಸ್, ಬಾಬರ್ ಆಝಂ, ಹ್ಯಾರಿಸ್ ರೌಫ್, ಹಸಿಬುಲ್ಲಾ, ಜಹಂದಾದ್ ಖಾನ್, ಮೊಹಮ್ಮದ್ ಅಬ್ಬಾಸ್ ಆಫ್ರಿದಿ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ಇರ್ಫಾನ್ ಖಾನ್, ನಸೀಮ್ ಶಾ, ಒಮೈರ್ ಬಿನ್ ಯೂಸುಫ್, ಸಾಹಿಬ್ಜಾದಾ ಅ ಫರ್ಹಾನ್, ಶಾಹೀನ್ ಶಾ ಅಫ್ರಿದಿ, ಸುಫ್ಯಾನ್ ಮೋಕಿಮ್, ಉಸ್ಮಾನ್ ಖಾನ್.
ಜಿಂಬಾಬ್ವೆ ಪ್ರವಾಸಕ್ಕೆ ಪಾಕಿಸ್ತಾನ ತಂಡ
ಏಕದಿನ ತಂಡ: ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಅಬ್ರಾರ್ ಅಹ್ಮದ್, ಅಹ್ಮದ್ ದಾನಿಯಾಲ್, ಫೈಸಲ್ ಅಕ್ರಮ್, ಹಾರಿಸ್ ರೌಫ್, ಹಸಿಬುಲ್ಲಾ (ವಿಕೆಟ್ ಕೀಪರ್), ಕಮ್ರಾನ್ ಗುಲಾಮ್, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ಇರ್ಫಾನ್ ಖಾನ್, ಸೈಮ್ ಅಯೂಬ್, ಸಲ್ಮಾನ್ ಅಯೂಬ್, ಸಲ್ಮಾನ್ ಅಲಿ ದಹಾನಿ ಮತ್ತು ತಯ್ಯಬ್ ತಾಹಿರ್.
ಟಿ20 ತಂಡ: ಅಹ್ಮದ್ ದಾನಿಯಾಲ್, ಅರಾಫತ್ ಮಿನ್ಹಾಸ್, ಹಾರಿಸ್ ರೌಫ್, ಹಸಿಬುಲ್ಲಾ (ವಿಕೆಟ್ ಕೀಪರ್), ಜಹಂದಾದ್ ಖಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ಇರ್ಫಾನ್ ಖಾನ್, ಒಮೈರ್ ಬಿನ್ ಯೂಸುಫ್, ಖಾಸಿಮ್ ಅಕ್ರಂ, ಸಾಹಿಬ್ಜಾದಾ ಫರ್ಹಾನ್, ಸಲ್ಮಾನ್ ಅಲಿ, ತಫ್ಯಾನ್ ಅಲಿ ಮತ್ತು ಉಸ್ಮಾನ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ