Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್ ಜೊತೆ ಮನಸ್ತಾಪ; ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಪಾಕ್ ತಂಡದ ಸ್ಟಾರ್ ಆಲ್​ರೌಂಡರ್..!

Imad Wasim: ಇಮಾದ್ ಈ ವರ್ಷದ ಏಪ್ರಿಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನದ ಪರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದು ಅವರ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಬಾಬರ್‌ ಅವರೊಂದಿಗಿನ ಮನಸ್ತಾಪವು ಇಮಾದ್ ಅವರು ತಂಡದಿಂದ ಹೊರಗುಳಿಯಲು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ.

ಬಾಬರ್ ಜೊತೆ ಮನಸ್ತಾಪ; ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಪಾಕ್ ತಂಡದ ಸ್ಟಾರ್ ಆಲ್​ರೌಂಡರ್..!
ಇಮಾದ್ ವಾಸಿಂ
Follow us
ಪೃಥ್ವಿಶಂಕರ
|

Updated on: Nov 25, 2023 | 10:43 AM

2023ರ ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಕಳಪೆ ಪ್ರದರ್ಶನ ನೀಡಿದ್ದ ಪಾಕಿಸ್ತಾನ ಕ್ರಿಕೆಟ್‌ನಲ್ಲಿ (Pakistan Cricket Team) ಪ್ರತಿದಿನ ಏನಾದರೊಂದು ಹೊಸ ಸಂಗತಿಗಳು ನಡೆಯುತ್ತಲೆ ಇವೆ. ಬಾಬರ್ ಆಝಂ (Babar Azam) ನಾಯಕತ್ವದಲ್ಲಿ ಪಾಕಿಸ್ತಾನ ತಂಡ ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ಲೀಗ್​ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿತ್ತು. ಅಂದಿನಿಂದ ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಿದ್ದು, ಬಾಬರ್ ತಮ್ಮ ನಾಯಕತ್ವ ತೊರೆಯಬೇಕಾಯಿತು. ಆ ಬಳಿಕ ತಂಡಕ್ಕೆ ಹೊಸ ಮುಖ್ಯ ಆಯ್ಕೆದಾರ ಮತ್ತು ಕೋಚ್ ಅನ್ನು ಸಹ ನೇಮಿಸಲಾಯಿತು. ಇದೆಲ್ಲದರ ನಡುವೆ ಸತತ ನಿರ್ಲಕ್ಷ್ಯದಿಂದ ಬೇಸತ್ತಿರುವ ತಂಡದ ಅನುಭವಿ ಆಲ್ ರೌಂಡರ್ ಇಮಾದ್ ವಾಸಿಂ (Imad Wasim) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.

34 ವರ್ಷ ವಯಸ್ಸಿನ ಎಡಗೈ ಸ್ಪಿನ್ ಆಲ್ರೌಂಡರ್ ಇಮಾದ್ ವಾಸಿಮ್ ಅವರು ನವೆಂಬರ್ 24 ಶುಕ್ರವಾರದಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಏಕದಿನ ಹಾಗೂ ಟಿ20 ಸೇರಿದಂತೆ ಪಾಕಿಸ್ತಾನ ಪರ 121 ಪಂದ್ಯಗಳನ್ನು ಆಡಿರುವ ಇಮಾದ್ ತಮ್ಮ ನಿರ್ಧಾರವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ‘ಕಳೆದ ಹಲವು ದಿನಗಳಿಂದ ಈ ನಿರ್ಧಾರದ ಬಗ್ಗೆ ಯೋಚಿಸುತ್ತಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ತೊರೆಯಲು ಇದೇ ಸರಿಯಾದ ಸಮಯ ಎಂದು ಭಾವಿಸುತ್ತೇನೆ. ಪಾಕಿಸ್ತಾನ ಪರ ಆಡುವ ಮೂಲಕ ತಮ್ಮ ಕನಸು ನನಸಾಗಿದೆ. ನನ್ನ ವೃತ್ತಿಜೀವನದಲ್ಲಿ ಬೆಂಬಲಕ್ಕೆ ನಿಂತ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹಾಗೂ ಅಭಿಮಾನಿಗಳಿಗೆ ಧನ್ಯವಾದ ಎಂದು ಇಮಾದ್ ಬರೆದುಕೊಂಡಿದ್ದಾರೆ.

ತಂಡದಲ್ಲಿ ಬದಲಾವಣೆಯ ಪರ್ವ

ಕೆಲವು ವರ್ಷಗಳಿಂದ ಪಾಕಿಸ್ತಾನಿ ತಂಡದ ಸ್ಪಿನ್ ವಿಭಾಗ ಅಷ್ಟು ಬಲಿಷ್ಠವಾಗಿಲ್ಲ. ಹೀಗಾಗಿ ಉಳಿದವರಿಗಿಂತ ಕೊಂಚ ಉತ್ತಮ ಪ್ರದರ್ಶನ ನೀಡುತ್ತಿದ್ದ ಇಮಾದ್ ಅವರನ್ನು ಏಕದಿನ ವಿಶ್ವಕಪ್‌ಗೆ ಆಯ್ಕೆ ಮಾಡಬಹುದು ಎಂಬ ಊಹಾಪೋಹವಿತ್ತು. ಆದಾಗ್ಯೂ, ನಾಯಕ ಬಾಬರ್ ಆಝಂ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಇಮಾದ್​ಗೆ ಅವಕಾಶ ಸಿಗಲಿಲ್ಲ. ಇದೀಗ ಬಾಬರ್ ಅವರೇ ಪಾಕಿಸ್ತಾನ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಆದರೆ ತಂಡದಲ್ಲಿ ಹೊಸ ಬದಲಾವಣೆಗಳನ್ನು ನೋಡಿದ ಇಮಾದ್ ತಂಡದಿಂದ ದೂರ ಸರಿಯುವ ನಿರ್ಧಾರ ಮಾಡಿದ್ದಾರೆ.

ಆಸ್ಟ್ರೇಲಿಯಾವನ್ನು ಅಭಿನಂದಿಸಿ ಕೊಹ್ಲಿ ವಿರುದ್ಧ ಸೇಡು ತೀರಿಸಿಕೊಂಡ ಬಾಬರ್ ಆಝಂ..!

ಅಳಸಿದ್ದ ಬಾಬರ್ ಜೊತೆಗಿನ ಸಂಬಂಧ

ಇಮಾದ್ ಈ ವರ್ಷದ ಏಪ್ರಿಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನದ ಪರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದು ಅವರ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಬಾಬರ್‌ ಅವರೊಂದಿಗಿನ ಮನಸ್ತಾಪವು ಇಮಾದ್ ಅವರು ತಂಡದಿಂದ ಹೊರಗುಳಿಯಲು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಇಬ್ಬರೂ ಒಮ್ಮೆ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಕರಾಚಿ ಕಿಂಗ್ಸ್‌ನ ಭಾಗವಾಗಿದ್ದರು. ಅಲ್ಲಿ ಕರಾಚಿ ತಂಡ ಇಮಾದ್ ನಾಯಕತ್ವದಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ನಂತರ ಬಾಬರ್ ಪಾಕಿಸ್ತಾನ ತಂಡದ ನಾಯಕನಾದ ಬಳಿಕ ಇದ್ದಕ್ಕಿದ್ದಂತೆ ಅವರನ್ನು ಕರಾಚಿ ತಂಡದ ನಾಯಕನನ್ನಾಗಿ ನೇಮಿಸಲಾಯಿತು. ಅಲ್ಲಿಂದ ಇಬ್ಬರ ನಡುವಿನ ಸಂಬಂಧವು ಹದಗೆಡಲು ಪ್ರಾರಂಭಿಸಿತು.

ಇಮಾದ್ ಅಂತರರಾಷ್ಟ್ರೀಯ ವೃತ್ತಿಜೀವನ ಹೇಗಿತ್ತು?

ಇದಾದ ನಂತರವೇ ಇಮಾದ್ ವಾಸಿಂ ಅವರನ್ನು ಮೊದಲು ಏಕದಿನ ಮತ್ತು ನಂತರ ಟಿ20ತಂಡದಿಂದ ಕೈಬಿಡಲಾಯಿತು. ಎಡಗೈ ಆರ್ಥೊಡಾಕ್ಸ್ ಸ್ಪಿನ್ನರ್ ಇಮಾದ್ ಪಾಕ್ ತಂಡದ ಪರ 55 ಏಕದಿನ ಪಂದ್ಯಗಳಲ್ಲಿ 44 ವಿಕೆಟ್ ಮತ್ತು 66 ಟಿ20 ಪಂದ್ಯಗಳಲ್ಲಿ 65 ವಿಕೆಟ್ ಪಡೆದಿದ್ದಾರೆ. ಎಡಗೈ ಬ್ಯಾಟರ್ ಆಗಿರುವ ಇಮಾದ್ ಏಕದಿನದಲ್ಲಿ 986 ರನ್ ಮತ್ತು ಟಿ20ಯಲ್ಲಿ 486 ರನ್ ಕಲೆ ಹಾಕಿದ್ದಾರೆ. ಪ್ರಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಇಮಾದ್ ವಿಶ್ವದ ವಿವಿಧ ಟಿ20 ಮತ್ತು ಟಿ10 ಲೀಗ್‌ಗಳಲ್ಲಿ ಆಡುವುದನ್ನು ಮುಂದುವರೆಸಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು