AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ತಂಡದಿಂದ 7 ಆಟಗಾರರು ಔಟ್..!

England vs Pakistan: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಪಾಕಿಸ್ತಾನf ಕ್ರಿಕೆಟ್ ಮಂಡಳಿ (PCB) ಇಡೀ ತಂಡಕ್ಕೇ ಬಿಗ್ ಶಾಕ್ ನೀಡಿದೆ. ಸರಣಿಯ ಮಧ್ಯದಲ್ಲೇ ಅರ್ಧ ತಂಡಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಕಳಪೆ ಪ್ರದರ್ಶನ ನೀಡಿದ 7 ಪ್ರಮುಖ ಆಟಗಾರರನ್ನು ತಂಡದಿಂದ ಗೇಟ್‌ಪಾಸ್ ನೀಡಿ ಮನೆಗೆ ಕಳುಹಿಸಲಾಗಿದೆ. 

ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ತಂಡದಿಂದ 7 ಆಟಗಾರರು ಔಟ್..!
Pakistan Image Credit source: PCB
ಝಾಹಿರ್ ಯೂಸುಫ್
|

Updated on:Sep 01, 2026 | 7:33 AM

Share

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಪಾಕ್ ತಂಡಕ್ಕೆ ಮೇಜರ್ ಸರ್ಜರಿ ಮಾಡಿದೆ. ಈ ಕಠಿಣ ಕ್ರಮದ ಭಾಗವಾಗಿ ತಂಡದ ಏಳು ಪ್ರಮುಖ ಆಟಗಾರರನ್ನು ಕೈಬಿಡಲಾಗಿದ್ದು, ಮುಖ್ಯ ತರಬೇತುದಾರ ಸೇರಿದಂತೆ ಇಡೀ ಕೋಚಿಂಗ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.

ಹೆಡಿಂಗ್ಲೆಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಮತ್ತು 103 ರನ್‌ಗಳ ಭಾರಿ ಸೋಲು ಹಾಗೂ ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ 194 ರನ್‌ಗಳ ಹೀನಾಯ ಸೋಲಿನ ಬೆನ್ನಲ್ಲೇ ಪಿಸಿಬಿ ಈ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಮೂರನೇ ಪಂದ್ಯಕ್ಕೂ ಮುನ್ನ ಪಾಕ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ.

ಹೊರಬಿದ್ದ ಆಟಗಾರರು ಯಾರೆಲ್ಲಾ?

ಆಗಸ್ಟ್ 31, 2026 ರಂದು ಹೊರಡಿಸಲಾದ ಅಧಿಕೃತ ಆದೇಶದ ಪ್ರಕಾರ, ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ತಕ್ಷಣವೇ ಪ್ರವಾಸದಿಂದ ಮುಕ್ತಗೊಳಿಸಿ ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಲಾಗಿದೆ. ಅದರಂತೆ ಪಾಕ್ ತಂಡದಿಂದ ಹೊರಬಿದ್ದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  • ಮೊಹಮ್ಮದ್ ರಿಝ್ವಾನ್
  • ಇಮಾಮ್-ಉಲ್-ಹಕ್
  • ಸಲ್ಮಾನ್ ಅಲಿ ಅಘಾ
  • ಅಲಿ ಉಸ್ಮಾನ್
  • ಅಮೀರ್ ಜಮಾಲ್ಮು
  • ಹಮ್ಮದ್ ಅವೈಸ್ ಜಫರ್
  • ಖುರ್ರಮ್ ಶಹಜಾದ್.

ವಜಾಗೊಂಡ ಕೋಚಿಂಗ್ ಸಿಬ್ಬಂದಿ: ಮುಖ್ಯ ಕೋಚ್ ಸರ್ಫರಾಝ್ ಅಹ್ಮದ್ ಮತ್ತು ಬೌಲಿಂಗ್ ಕೋಚ್ ಉಮರ್ ಗುಲ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ಹೊಸ ಕೋಚ್ ಯಾರು?

ಸೆಪ್ಟೆಂಬರ್ 9 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಹೊಸ ಆಡಳಿತ ಮಂಡಳಿ ಮತ್ತು ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಹೊಸ ಕೋಚ್: ಸದ್ಯ ವೈಟ್-ಬಾಲ್ ಕೋಚ್ ಆಗಿರುವ ಮೈಕ್ ಹೆಸನ್ ಅವರಿಗೆ ಟೆಸ್ಟ್ ತಂಡದ ಮುಖ್ಯ ಕೋಚ್ ಜವಾಬ್ದಾರಿಯನ್ನೂ ನೀಡಲಾಗಿದೆ. ಆಸ್ಟ್ರೇಲಿಯಾದ ಮಾಜಿ ವೇಗಿ ಆಶ್ಲೇ ನಾಫ್ಕೆ ನೂತನ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಇನ್ನು ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಆಯ್ಕೆಯಾದ ಹೊಸ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  • ಸೈಮ್ ಅಯೂಬ್
  • ಅಬ್ದುಲ್ಲಾ ಫಝಲ್
  • ಅರಾಫತ್ ಮಿನ್ಹಾಸ್
  • ಸಾದ್ ಬೇಗ್
  • ಮೊಹಮ್ಮದ್ ಇಮ್ರಾನ್
  • ರಝಾವುಲ್ಲಾ ಖಾನ್
  • ಮೊಹಮ್ಮದ್ ಇಮ್ರಾನ್ ಜೂನಿಯರ್.

ಇದನ್ನೂ ಓದಿ: ಟೀಮ್ ಇಂಡಿಯಾದ ಮುಂದಿನ ಸರಣಿ ಯಾವಾಗ? ಯಾರ ವಿರುದ್ಧ?

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಈಗಾಗಲೇ 0-2 ಅಂತರದಿಂದ ಸೋತಿರುವ ಪಾಕಿಸ್ತಾನ್ ತಂಡಕ್ಕೆ, ಈ ಆಕಸ್ಮಿಕ ಬದಲಾವಣೆಗಳು ಕೊನೆಯ ಪಂದ್ಯದಲ್ಲಿ ಮಾನ ಉಳಿಸಿಕೊಳ್ಳಲು ಸಹಾಯ ಮಾಡುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.

Published On - 7:31 am, Tue, 1 September 26

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್