IND vs PAK: ‘ಸಂಕಷ್ಟದಲ್ಲಿದ್ದೇವೆ ಸಹಾಯ ಮಾಡಿ’; ವಿಶ್ವದ ಮುಂದೆ ವಿಶೇಷ ಮನವಿ ಇಟ್ಟ ಪಾಕ್ ಕ್ರಿಕೆಟರ್ಸ್

IND vs PAK: ಪ್ರವಾಹ ಸಂತ್ರಸ್ತರಿಗಾಗಿ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಪ್ರಾರ್ಥಿಸಿದ್ದು, ಈ ಸಂಕಷ್ಟದ ಸಮಯದಲ್ಲಿ ಎಲ್ಲ ದೇಶಗಳು ಒಗ್ಗಟ್ಟಾಗಬೇಕು ಎಂದಿದ್ದಾರೆ. ಮತ್ತೊಂದೆಡೆ, ಸಂತ್ರಸ್ತರಿಗೆ ಸಹಾಯ ಮಾಡಲು ಹೆಚ್ಚು ಹೆಚ್ಚು ದೇಣಿಗೆ ನೀಡುವಂತೆ ಶಾಹೀನ್ ಶಾ ಆಫ್ರಿದಿ ಎಲ್ಲಾ ಜನರಲ್ಲಿ ಮನವಿ ಮಾಡಿದ್ದಾರೆ.

IND vs PAK: ‘ಸಂಕಷ್ಟದಲ್ಲಿದ್ದೇವೆ ಸಹಾಯ ಮಾಡಿ’; ವಿಶ್ವದ ಮುಂದೆ ವಿಶೇಷ ಮನವಿ ಇಟ್ಟ ಪಾಕ್ ಕ್ರಿಕೆಟರ್ಸ್
Pak cricketers
Follow us
TV9 Web
| Updated By: ಪೃಥ್ವಿಶಂಕರ

Updated on:Aug 28, 2022 | 5:03 PM

ಏಷ್ಯಾಕಪ್ (Asia Cup 2022) ಪಂದ್ಯಾವಳಿ ಆರಂಭವಾಗಿದ್ದು, ಭಾರತ ಇಂದಿನಿಂದ ತನ್ನ ಅಭಿಯಾನ ಆರಂಭಿಸಲಿದೆ. ಟೀಂ ಇಂಡಿಯಾದ ಮೊದಲ ಪಂದ್ಯ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧವಿದೆ. ಆದರೆ, ಭಾರತದೊಂದಿಗೆ ಕಣಕ್ಕಿಳಿಯುವ ಮುನ್ನ ಪಾಕ್ ಆಟಗಾರರ ಮನಸ್ಸು ಕೊಂಚ ಚಂಚಲವಾದಂತೆ ತೋರುತ್ತಿದೆ. ಪಾಕ್ ಕ್ರಿಕೆಟಿಗರು ವಿಶ್ವದ ಮುಂದೆ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಬಾಬರ್ ಆಜಮ್‌ನಿಂದ ಹಿಡಿದು ನಸೀಮ್ ಶಾ (Babar Azam to Naseem Shah) ತನಕ ಎಲ್ಲರೂ ಸಹಾಯ ಕೋರಿದ್ದಾರೆ. ಈಗ ನೀವು ಯೋಚಿಸುತ್ತಿರಬೇಕು ಈ ಆಟಗಾರರು ಹೀಗೆ ಮಾಡುವ ಅಗತ್ಯವೇನು ಎಂದು?. ಇದಕ್ಕೆ ಪ್ರಮುಖ ಕಾರಣವೆಮದರೆ ಪಾಕಿಸ್ತಾನದಲ್ಲಿ ಉಂಟಾಗಿರುವ ಪ್ರವಾಹದಿಂದ ಅಲ್ಲಿನ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಅವರ ನೆರವಿಗೆ ದಾವಿಸುವಂತೆ ಪಾಕ್ ಕ್ರಿಕೆಟಿಗರು ಮನವಿ ಮಾಡಿದ್ದಾರೆ.

ಪಾಕಿಸ್ತಾನದ ಸಿಂಧ್, ಪಂಜಾಬ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯಗಳಲ್ಲಿ ಸುಮಾರು 10000 ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ. ಇದರಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದು, ಇನ್ನೂ ಅನೇಕ ಜನರು ನಿರಾಶ್ರಿತರಾಗಿದ್ದಾರೆ. ಒಟ್ಟಿನಲ್ಲಿ ಅತಿವೃಷ್ಟಿಯಿಂದ ಭಾರೀ ಪ್ರಮಾಣದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ನಷ್ಟವಾಗಿದೆ. ಇದೇ ಕಾರಣಕ್ಕೆ ಏಷ್ಯಾಕಪ್ ಆಡಲು ಬಂದಿರುವ ಹಲವು ಪಾಕಿಸ್ತಾನಿ ಕ್ರಿಕೆಟಿಗರು ಸಂತ್ರಸ್ತರಿಗಾಗಿ ಪ್ರಾರ್ಥಿಸಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ನೆರವು ಕೋರಿದ ಪಾಕ್ ಕ್ರಿಕೆಟರ್ಸ್​

ಪ್ರವಾಹ ಸಂತ್ರಸ್ತರಿಗಾಗಿ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಪ್ರಾರ್ಥಿಸಿದ್ದು, ಈ ಸಂಕಷ್ಟದ ಸಮಯದಲ್ಲಿ ಎಲ್ಲ ದೇಶಗಳು ಒಗ್ಗಟ್ಟಾಗಬೇಕು ಎಂದಿದ್ದಾರೆ. ಮತ್ತೊಂದೆಡೆ, ಸಂತ್ರಸ್ತರಿಗೆ ಸಹಾಯ ಮಾಡಲು ಹೆಚ್ಚು ಹೆಚ್ಚು ದೇಣಿಗೆ ನೀಡುವಂತೆ ಶಾಹೀನ್ ಶಾ ಆಫ್ರಿದಿ ಎಲ್ಲಾ ಜನರಲ್ಲಿ ಮನವಿ ಮಾಡಿದ್ದಾರೆ. ಅದೇ ಸಮಯದಲ್ಲಿ, ನಸೀಮ್ ಶಾ ಸಹ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಶಹನವಾಜ್ ದಹಾನಿ ಮತ್ತು ಶೋಯೆಬ್ ಅಖ್ತರ್ ಕೂಡ ಪಾಕಿಸ್ತಾನದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಧ್ವನಿ ಎತ್ತಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಜನರಿಗಾಗಿ ಶಾಹಿದ್ ಅಫ್ರಿದಿ ಅವರ ಪ್ರತಿಷ್ಠಾನದ ಕಾರ್ಯವನ್ನು ಶೋಯೆಬ್ ಅಖ್ತರ್ ಶ್ಲಾಘಿಸಿದ್ದಾರೆ.

Published On - 5:03 pm, Sun, 28 August 22

ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ