ಪಾಕಿಸ್ತಾನ ಕ್ರಿಕೆಟಿಗ ಆಸಿಫ್ ಅಫ್ರಿದಿ (Asif Afridi) ಅವರ ಮುಗ್ಧ ಮಗಳು ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಕೆಲ ದಿನಗಳ ಹಿಂದೆ ಈ ಸುದ್ದಿ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಆಸಿಫ್ ಅಫ್ರಿದಿ ಮಗಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಎಲ್ಲರೂ ನನ್ನ ಮಗಳ ಗುಣಮುಖವಾಗಲು ಪ್ರಾರ್ಥಿಸಬೇಕೆಂದು ಮನವಿ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಗಳು ಶೀಘ್ರ ಗುಣಮುಖರಾಗಲಿ ಎಂದು ವಿಶ್ವದೆಲ್ಲೆಡೆಯಿಂದ ಅನೇಕರು ಹಾರೈಸಿದ್ದಾರೆ.
ಬೌಲಿಂಗ್-ಆಲ್-ರೌಂಡರ್ ಆಗಿರುವ ಆಸಿಫ್ ಅಫ್ರಿದಿ ಪಾಕಿಸ್ತಾನ್ ಸೂಪರ್ ಲೀಗ್ 2022 ರಲ್ಲಿ ಮುಲ್ತಾನ್ ಸುಲ್ತಾನ್ ತಂಡದ ಭಾಗವಾಗಿದ್ದರು. ಆ ಸೀಸನ್ನಲ್ಲಿ5 ಪಂದ್ಯಗಳಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದ ಆಸಿಫ್ 8 ವಿಕೆಟ್ಗಳನ್ನು ಪಡೆದಿದ್ದರು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅವರನ್ನು ಪಾಕಿಸ್ತಾನ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಪ್ಲೇಯಿಂಗ್ ಇಲೆವೆನ್ನ ಭಾಗವಾಗಲು ಸಾಧ್ಯವಾಗಿರಲಿಲ್ಲ.
ಇದೀಗ ಆಸಿಫ್ ಅಫ್ರಿದಿ ಅವರು ತಮ್ಮ ಮಗಳು ಆಸ್ಪತ್ರೆಯಲ್ಲಿ ದಾಖಲಾಗಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಭಾವುಕರಾಗಿ ಟ್ವೀಟ್ ಮಾಡಿರುವ ಅವರು, ನನ್ನ ಮಗಳು ಶೀಘ್ರ ಗುಣಮುಖಳಾಗಲಿ ಎಂದು ನೀವೆಲ್ಲರೂ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದಾರೆ. ಈ ಟ್ವೀಟ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರಾದ ಉಮರ್ ಗುಲ್ ಮತ್ತು ಸಲ್ಮಾನ್ ಬಟ್ ಪ್ರತಿಕ್ರಿಯಿಸಿದ್ದು, ಈ ಇಬ್ಬರೂ ಮಾಜಿ ಪಾಕಿಸ್ತಾನಿ ಕ್ರಿಕೆಟಿಗರು ತಮ್ಮ ಮಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
Plz everyone pray for my daughter health ?. pic.twitter.com/qCYMXF6R6F
— Asif Afridi 65 (@asifafridi65) June 6, 2022
ಸದ್ಯ ಮಗಳ ಚಿಕಿತ್ಸೆಯತ್ತ ಗಮನಹರಿಸಿರುವ ಆಸಿಫ್ ಅಫ್ರಿದಿ ಪಾಕಿಸ್ತಾನ್ ತಂಡದ ಭಾಗವಾಗಿಲ್ಲ. ಪಾಕ್ ತಂಡವು ವೆಸ್ಟ್ ಇಂಡೀಸ್ ವಿರುದ್ದ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯ ಜೂನ್ 8 ರಂದು ಮುಲ್ತಾನ್‌ನಲ್ಲಿ ನಡೆಯಲಿದೆ.
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.