Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಪಾಕಿಸ್ತಾನದಲ್ಲಿ ಭಾರತದ ಧ್ವಜಕ್ಕೆ ಮತ್ತೊಮ್ಮೆ ಅವಮಾನ; ತಲೆಕೆಳಗಾಗಿ ಹಾರಿದ ತ್ರಿವರ್ಣ! ವಿಡಿಯೋ

Champions Trophy Controversy: 2025ರ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಪಾಕಿಸ್ತಾನದ ಗಡಾಫಿ ಕ್ರೀಡಾಂಗಣದಲ್ಲಿ ಭಾರತದ ಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಸ್ಪಷ್ಟೀಕರಣವು ಸಾರ್ವಜನಿಕರನ್ನು ಮತ್ತಷ್ಟು ಕೆರಳಿಸಿದೆ. ಭಾರತದ ಎಲ್ಲಾ ಪಂದ್ಯಗಳು ಭದ್ರತಾ ಕಾರಣಗಳಿಂದ ದುಬೈಗೆ ಸ್ಥಳಾಂತರಗೊಂಡಿವೆ.

Champions Trophy 2025: ಪಾಕಿಸ್ತಾನದಲ್ಲಿ ಭಾರತದ ಧ್ವಜಕ್ಕೆ ಮತ್ತೊಮ್ಮೆ ಅವಮಾನ; ತಲೆಕೆಳಗಾಗಿ ಹಾರಿದ ತ್ರಿವರ್ಣ! ವಿಡಿಯೋ
ಚಾಂಪಿಯನ್ಸ್ ಟ್ರೋಫಿ
Follow us
ಪೃಥ್ವಿಶಂಕರ
|

Updated on:Feb 19, 2025 | 10:01 AM

2025 ರ ಚಾಂಪಿಯನ್ಸ್ ಟ್ರೋಫಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಆದರೆ ಆತಿಥೇಯ ಪಾಕಿಸ್ತಾನ ಮಾತ್ರ, ಭಾರತದ ವಿರುದ್ಧ ತನ್ನ ನೀಚ ಬುದ್ದಿಯನ್ನು ಪ್ರದರ್ಶಿಸುವುದನ್ನು ಇದುವರೆಗೂ ಕಡಿಮೆ ಮಾಡಿಲ್ಲ. ಕೆಲವು ದಿನಗಳ ಹಿಂದೆ ಈ ಪಂದ್ಯಾವಳಿಗೆ ಆತಿಥ್ಯ ನೀಡುತ್ತಿರುವ ಕರಾಚಿಯ ಗಡಾಫಿ ಕ್ರೀಡಾಂಗಣದ ಮೇಲ್ಛಾವಣಿಯ ಮೇಲೆ ಭಾರತದ ಧ್ವಜವನ್ನು ಹೊರತುಪಡಿಸಿ ಉಳಿದ 7 ತಂಡಗಳ ದೇಶದ ಧ್ವಜವನ್ನು ಹಾರಿಸಿತ್ತು. ಇದೀಗ ಪಾಕಿಸ್ತಾನದ ಗಡಾಫಿ ಕ್ರೀಡಾಂಗಣದ ಮತ್ತೊಂದು ವಿಡಿಯೋ ಹೊರಬಿದ್ದಿದ್ದು, ಇದರಲ್ಲಿ ಭಾರತದ ಧ್ವಜವನ್ನು ತಲೆಕೆಳಗಾಗಿ ಹಾರಿಸುತ್ತಿರುವುದನ್ನು ಕಾಣಬಹುದಾಗಿದೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಪಾಕಿಸ್ತಾನದ ಈ ನಡೆಗೆ ಎಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಮತ್ತೊಮ್ಮೆ ಭಾರತದ ಧ್ವಜಕ್ಕೆ ಅವಮಾನ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಗಡಾಫಿ ಕ್ರೀಡಾಂಗಣದಲ್ಲಿ ವ್ಯಕ್ತಿಯೊಬ್ಬ ಭಾರತದ ಧ್ವಜವನ್ನು ಹಾರಿಸುತ್ತಿರುವುದನ್ನು ಕಾಣಬಹುದು. ಆದರೆ ಈ ವ್ಯಕ್ತಿ ಭಾರತದ ಧ್ವಜವನ್ನು ತಲೆಕೆಳಗಾಗಿ ಹಾರಿಸಿದ್ದು, ಭಾರತೀಯರು ಕೆರಳುವಂತೆ ಮಾಡಿದೆ. ಈ ವಿಡಿಯೋದಲ್ಲಿ ಭಾರತವನ್ನು ಹೊರತುಪಡಿಸಿ, ಇತರ ದೇಶಗಳ ಧ್ವಜಗಳು ಸಹ ಗೋಚರಿಸುತ್ತವೆ, ಅವುಗಳನ್ನು ಸರಿಯಾದ ರೀತಿಯಲ್ಲಿ ಇರಿಸಲಾಗಿದೆ. ಆದರೆ ತ್ರಿವರ್ಣ ಧ್ವಜವನ್ನು ಮಾತ್ರ ತಪ್ಪಾಗಿ ಹಾರಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಉದ್ದೇಶಪೂರ್ವಕವಾಗಿ ಇಂತಹ ಕೃತ್ಯಗಳನ್ನು ಮಾಡುತ್ತಿದೆ ಎಂದು ಭಾರತೀಯರು ಆರೋಪಿಸುತ್ತಿದ್ದಾರೆ.

ಉಡಾಫೆಯ ಉತ್ತರ ನೀಡಿದ್ದ ಪಿಸಿಬಿ

ವಾಸ್ತವವಾಗಿ ಈ ಹಿಂದೆ ಗಡಾಫಿ ಕ್ರೀಡಾಂಗಣದಲ್ಲಿ ಭಾರತದ ಧ್ವಜ ಹಾರಿಸದಿರುವ ಬಗ್ಗೆ ಗದ್ದಲ ಉಂಟಾದಾಗ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಬಗ್ಗೆ ಸ್ಪಷ್ಟೀಕರಣವನ್ನು ನೀಡಿತ್ತು. ಇದರ ಹಿಂದಿನ ಕಾರಣವನ್ನು ವಿವರಿಸಿದ ಪಾಕ್ ಮಾಧ್ಯಮ, ‘2025 ರ ಚಾಂಪಿಯನ್ಸ್ ಟ್ರೋಫಿಯ ಪಂದ್ಯಗಳಲ್ಲಿ ಕೇವಲ ನಾಲ್ಕು ಧ್ವಜಗಳು ಮಾತ್ರ ಹಾರಿಸಬೇಕು ಎಂದು ಐಸಿಸಿ ಸೂಚಿಸಿತ್ತು. ಈ ನಾಲ್ಕು ಧ್ವಜಗಳಲ್ಲಿ ಒಂದು ಐಸಿಸಿಯದ್ದು, ಇನ್ನೊಂದು ಆತಿಥೇಯ ದೇಶದ್ದು ಹಾಗೂ ಉಳಿದ ಎರಡು ಧ್ವಜಗಳು ಯಾವ ತಂಡಗಳ ನಡುವೆ ಪಂದ್ಯ ನಡೆಯುತ್ತಿರುತ್ತದೊ ಆ ದೇಶಗಳದ್ದು ಎಂದು ಹೇಳಿಕೊಂಡಿತ್ತು. ಆದರೆ ಪಿಸಿಬಿಯ ಈ ಕಳಪೆ ವಿವರಣೆಯು ಇನ್ನಷ್ಟು ಗದ್ದಲವನ್ನು ಸೃಷ್ಟಿಸಿತ್ತು. ಏಕೆಂದರೆ ಕ್ರೀಡಾಂಗಣದಲ್ಲಿ 4 ಕ್ಕೂ ಹೆಚ್ಚು ಧ್ವಜಗಳನ್ನು ಹಾರಿಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ.

ದುಬೈನಲ್ಲಿ ಟೀಂ ಇಂಡಿಯಾ ಪಂದ್ಯಗಳು

ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿತ್ತು. ಇದಾದ ನಂತರ ಐಸಿಸಿ, ಟೀಂ ಇಂಡಿಯಾದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಿತು. ಈ ಟೂರ್ನಿಯಲ್ಲಿ ಭಾರತ ತಂಡ ಫೆಬ್ರವರಿ 20 ರಿಂದ ತನ್ನ ಅಭಿಯಾನ ಆರಂಭಿಸಲಿದೆ. ಮೊದಲ ಪಂದ್ಯ ಬಾಂಗ್ಲಾದೇಶ ವಿರುದ್ಧ ನಡೆಯಲಿದ್ದು ಇದರ ನಂತರ, ಭಾರತ ತಂಡವು ಫೆಬ್ರವರಿ 23 ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಬಳಿಕ ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Wed, 19 February 25

ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ