AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಆರಂಭದ ದಿನವೇ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಪಾಕ್ ವೇಗಿ

Usman Shinwari's Sudden Retirement: ಪಾಕಿಸ್ತಾನದ ವೇಗದ ಬೌಲರ್ ಉಸ್ಮಾನ್ ಶಿನ್ವಾರಿ ಅವರು ಅನಿರೀಕ್ಷಿತವಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಏಷ್ಯಾಕಪ್ ತಂಡದಲ್ಲಿ ಆಯ್ಕೆಯಾಗಿಲ್ಲದಿದ್ದರೂ, ಈ ನಿರ್ಧಾರ ಪಾಕಿಸ್ತಾನ ಕ್ರಿಕೆಟ್‌ಗೆ ಆಘಾತವನ್ನುಂಟು ಮಾಡಿದೆ. ಗಾಯ ಮತ್ತು ಪಿಸಿಬಿ ನಿರ್ಲಕ್ಷ್ಯ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅವರು ಟೆಸ್ಟ್, ಏಕದಿನ ಮತ್ತು ಟಿ20 ಮಾದರಿಯಲ್ಲಿ ಪಾಕಿಸ್ತಾನಕ್ಕಾಗಿ ಆಡಿದ್ದಾರೆ.

ಏಷ್ಯಾಕಪ್ ಆರಂಭದ ದಿನವೇ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಪಾಕ್ ವೇಗಿ
Usman Shinwari
ಪೃಥ್ವಿಶಂಕರ
|

Updated on: Sep 09, 2025 | 6:16 PM

Share

2025 ರ ಏಷ್ಯಾಕಪ್ (Asia Cup 2025) ಗೆಲ್ಲುವ ಪ್ರಮುಖ ತಂಡಗಳಲ್ಲಿ ಒಂದಾಗಿರುವ ಪಾಕಿಸ್ತಾನ ತಂಡಕ್ಕೆ ಟೂರ್ನಿ ಆರಂಭಕ್ಕೂ ಮುನ್ನವೇ ಆಘಾತ ಎದುರಾಗಿದೆ. ವಾಸ್ತವವಾಗಿ ಟಿ20 ಏಷ್ಯಾಕಪ್ ಸೆಪ್ಟೆಂಬರ್ 9 ರಂದು ಅಂದರೆ ಇಂದಿನಿಂದ ಆರಂಭವಾಗುತ್ತಿದೆ. ಈ ಟೂರ್ನಿಯಲ್ಲಿ ಬಲಿಷ್ಠ ತಂಡ ಎನಿಸಿಕೊಂಡಿರುವ ಪಾಕಿಸ್ತಾನ ಸೆಪ್ಟೆಂಬರ್ 12 ರಂದು ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ತಂಡದ 31 ವರ್ಷದ ಎಡಗೈ ವೇಗದ ಬೌಲರ್ ಉಸ್ಮಾನ್ ಶಿನ್ವಾರಿ ಇದ್ದಕ್ಕಿದ್ದಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಆದಾಗ್ಯೂ ಶಿನ್ವಾರಿ ಅವರ ನಿವೃತ್ತಿ ಘೋಷಣೆ ಪಾಕ್ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ ಅವರನ್ನು ಏಷ್ಯಾಕಪ್ ತಂಡದಲ್ಲಿ ಆಯ್ಕೆ ಮಾಡಿಲ್ಲ.

ಇದ್ದಕ್ಕಿದ್ದಂತೆ ನಿವೃತ್ತಿ ಘೋಷಣೆ

ಡಿಸೆಂಬರ್ 2013 ರಲ್ಲಿ ದುಬೈನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಉಸ್ಮಾನ್ ಶಿನ್ವಾರಿ, ಅಕ್ಟೋಬರ್ 2017 ರಲ್ಲಿ ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಅದೇ ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಇದಲ್ಲದೆ, ಅವರು ಡಿಸೆಂಬರ್ 2019 ರಲ್ಲಿ ಪಾಕಿಸ್ತಾನ ಪರ ಏಕೈಕ ಟೆಸ್ಟ್ ಪಂದ್ಯವನ್ನು ಆಡಿದರು. ಅಚ್ಚರಿಯೆಂದರೇ ಅದೇ ಶ್ರೀಲಂಕಾ ವಿರುದ್ಧವೇ ಅವರು ಟೆಸ್ಟ್ ಮಾದರಿಗೂ ಪಾದಾರ್ಪಣೆ ಮಾಡಿದ್ದರು. ಆದಾಗ್ಯೂ ಅವರು 2019 ರಿಂದ ಪಾಕಿಸ್ತಾನ ತಂಡದಿಂದ ಹೊರಗುಳಿದಿದ್ದು, ಯಾವ ಪಂದ್ಯವನ್ನು ಆಡಿಲ್ಲ. ಇದರಿಂದಾಗಿ ಅವರು ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ್ದಾರೆ.

ಉಸ್ಮಾನ್ ಶಿನ್ವಾರಿ ಅವರ ಹಠಾತ್ ನಿವೃತ್ತಿಗೆ ಪಿಸಿಬಿ ನಿರ್ಲಕ್ಷ್ಯವೇ ದೊಡ್ಡ ಕಾರಣ ಎಂದು ಹೇಳಲಾಗುತ್ತಿದೆ. ಒಂದು ಕಾಲದಲ್ಲಿ ಅವರನ್ನು ಪಾಕಿಸ್ತಾನ ತಂಡದ ಭವಿಷ್ಯ ಎಂದು ಪರಿಗಣಿಸಲಾಗಿತ್ತು. ಆದರೆ ಸ್ವಲ್ಪ ಸಮಯದ ನಂತರ, ಅವರಿಗೆ ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟಕರವಾಯಿತು. ಇದು ಮಾತ್ರವಲ್ಲದೆ ನಿರಂತರವಾಗಿ ಗಾಯದಿಂದ ಬಳಲುತ್ತಿದ್ದ ಉಸ್ಮಾನ್ ಶಿನ್ವಾರಿ ಬೆನ್ನುನೋವಿನಿಂದಾಗಿ ತುಂಬಾ ತೊಂದರೆಗೊಳಗಾಗಿದ್ದರು. ಇದು ಕೂಡ ಅವರ ನಿವೃತ್ತಿ ನಿರ್ಧಾರಕ್ಕೆ ಒಂದು ಕಾರಣ ಎಂದು ಹೇಳಲಾಗುತ್ತಿದೆ.

ಉಸ್ಮಾನ್ ಶಿನ್ವಾರಿ ಪ್ರದರ್ಶನ

ಪಾಕಿಸ್ತಾನ ಪರ 1 ಟೆಸ್ಟ್ ಪಂದ್ಯವನ್ನಾಡಿರುವ ಉಸ್ಮಾನ್ ಶಿನ್ವಾರಿ 1 ವಿಕೆಟ್ ಪಡೆದಿದ್ದಾರೆ. ಹಾಗೆಯೇ 17 ಟೆಸ್ಟ್ ಪಂದ್ಯಗಳಲ್ಲಿ 4.94 ಎಕಾನಮಿ ಮತ್ತು 18.61 ರ ಸರಾಸರಿಯಲ್ಲಿ 34 ವಿಕೆಟ್ ಪಡೆದಿದ್ದು ಅವರು ಎರಡು ಬಾರಿ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದಲ್ಲದೆ, ಉಸ್ಮಾನ್ ಶಿನ್ವಾರಿ ಪಾಕಿಸ್ತಾನ ಪರ ಒಟ್ಟು 16 ಏಕದಿನ ಪಂದ್ಯಗಳನ್ನು ಆಡಿದ್ದು 13 ವಿಕೆಟ್ ಪಡೆದಿದ್ದಾರೆ. ಕೊನೆಯ ಬಾರಿಗೆ ಪಾಕಿಸ್ತಾನದ ರಾಷ್ಟ್ರೀಯ ಟಿ20 ಕಪ್‌ನಲ್ಲಿ ಆಡಿದ್ದ ಉಸ್ಮಾನ್ ಶಿನ್ವಾರಿ ನಾಲ್ಕು ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಕೂಡ ಪಡೆಯಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ